Deepavali 2023 Special Buses: ದೀಪಾವಳಿ ಹಬ್ಬಕ್ಕೆ ವಾಯವ್ಯ ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್, ಇಲ್ಲಿದೆ ವಿವರ

Deepavali 2023 Special Buses: ಹುಬ್ಬಳ್ಳಿ, ನವೆಂಬರ್‌ 04 : ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ರಾಜ್ಯದ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಹಾಗೂ ಹಬ್ಬ ಮುಗಿಸಿಕೊಂಡು ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.

ನವೆಂಬರ್ 11ರಂದು ವಾರಾಂತ್ಯ ಶನಿವಾರ, 12 ರಂದು ಭಾನುವಾರ , ನರಕ ಚತುರ್ದಶಿ, 13 ರಂದು ಸೋಮವಾರ ಅಮವಾಸೆ, ಲಕ್ಷ್ಮೀ ಪೂಜೆ ಹಾಗೂ 14ರಂದು ಮಂಗಳವಾರ ಬಲಿಪಾಡ್ಯಮಿ ಇದೆ. ಹಬ್ಬ ಆಚರಿಸಲು ನವೆಂಬರ್ 10ರಂದು ಶುಕ್ರವಾರ ಮತ್ತು 11 ರಂದು ಶನಿವಾರ ಬೆಂಗಳೂರು, ಮಂಗಳೂರು,ಗೋವಾ, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯದ ಮತ್ತು ನೆರೆಯ ರಾಜ್ಯಗಳ ವಿವಿಧ ಭಾಗಗಳಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸ್ವಂತ ಊರುಗಳಿಗೆ ಬರುವ ನಿರೀಕ್ಷೆ ಇದೆ.

Deepavali 2023: More Than 500 Special Buses From Northwest Transport Corporation For Deepavali Festival

ಹಬ್ಬಕ್ಕೆ ಆಗಮಿಸುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ನ.10 ಹಾಗೂ11ರಂದು ಬೆಂಗಳೂರು, ಮಂಗಳೂರು,ಪುಣೆ, ಗೋವಾ ಮತ್ತಿತರ ಸ್ಥಳಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ,ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಇದಕ್ಕಾಗಿ ಮಲ್ಟಿ ಅ್ಯಕ್ಸಲ್ ವೋಲ್ವೊ, ಸ್ಲೀಪರ್, ರಾಜಹಂಸ ಮುಂತಾದ 50 ಪ್ರತಿಷ್ಟಿತ ಐಶಾರಾಮಿ ಬಸ್ಸುಗಳು ಹಾಗೂ 200 ವೇಗದೂತ ಸಾರಿಗೆಗಳು ಸೇರಿದಂತೆ 250ಕ್ಕೂ ಹೆಚ್ಚು ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಅಲ್ಲದೇ ಸ್ಥಳೀಯ ಬಸ್ ನಿಲ್ದಾಣಗಳಿಂದ ಜಿಲ್ಲೆಯೊಳಗೆ ಹಾಗೂ ನೆರೆಯ ಜಿಲ್ಲೆಗಳಿಗೆ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಹೆಚ್ಚುವರಿ ಬಸ್ ಗಳನ್ನು ಓಡಿಸಲಾಗುತ್ತದೆ.

Deepavali 2023: More Than 500 Special Buses From Northwest Transport Corporation For Deepavali Festival

ಅದೇ ರೀತಿ ಹಬ್ಬ ಮುಗಿಸಿಕೊಂಡು ಸ್ವಂತ ಊರುಗಳಿಂದ ಹಿಂದಿರುವ ಪ್ರಯಾಣಿಕರ ಅನುಕೂಲಕ್ಕಾಗಿ ನ. 15 ರಿಂದ 19ರವರೆಗೆ ಸಂಸ್ಥೆಯ ವ್ಯಾಪ್ತಿಯ ಪ್ರಮುಖ ಬಸ್ ನಿಲ್ದಾಣಗಳಿಂದ ಬೆಂಗಳೂರು, ಮಂಗಳೂರು, ಗೋವಾ, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯದ ಮತ್ತು ನೆರೆಯ ರಾಜ್ಯಗಳ ಪ್ರಮುಖ ಸ್ಥಳಗಳಿಗೆ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ 250ಕ್ಕೂ ಹೆಚ್ಚು ವಿಶೇಷ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಮುಂಗಡ ಬುಕ್ಕಿಂಗ್ ಮತ್ತು ರಿಯಾಯಿತಿ

ಸಂಸ್ಥೆಯ ವೆಬ್ ಸೈಟ್ www.ksrtc.in ಅಥವಾ KSRTC Mobile App, ಪ್ರಮುಖ ಬಸ್ ನಿಲ್ದಾಣಗಳಲ್ಲಿರುವ ಟಿಕೆಟ್ ಬುಕ್ಕಿಂಗ್ ಕೌಂಟರ್‌ಗಳು ಹಾಗೂ ಖಾಸಗಿ ಫ್ರಾಂಚೈಸಿ ಕೌಂಟರ್‌ಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ನಾಲ್ಕು ಅಥವ ಹೆಚ್ಚು ಆಸನಗಳನ್ನು ಒಂದೇ ಟಿಕೆಟ್‌ನಲ್ಲಿ ಕಾಯ್ದಿರಿಸಿದರೆ ಪ್ರಯಾಣದರದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಹಾಗೂ ಬರುವ ಪ್ರಯಾಣಕ್ಕೆ ಒಂದೇ ಟಿಕೆಟ್ ಪಡೆದರೆ ಹಿಂದಿರುಗುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುತ್ತದೆ. ಕೊನೆಯ ಕ್ಷಣದ ರಷ್‌ನಿಂದ ತಪ್ಪಿಸಿಕೊಳ್ಳಲು ಕೂಡಲೇ ಮುಂಗಡ ಬುಕ್ಕಿಂಗ್ ಮಾಡಿಕೊಳ್ಳುವುದು ಸೂಕ್ತ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+