ಈದ್ಗಾದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಪಟ್ಟು: ಇಂದು ಧಾರವಾಡ ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ
ಹುಬ್ಬಳ್ಳಿ, ಸೆಪ್ಟೆಂಬರ್, 15: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಈ ವರ್ಷ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲು ವಿಳಂಬವಾಗುತ್ತಿದೆಯೆಂದು ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಪಾಲಿಕೆಯ ಬಿಜೆಪಿ ಸದಸ್ಯರು ಪಾಲಿಕೆ ಆಯುಕ್ತರ ಕಚೇರಿಯಲ್ಲಿ ಠಿಕಾಣಿ ಹೂಡಿ ಅಹೋರಾತ್ರಿ ಧರಣಿ ನಡೆಸಿದರು. ಮತ್ತೊಂದೆಡೆ ಇಂದು ಧಾರವಾಡ ಹೈಕೋರ್ಟ್‌ನಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ವಿರೋಧಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ತೀರ್ಪಿನತ್ತ ನೆಟ್ಟಿದೆ.
ಅರವಿಂದ ಬೆಲ್ಲದ್ ಸೇರಿದಂತೆ ಪಾಲಿಕೆ ಬಿಜೆಪಿ ಸದಸ್ಯರು ಗಣೇಶ ಮೂರ್ತಿ ಇಡಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿ ಗುರುವಾರ ರಾತ್ರಿಯೆಲ್ಲ ಪಾಲಕೆ ಆವರಣದಲ್ಲೇ ಠಿಕಾಣಿ ಹೋಡಿದ್ದಾರೆ.

ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆ ಧಾರವಾಡ ಹೈಕೋರ್ಟ್‌ನಲ್ಲಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ವಿರೋಧಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇದರೊಂದಿಗೆ ಹಕ್ಕು ಚ್ಯುತಿ ಪ್ರಶ್ನೆ ಮಾಡಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಸುವರ್ಣ ಕಲಗುಂಟ್ಲಾ ಅವರಿಂದ ಮತ್ತೊಂದು ಅರ್ಜಿ ಸಲ್ಲಿಕೆ ಮಾಡಿದ್ದು, ಈ ಅರ್ಜಿಯೂ ವಿಚಾರಣೆಗೆ ಬರಲಿದೆ.
ಇನ್ನು ಗುರುವಾರ ಮಧ್ಯಾಹ್ನದಿಂದ ಧರಣಿ ಆರಂಭಿಸಿ ರಾತ್ರಿಯೂ ಮುಂದುವರಿಸಿದ್ದು, ಶುಕ್ರವಾರವೋ ಸಹ ಈ ಧರಣಿ ಮುಂದುವರೆದಿದೆ. ಐತಿಹಾಸಿಕ ಹಾಗೂ ವಿವಾದಾತ್ಮಕ ಈದ್ಗಾ ಮೈದಾನದಲ್ಲಿ ಕಳೆದ ವರ್ಷದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ತಕ್ಷಣ ಅನುಮತಿ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಧರಣಿ ನಿರತರೊಂದಿಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಚರ್ಚೆ ನಡೆಸಿದರೂ, ಧರಣಿ ನಿರತರು ಪಟ್ಟು ಸಡಿಸಲಿಲ್ಲ.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಒಡೆತನದ ಈದ್ಗಾ ಮೈದಾನದಲ್ಲಿ ಕಳೆದ ವರ್ಷ ಮೂರು ದಿನಗಳ ಕಾಲ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಈ ಬಾರಿಯೂ ಮೂರು ದಿನಗಳ ಗಣೇಶ ಹಬ್ಬ ಆಚರಣೆಗೆ ಪಾಲಿಕೆಯ ಸಾಮಾನ್ಯ ಸಭೆ (ಆಗಸ್ಟ್ 31)ಯಲ್ಲಿ ಠರಾವು ಸ್ವೀಕರಿಸಲಾಗಿದೆ. ಆದರೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಅವರು ಅನುಮತಿ ನೀಡದಿರುವುದನ್ನು ಖಂಡಿಸಿ ಪಾಲಿಕೆಯ ಭಾರತೀಯ ಜನತಾ ಪಕ್ಷದ ಸದಸ್ಯರು, ಕಾರ್ಯಕರ್ತರು ಹೋರಾಟಕ್ಕೆ ಇಳಿದಿದ್ದಾರೆ.
ಗುರುವಾರ ಸಂಜೆ ಆಯುಕ್ತರ ಕಚೇರಿ ಎದುರು ಭಜನೆ ಸಹ ನಡೆಸಿದರು. ಧರಣಿ ನಿರತರು ಅಲ್ಲಿಯೇ ಮಧ್ಯಾಹ್ನದ ಊಟ, ರಾತ್ರಿ ಭೋಜನ ಸೇವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಜ ಅರವಿಂದ ಬೆಲ್ಲದ, ಈ ರಾದ್ಧಾಂತಕ್ಕೆ ರಾಜ್ಯ ಸರ್ಕಾರವೇ ಕಾರಣವಾಗಿದೆ. ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅನುಮತಿ ಕೊಟ್ಟರೂ ಮಾಡುತ್ತೇವೆ. ಅನುಮತಿ ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ಮಾಡುತ್ತೇವೆ ಎಂದರು.
ಕೋರ್ಟ್ ಸ್ಪಷ್ಟವಾಗಿಯೇ ಹೇಳಿದ್ದರೂ ಕೂಡ ಅನುಮತಿ ನೀಡಲು ಅವಕಾಶವಿದೆ. ಹೀಗಿದ್ದರೂ ಅನುಮತಿ ನೀಡಲು ಹಿಂದೇಟು ಹಾಕುತ್ತಿರುವುದು ಹಿಂದೂಗಳ ಭಾವನೆಗೆ ಧಕ್ಕೆಯನ್ನುಂಟು ಮಾಡುತ್ತಿದೆ. ಇಂತಹ ಜನವಿರೋಧಿ ನೀತಿಯನ್ನು ಕೈ ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅವಕಾಶ ಕೊಟ್ಟರೇ ಮಾಡುತ್ತೇವೆ. ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ತೀರುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕ ಆವರಣದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ದಲಿತ ಪರ ಸಂಘಗಳು ಸೇರಿ 24 ಸಂಘಟನೆಗಳು ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿರೋಧ ವ್ಯಕ್ತಪಡಿಸಿ ಮನವಿ ಸಲ್ಲಿಸಿವೆ. ಹಾಗಾದರೆ ಇದು ಇಂದು ಯಾವ ತಿರುವು ಪಡೆದುಕೊಳ್ಳಲಿದೆ ಎಂದು ಕಾದುನೋಡಬೇಕಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications