ಧಾರವಾಡ; ಮತದಾನಕ್ಕೆ ಸಿದ್ಧತೆ, ಒಟ್ಟು 15,23,080 ಮತದಾರರು

ಧಾರವಾಡ, ಮೇ 06; ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಧಾರವಾಡ ಜಿಲ್ಲೆ ಸಿದ್ಧವಾಗಿದೆ. ಮೇ 10ರ ಬುಧವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಒಟ್ಟು 15,23,080 ಮತದಾರರು ಹಕ್ಕು ಚಲಾವಣೆ ಮಾಡಲಿದ್ದು, 1,642 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ.

ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ, ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತದಾನದ ಕುರಿತು ಮಾಹಿತಿ ನೀಡಿದರು. ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರಗಳಲ್ಲಿ ಮೇ10 ರಂದು ಮತದಾನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣಾ ಕರ್ತವ್ಯಕ್ಕಾಗಿ 8,319 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅಗತ್ಯ ತರಬೇತಿ ನೀಡಿ ನಿಯೋಜಿಸಲಾಗಿದೆ ಎಂದರು.

Dharwad All Set For Assembly Election Voting On May 10

ಜಿಲ್ಲೆಯಲ್ಲಿ 7,65,160 ಪುರುಷ ಮತದಾರರು ಮತ್ತು 7,57,831 ಮಹಿಳಾ ಮತದಾರರು ಮತ್ತು 89 ಇತರೆ ಮತದಾರರು ಸೇರಿ ಒಟ್ಟು 15,23,080 ಮತದಾರರು ಈ ಬಾರಿ ಹಕ್ಕು ಚಲಾಯಿಸಲಿದ್ದಾರೆ. ಇದರಲ್ಲಿ 31,934 ಯುವ ಮತದಾರರು ಪ್ರಥಮ ಬಾರಿಗೆ ಮತದಾನ ಮಾಡಲಿದ್ದಾರೆ.

ವೋಟರ್ ಸ್ಲಿಪ್ ವಿತರಣೆ; ಮತದಾರನ ಹೆಸರು, ಕ್ರಮಸಂಖ್ಯೆ, ಮತಗಟ್ಟೆ ವಿವರ ಇರುವ 12,37,665 ವೋಟರ್ ಸ್ಲೀಪ್ (Voter slip) ಗಳನ್ನು ಮತ್ತು ಮತದಾನದ ಸ್ಥಳ ಹಾಗೂ ಇತರ ವಿವರ ಇರುವ 2,82,711 ವೋಟರ್ ಗೈಡ್ (Voter Guide) ವಿತರಿಸಲಾಗಿದೆ. ಬಾಕಿ ಇರುವ ವೋಟರ್ ಸ್ಲೀಪ್ ಮತ್ತು ವೋಟರ್ ಗೈಡ್ ವಿತರಣಾ ಕಾರ್ಯ ಜಿಲ್ಲೆಯಲ್ಲಿ ಪ್ರಗತಿಯಲ್ಲಿದೆ.

Dharwad All Set For Assembly Election Voting On May 10

ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರು ಮನೆಯಿಂದ ಮತದಾನ ಮಾಡಲು ವ್ಯವಸ್ಥೆ ಮಾಡಲಾಗಿತ್ತು. 80 ವರ್ಷ ಮೇಲ್ಪಟ್ಟ 1,686 ಮತದಾರರ ಪೈಕಿ 1,615 ಮತದಾರರು ಮತದಾನ ಮಾಡಿದ್ದಾರೆ ಹಾಗೂ ವಿಕಲಚೇತನರು 392 ಮತದಾರರ ಪೈಕಿ 383 ಜನ ಮತದಾನ ಮಾಡಿದ್ದಾರೆ.

ಅಗತ್ಯ ಸೇವಾ (Essential Service) ಮತದಾರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಆಯಾ ವಿಧಾನಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಮತದಾನ ಸಹಾಯ ಕೇಂದ್ರ ತೆರೆಯಲಾಗಿತ್ತು. ಒಟ್ಟು 182 ಅಗತ್ಯ ಸೇವೆ ಮತದಾರರು ಅಂಚೆ ಮತಪತ್ರಗಳ ಮೂಲಕ ಮತದಾನ ಮಾಡಿದ್ದಾರೆ.

ಮತದಾನಕ್ಕೆ ಪೂರ್ವದ 48 ಗಂಟೆ ಅವಧಿಯಿಂದ ಅಂದರೆ ದಿನಾಂಕ 8/5/2023ರ ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರ ಅಂತ್ಯಗೊಳ್ಳುತ್ತದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಆಯಾ ಮತಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷದ ಮುಖಂಡರು, ಕಾರ್ಯಕರ್ತರು, ಪ್ರಚಾರಕರು ಆ ಮತಕ್ಷೇತ್ರದಲ್ಲಿ ಇರುವಂತಿಲ್ಲ. ಜಿಲ್ಲೆಯ ಎಲ್ಲ ಲಾಡ್ಜ್, ವಸತಿಗೃಹ, ಕಲ್ಯಾಣ ಮಂಟಪಗಳಿಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.

ನಿಷೇಧಾಜ್ಞೆ ಜಾರಿ; ಶಾಂತಿಯುತ ಮತದಾನಕ್ಕಾಗಿ ಮೇ 8ರ ಸಂಜೆ 5 ಗಂಟೆಯಿಂದ ಮೇ 11ರ ಬೆಳಗ್ಗೆ 6 ಗಂಟೆಯವರೆಗೆ ಮತ್ತು ಮೇ 13ರ ಬೆಳಗ್ಗೆ 6 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆಯವರೆಗೆ ಮತ ಎಣಿಕೆ ದಿನಗಳಂದು ಶುಷ್ಕ ದಿನ (Dry Day) ಎಂದು ಆದೇಶವನ್ನು ಹೊರಡಿಸಲಾಗಿದೆ.

ಈ ಅವಧಿಯಲ್ಲಿ ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಹಾಗೂ ಮದ್ಯ ತಯಾರಿಕೆ, ಬಾರ್, ದೇಸಿಯ ಸರಾಯಿ ತಯಾರಿಕಾ ಘಟಕಗಳನ್ನು ಬಂದ್ ಮಾಡುವಂತೆ ಆದೇಶಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

ಮೇ 8ರ ಸಂಜೆ 6 ಗಂಟೆಯಿಂದ ಮೇ 10ರ ಸಾಯಂಕಾಲ 6 ಗಂಟೆಯವರೆಗೆ ಹಾಗೂ ಮೇ 13ರಂದು ಬೆಳಗ್ಗೆ 6 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ಸಿ. ಆರ್. ಪಿ. ಸಿ. 1973ರ ಕಲಂ 144ರ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮತದಾನ ಪೂರ್ಣಗೊಂಡ ನಂತರ ಮತದಾನವಾದ ವಿದ್ಯುನ್ಮಾನ ಮತಯಂತ್ರಗಳನ್ನು ಹಾಗೂ ಮಹತ್ವದ ದಾಖಲೆಗಳನ್ನು ಪೊಲೀಸ್ ಭದ್ರತೆಯೊಂದಿಗೆ ಮತ ಎಣಿಕೆ ಕೇಂದ್ರವಾದ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿನ ಭದ್ರತಾ ಕೊಠಡಿಯಲ್ಲಿ ಶೇಖರಿಸಿಡಲಾಗುವುದು. ಮೇ 13ರ ಶನಿವಾರ ಇಲ್ಲಿಯೇ ಮತ ಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+