ಕರ್ತವ್ಯಲೋಪ: ದ್ವಿತೀಯ ದರ್ಜೆ ಸಹಾಯಕ ಅಧಿಕಾರಿಯನ್ನು ಅಮಾನತ್ತುಗೊಳಿಸಿ ಧಾರವಾಡ ಡಿಸಿ ಆದೇಶ

ಧಾರವಾಡ, ಡಿಸೆಂಬರ್‌, 06: ಧಾರವಾಡ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ದ್ವಿತೀಯ ದರ್ಜೆ ಸಹಾಯಕ ಅಧಿಕಾರಿ ಸಚಿನ್ ನಾಯ್ಕ್ ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿ ಜಿಲ್ಲಾಧಿಕಾರಿ ಗುರುದತ್‌ ಹೆಗಡೆ ಆದೇಶ ಹೊರಡಿಸಿದ್ದಾರೆ.

ಸಚಿನ್ ನಾಯ್ಕ್ ಅವರು, ಮತದಾರರ ಪಟ್ಟಿ ವಿಶೇಷ ಸಂಕ್ಷೀಪ್ತ ಪರಿಷ್ಕರಣೆ, ಮನೆ ಮನೆ ಸಮೀಕ್ಷೆ ಕಾರ್ಯದಲ್ಲಿ ಬೇಜವಾಬ್ದಾರಿತನ ತೋರಿದ್ದಾರೆ. ಅಲ್ಲದೇ ಮತದಾರರ ಪಟ್ಟಿಯ ನೋಂದಣಿಯ ವಿಶೇಷ ಅಭಿಯಾನದಡಿಯಲ್ಲಿ ಕರ್ತವ್ಯಕ್ಕೆ ಹಾಜರಾಗದೇ ಗೈರು ಹಾಜರಾಗಿ ದೂರವಾಣಿಯಲ್ಲಿ ಸುಳ್ಳು ಸಬೂಬುಗಳನ್ನು ಹೇಳಿದ್ದಾರೆ. ಆದ್ದರಿಂದ ಅವರ ಮೇಲೆ ಪ್ರಜಾಪ್ರಾತಿನಿಧ್ಯ ಕಾಯ್ದೆ 1980ರನ್ವಯ ಶಿಸ್ತು ಕ್ರಮ ಕೈಗೊಳ್ಳುವಂತೆ ಸಹಾಯಕ ಮತದಾರರ ನೋಂದಣಾಧಿಕಾರಿಗಳು ವರದಿ ಸಲ್ಲಿಸಿದ್ದರು.

ಸಚಿನ್ ನಾಯ್ಕ್ ಅವರು ಮತಗಟ್ಟೆ ಮಟ್ಟದ ಅಧಿಕಾರಿಯ ಕೆಲಸ ನಿರ್ವಹಿಸದೇ ಬೇಜವಾಬ್ದಾರಿಯಿಂದ ವರ್ತಿಸಿ ಕರ್ತವ್ಯಲೋಪ ಎಸಗಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ. ಆದ್ದರಿಂದ ಸಕ್ಷಮ ಪ್ರಾಧಿಕಾರದಿಂದ ಇಲಾಖಾ ವಿಚಾರಣೆ ಬಾಕಿ ಇರಿಸಿ, ಸರ್ಕಾರಿ ಸೇವೆಯಿಂದ ತಕ್ಷಣದಿಂದ ಅಮಾನತ್ತುಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Dereliction of duty: Dharwad Deputy Commissiner order suspension of SDA officer

ಕಾನೂನು ಬಾಹಿರವಾಗಿ ಕೆಲಸದಿಂದ ವಜಾ
ಕಾನೂನು ಬಾಹಿರವಾಗಿ ಕೆಲಸದಿಂದ ತೆಗೆದು ಹಾಕಿರುವುದನ್ನು ಖಂಡಿಸಿ ಪೌರ ಕಾರ್ಮಿಕರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿ ನಡೆಸಿದ ಪೌರಕಾರ್ಮಿಕರು, ತಮ್ಮ ಕಷ್ಟಗಳನ್ನು ಹೇಳಿಕೊಳ್ಳುತ್ತಲೇ ಕಣ್ಣೀರಿಟ್ಟಿದ್ದಾರೆ. ರಾಧಾ ಬಾಗಲವಾಡ, ದ್ಯಾಮವ್ವ ಗಬ್ಬೂರ, ರೇಣವ್ವ ನಾಗರಾಳ, ಲಕ್ಷ್ಮವ್ವ ಚಟಗೇರಿ, ಲಕ್ಷ್ಮೀ ಗೋಕಾಕ, ಯಲ್ಲಪ್ಪ ಪಾಳೆ ಪೌರ ಕಾರ್ಮಿಕರು ಕಣ್ಣೀರು ಹಾಕಿದರು. ನಮ್ಮನ್ನು ಕಾನೂನು ಬಾಹಿರವಾಗಿ ಕೆಲಸದಿಂದ ತೆಗೆದು ಹಾಕಲಾಗಿದೆ. ನಾವು ಏನು ತಪ್ಪು ಮಾಡಿದ್ದೇವೆ? ಎಂದು ಪ್ರಶ್ನಿಸುವ ಮೂಲಕ ಪೌರ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ವಾರ್ಡ ನಂಬರ್ 70ರಲ್ಲಿ ಸ್ವಚ್ಛತಾ ಕೆಲಸ ಮಾಡುವ ಈ ಗುತ್ತಿಗೆ ಪೌರ ಕಾರ್ಮಿಕರು, ಗುತ್ತಿಗೆದಾರ ವೆಂಕಟೇಶ್ ಮೊರಬದ ಅನ್ಯಾಯ ಮಾಡಿದ್ದಾನೆ ಎಂದು ಆರೋಪ ಮಾಡಿದರು.

Dereliction of duty: Dharwad Deputy Commissiner order suspension of SDA officer

ವೇತನದಲ್ಲಿ 4,500 ರೂ. ವಾಪಸ್, ಆರೋಪ
ನಮಗೆ ಮಾಸಿಕ 9,500 ರೂಪಾಯಿ ವೇತನ ನೀಡಿ 4,500 ರೂಪಾಯಿ ವಾಪಸ್ ಪಡೆಯುತ್ತಿದ್ದರು ಎಂದು ಆರೋಪಿಸಿದರು. ಇನ್ನು ಪಾಲಿಕೆ ಬಿಲ್ ಪಾವತಿಸಿದರೂ ಕೂಡ ಎರಡು ತಿಂಗಳಿಂದ ವೇತನ ಕೊಟ್ಟಿಲ್ಲ. ಪೌರಕಾರ್ಮಿಕರ ಬ್ಯಾಂಕ್ ಪಾಸ್‌ಬುಕ್‌, ಎಟಿಎಂ ಕಾರ್ಡ್, ಇಎಸ್‌ಐ, ಇಪಿಎಫ್ ಕಾರ್ಡುಗಳು ಹಾಗೂ ಸರ್ವಿಸ್ ಲೇಟರ್ ನೀಡಿಲ್ಲ ಎಂದು ಅಳಲು ತೋಡಿಕೊಂಡರು. ಇದನ್ನು ಪ್ರಶ್ನಿಸಿದ್ದರೆ ಧಮ್ಕಿ ಹಾಕಿ ಕೆಲಸದಿಂದ ತೆಗೆದುಹಾಕಿದ್ದಾರೆ. ಮಹನಾಗರ ಪಾಲಿಕೆ ಕೂಡಲೆ ನಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಸಾಮೂಹಿಕವಾಗಿ ವಿಷ ಸೇವನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+