ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಲ್ಪಸಂಖ್ಯಾತ ಇಲಾಖೆಯ ಯೋಜನೆಗಳ ಜಾಗೃತಿ ಮೂಡಿಸಿ: ಧಾರವಾಡ ಡಿಸಿ

|
Google Oneindia Kannada News

ಧಾರವಾಡ, ಸೆ.28: ಅಲ್ಪಸಂಖ್ಯಾತ ಸಮುದಾಯಗಳಲ್ಲಿ ವಿವಿಧ ಇಲಾಖೆಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತು ತಿಳುವಳಿಕೆ ಹಾಗೂ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿಯಮಾನುಸಾರ ರೂಪಿಸಿರುವ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಉತ್ತಮ ಪ್ರಗತಿಯಾಗಿದ್ದು, ಈ ಬಗ್ಗೆ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನದ ಮೊದಲ ಹಾಗೂ ಎರಡನೇಯ ತ್ರೈಮಾಸಿಕ ಅವಧಿಯ ಪ್ರಗತಿ ಪರಿಶೀಲನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ್ದಾರೆ.

'ಪ್ರತಿ ಇಲಾಖೆಗಳು ತಮಗೆ ಬರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನವನ್ನು ಸರ್ಕಾರ ನಿಗದಿಪಡಿಸಿರುವ ನಿಯಮಗಳ ಅನುಸಾರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಪ್ರತ್ಯೇಕಿಸಿ, ಮೀಸಲಿಡಬೇಕು. ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಹಂತದಲ್ಲಿ ಸರ್ಕಾರಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ತಿಳುವಳಿಕೆ ಮತ್ತು ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು' ಎಂದು ಸೂಚಿಸಿದ್ದಾರೆ.

ಅರ್ಹರಿಗೆ ಯೋಜನೆಯ ಲಾಭ ಮುಟ್ಟಿಸಲು ಪ್ರಯತ್ನಿಸಿ

ಅರ್ಹರಿಗೆ ಯೋಜನೆಯ ಲಾಭ ಮುಟ್ಟಿಸಲು ಪ್ರಯತ್ನಿಸಿ

ಸರ್ಕಾರಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ತಿಳುವಳಿಕೆ ಮತ್ತು ಜಾಗೃತಿ ಮೂಡಿಸಿ ಎಂದಿರುವ ಜಿಲ್ಲಾಧಿಕಾರಿ, ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಯೋಜನೆಗಳ ಲಾಭವನ್ನು ಮುಟ್ಟಿಸಲು ಪ್ರಯತ್ನಿಸಬೇಕು. ಆ ಮೂಲಕ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಇಲಾಖೆಯಡಿ ಇರುವ ವಿದ್ಯಾರ್ಥಿನಿಲಯಗಳ ಕಟ್ಟಡಕ್ಕೆ ಸ್ಥಳದ ಅಗತ್ಯವಿದ್ದಲ್ಲಿ, ಇಲಾಖೆಯಿಂದ ಹುಡಾಗೆ ಅರ್ಜಿ ಸಲ್ಲಿಸಬೇಕು. ಅಲ್ಪಸಂಖ್ಯಾತರ ಇಲಾಖೆಯ ವಸತಿ ನಿಲಯ ಹಾಗೂ ವಿದ್ಯಾರ್ಥಿ ನಿಲಯಗಳಿಗೆ ಉತ್ತಮವಾದ ಮೂಲಸೌಕರ್ಯಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಯಾವುದೇ ದೂರು ಬರದಂತೆ ಅಧಿಕಾರಿಗಳು ಕ್ರಮವಹಿಸಬೇಕು

ಯಾವುದೇ ದೂರು ಬರದಂತೆ ಅಧಿಕಾರಿಗಳು ಕ್ರಮವಹಿಸಬೇಕು

ಸರ್ಕಾರದಿಂದ ಜಿಲ್ಲಾಮಟ್ಟದ ಸಮಿತಿಗೆ ನೇಮಕವಾದ ಜನಪ್ರತಿನಿಧಿಗಳು ತಮ್ಮ ಕಚೇರಿಗೆ ಬಂದು ಇಲಾಖೆಯಿಂದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕೈಗೊಂಡ ಕಾರ್ಯಕ್ರಮಗಳ ಕುರಿತು ಮಾಹಿತಿ ಕೇಳಿದಾಗ ಸಮಗ್ರ ಮಾಹಿತಿ ನೀಡಬೇಕು. ಈ ಕುರಿತು ಯಾವುದೇ ಸಮಿತಿಗಳ ಸದಸ್ಯರ ದೂರು ಬರದಂತೆ ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಅಧಿಕಾರಿಗಳು ಕ್ರಿಯಾಯೋಜನೆ ಅನುಸಾರ ಕ್ರಮ ಕೈಗೊಳ್ಳಬೇಕು

ಅಧಿಕಾರಿಗಳು ಕ್ರಿಯಾಯೋಜನೆ ಅನುಸಾರ ಕ್ರಮ ಕೈಗೊಳ್ಳಬೇಕು

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಮಾತನಾಡಿ, "ಸರ್ಕಾರದಿಂದ ಬಿಡುಗಡೆ ಆಗುವ ಅನುದಾನಕ್ಕೆ ಅನುಗುಣವಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಅಧಿಕಾರಿಗಳು ಕ್ರಿಯಾಯೋಜನೆ ಅನುಸಾರ ಕ್ರಮ ಕೈಗೊಳ್ಳಬೇಕು" ಎಂದು ಸೂಚಿಸಿದ್ದಾರೆ.

ಮುಂದುವರಿದು, "ನರೇಗಾ ಯೋಜನೆಯಡಿ ರೇಷ್ಮೇ ಇಲಾಖೆಯಿಂದ ನರ್ಸರಿಯಲ್ಲಿ ರೇಷ್ಮೇ ಸಸಿಗಳನ್ನು ಬೆಳೆಯಲಾಗಿದೆ. ಆದರೆ ಅರ್ಹ ರೈತರಿಗೆ ಸಕಾಲಕ್ಕೆ ವಿತರಿಸದೇ ಬಹುದಿನಗಳಿಂದ ಇಡಲಾಗಿದೆ. ಅವುಗಳನ್ನು ಅರ್ಹರಿಗೆ ಶೀಘ್ರದಲ್ಲಿ ವಿತರಿಸದಿದ್ದರೆ ಅಧಿಕಾರಿಗಳಿಂದಲೇ ಅದರ ವೆಚ್ಚ ಭರಿಸಲು ಕ್ರಮಕೈಗೊಳ್ಳಲಾಗುವುದು" ಎಂದು ಎಚ್ಚರಿಸಿದ್ದಾರೆ.

ಸರ್ಕಾರದ ಅನುದಾನದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅನುದಾನ

ಸರ್ಕಾರದ ಅನುದಾನದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅನುದಾನ

ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಜಿಲ್ಲಾ ಸಮಿತಿಯ ಪ್ರಮುಖರೆಲ್ಲರೂ, ಸರ್ಕಾರಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ತಿಳುವಳಿಕೆ ಮತ್ತು ಜಾಗೃತಿ ಮೂಡಿಸಿ ಅರ್ಹ ಫಲಾನುಭವಿಗಳಿಗೆ ಸರ್ಕಾರಿ ಯೋಜನೆಗಳ ಲಾಭವನ್ನು ಮುಟ್ಟಿಸಲು ಪ್ರಯತ್ನಿಸಬೇಕು ಎಂದುದ ಅಭಿಪ್ರಾಯ ಪಟ್ಟಿದ್ದಾರೆ.


ಈ ವೇಳೆ ವಿವಿಧ ಇಲಾಖೆಗಳ ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ವೆಚ್ಚ ಮಾಡಿರುವ ಅನುದಾನ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ವರದಿ ಮಂಡಿಸಿದ್ದಾರೆ.

English summary
Give priority to deliver projects of Minority Welfare Department to the beneficiaries says dharwad District Collector Gurudatta Hegde. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X