Get Updates
Get notified of breaking news, exclusive insights, and must-see stories!

ಧಾರವಾಡ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಹೀಗಿದೆ, ಯಾರಿಗೆ ಗೆಲುವು?, ಇಲ್ಲಿದೆ ಮಾಹಿತಿ

ಧಾರವಾಡ, ಮೇ, 13: ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯವೂ ನಿರ್ಧಾರವಾಗಿದೆ. ಹಾಗಾದರೆ ಧಾರವಾಡ ಜಿಲ್ಲೆಯ ಯಾವ ಕ್ಷೇತ್ರದಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ ಎನ್ನುವ ವಿವರವನ್ನು ಇಲ್ಲಿ ಗಮನಿಸಿ.

ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ಅಬ್ಬಯ್ಯ 85,426 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇನ್ನು ಇವರಿಗೆ ಫೈಟ್‌ ನೀಡಿದ್ದ ಬಿಜೆಪಿ ಅಭ್ಯರ್ಥಿ ಡಾ.ಕ್ರಾಂತಿಕಿರಣ 53,056 ಮತಗಳನ್ನು ಪಡೆಯುವ ಮೂಲಕ ಸೋಲನುಭವಿಸಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ ವೀರಭದ್ರಪ್ಪ ಹಾಲಹರವಿ 900 ಮತಗಳು, ಪಕ್ಷೇತರ ಅಭ್ಯರ್ಥಿ ದುರ್ಗಪ್ಪ‌ ಬಿಜವಾಡ 5,644 ಮತಗಳನ್ನು ಪಡೆದಿದ್ದಾರೆ.

Dharwad Assembly Election Results 2023: Dharwad districts 7 constituencies Result details

ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್‌ ಲಾಡ್ 85,761 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಇವರಿಗೆ ಫೈಟ್‌ ನೀಡಿದ್ದ ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ 71,404 ಮಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಮತ್ತೊಂದೆಡೆ ಜೆಡಿಎಸ್ ಅಭ್ಯರ್ಥಿ ವೀರಪ್ಪ ಶೀಗಿಗಟ್ಟಿ 891 ಮತಗಳನ್ನು ಪಡೆದಿದ್ದಾರೆ.

ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್‌ ಟೆಂಗಿನಕಾಯಿ 95,064 ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇನ್ನು ಇವರ ವಿರುದ್ಧ ಭಾರಿ ಪೈಪೋಟಿ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್‌ ಶೆಟ್ಟರ್ 60,775 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ ಸಿದ್ಧಲಿಂಗೇಶಗೌಡ 513 ಮತಗಳನ್ನು ಪಡೆದು ಕೊನೇ ಸ್ಥಾನ ಅಲಂಕರಿಸಿದ್ದಾರೆ.

ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಆರ್. ಪಾಟೀಲ 76,105 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರು 40,748 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಮತೊಂದೆಡೆ ಪಕ್ಷೇತರರಾಗಿ ಸ್ಪರ್ಧಿಸಿದ್ದ ಎಸ್.ಐ. ಚಿಕ್ಕನಗೌಡರ ಅವರು 30,425 ಮತಗಳನ್ನು ಪಡೆದು ಕೊನೇ ಸ್ಥಾನ ಅಲಂಕರಿಸಿದ್ದಾರೆ.

ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ಎಚ್.ಕೋನರಡ್ಡಿ 86,081 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ. ಇವರ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಶಂಕರ ಪಾಟೀಲ‌ ಮುನೇನಕೊಪ್ಪ 63,882 ಮತ ಪಡೆದು ಸೋಲುಂಡಿದ್ದಾರೆ. ಮತ್ತೊಂದೆಡೆ ಜೆಡಿಎಸ್‌ ಅಭ್ಯರ್ಥಿ ಕೆ.ಎನ್.ಗಡ್ಡಿ 6,914 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.

ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಲಕರ್ಣಿ 89,333 ಮಗಳನ್ನು ಪಡೆದು ಜಯಭೇರಿ ಬಾರಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ 71,296 ಜೆಡಿಎಸ್ ಅಭ್ಯರ್ಥಿ ಮಂಜುನಾಥ್‌ 921 ಮತಗಳನ್ನು ಪಡೆದಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ್ 71,640 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಇನ್ನು ಕಾಂಗ್ರೆಸ್‌ ಅಭ್ಯರ್ಥಿ ದೀಪಕ್‌ ಚಿಂಚೋರೆ 45,006 ಜೆಡಿಎಸ್ ಅಭ್ಯರ್ಥಿ ಗುರುರಾಜ್ ಹುಣಸಿಮರದ 947 ಮತಗಳನ್ನು ಪಡೆದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+