• search
  • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿಹಿ ಸುದ್ದಿ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಕೊರೊನಾ ರೋಗಿ

|

ಧಾರವಾಡ, ಏಪ್ರಿಲ್ 6: ಕೋವಿಡ್19 ಪಾಸಿಟಿವ್ ಕಾಣಿಸಿಕೊಂಡಿದ್ದ ಧಾರವಾಡ ನಗರದ ಹೊಸಯಲ್ಲಾಪುರದ 33 ವರ್ಷದ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು ಭಾನುವಾರ ಸಂಜೆ ಹುಬ್ಬಳ್ಳಿಯ ಕಿಮ್ಸ್ ನಿಂದ ಬಿಡುಗಡೆ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಆಸ್ಟ್ರೇಲಿಯಾದಿಂದ ದುಬೈ ,ಮಸ್ಕತ್ , ಪಣಜಿ ಮಾರ್ಗವಾಗಿ ಧಾರವಾಡ ಶಹರಕ್ಕೆ ಮಾ.12 ರಂದು ಆಗಮಿಸಿದ್ದ ಈ ವ್ಯಕ್ತಿ ರೋಗಲಕ್ಷಣ ಕಂಡು ಬಂದಿದ್ದರಿಂದ ಮಾ.17 ರಂದು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿದ್ದರು. ಅಲ್ಲಿಂದ ಮಾ‌.18 ರಿಂದ 21 ರವರೆಗೆ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಕೋವಿಡ್ ಪಾಸಿಟಿವ್ ವರದಿ ಬಂದ ದಿನದಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.ಕಿಮ್ಸ್ ನಲ್ಲಿ ಉತ್ತಮ ಚಿಕಿತ್ಸೆ ನೀಡಿದ ಬಳಿಕ ರೋಗದಿಂದ ಚೇತರಿಸಿಕೊಳ್ಳತೊಡಗಿದರು.

ಇವರ ಗಂಟಲು ದ್ರವದ ಪ್ರಯೋಗಾಲಯದ ಮಾದರಿಯನ್ನು ಮಾರ್ಚ್ 31 ಹಾಗೂ ಏಪ್ರೀಲ್ 3 ರಂದು ಎರಡು ಬಾರಿ ಮತ್ತೆ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು.ಎರಡೂ ಸಲ ಕೋವಿಡ್ ನೆಗೆಟಿವ್ ವರದಿ ಬಂದಿದ್ದು ಗುಣಮುಖರಾದ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಿಕೊಡಲಾಯಿತು ಎಂಧೂ ತಿಳಿಸಿದ್ದಾರೆ.

ಈ ಪ್ರಕರಣ ಧಾರವಾಡ ಜಿಲ್ಲೆಯ ಮೊದಲ ಪ್ರಕರಣವಾಗಿತ್ತು, ರಾಜ್ಯದ 21 ನೇ ಪ್ರಕರಣವಾಗಿದ್ದರಿಂದ ಪಿ.21 ಎಂದು ಗುರುತಿಸಲಾಗುತ್ತಿತ್ತು.

English summary
Dharwad Coronavirus Patient Recovered And Discharged From KIMS. dc deepa cholan confirms it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X