Get Updates
Get notified of breaking news, exclusive insights, and must-see stories!

21ದಿನದಲ್ಲಿ ಜನನ-ಮರಣ ನೋಂದಣಿ ಮಾಡಲು ಡಿಸಿ ಸೂಚನೆ

ಧಾರವಾಡ, ಆಗಸ್ಟ್ 22: ಜಿಲ್ಲೆಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಆಗುವ ಜನನ ಮತ್ತು ಮರಣಗಳನ್ನು ನಿಗದಿತ 21 ದಿನಗಳ ಒಳಗಾಗಿಯೇ 'ಜನನ ಮರಣ ಅಧಿನಿಯಮದಡಿ' ನೋಂದಣಿ ಕಾರ್ಯ ನಡೆಸಬೇಕು. ನೋಂದಣಿ ಆದ ಬಳಿ ಮೊದಲ ಪ್ರತಿಯನ್ನು ಹಣ ಪಡೆಯದೇ, ಉಚಿತವಾಗಿ ನೀಡಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸರ್ಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಜರುಗುವ ಮರಣ ಘಟನೆಗಳಿಗೆ ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ತಪ್ಪದೇ ಜನನ ಮರಣಗಳ ಮುಖ್ಯ ನೋಂದಣಾಧಿಕಾರಿಗಳು, ಬೆಂಗಳೂರು ಇವರಿಗೆ ನೇರವಾಗಿ ಸಲ್ಲಿಸುವಂತೆ ಹಾಗೂ ಯಾವುದೇ ಮರಣ ಘಟನೆ ಜರುಗದೇ ಇರುವ ಪಕ್ಷದಲ್ಲಿ ಶೂನ್ಯ ವರದಿಯನ್ನು ಸಲ್ಲಿಸುವಂತೆ ಅವರು ತಿಳಿಸಿದರು.

Dharwad DC Instructed for Registration of Birth and Death in 21 Days

ವಿವರ ಆನ್‌ಲೈನ್‌ನಲ್ಲಿ ದಾಖಲಿಸಿ

ಧಾರವಾಡದ ಎಲ್ಲ ಸರ್ಕಾರಿ, ಖಾಸಗಿ ಆರೋಗ್ಯ ಸಂಸ್ಥೆಗಳ ವೈಧ್ಯಾಧಿಕಾರಿಗಳಿಗೆ ನಿಗಧಿತ ಅವಧಿಯಲ್ಲಿ ಜನನ ಮರಣಗಳ ವಿವರಗಳನ್ನು ಆನ್‌ಲೈನ್‌ನಲ್ಲಿ ಸಹ ದಾಖಲಿಸಬೇಕು. ಇನ್ನೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳುಈ ನೋಂದಣಿ ಕಾರ್ಯವನ್ನು ವೈದ್ಯಕೀಯ ಸಂಸ್ಥೆಗಳಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.

ಹೋಂ ಲೋನ್ ಮಾಡುವಾಗ ಹಿಡನ್ ಚಾರ್ಜಸ್‌ ಗೊತ್ತಿರಲಿ

ಜನನ ಮತ್ತು ಮರಣ ನೋಂದಣಿಗಳಲ್ಲಿ ತಿದ್ದುಪಡೆಗೆ ಅವಕಾಶ ನೀಡದೆ ಸರಿಯಾಗಿ ನಿಗಧಿತ ಅವಧಿಯೊಳಗೆ ನೋಂದಣಿ ಕಾರ್ಯ ಕೈಗೊಂಡು ಸಾರ್ವಜಕನಿಕರಿಗೆ ತೊಂದರೆಯಾಗದಂತೆ ಪ್ರಮಾಣ ಪತ್ರ ನೀಡಬೇಕು.

375 ಅರ್ಜಿ ಸ್ವೀಕೃತ

2024 ಜಿಲ್ಲೆಯಲ್ಲಿ ಜುಲೈ 1ರಿಂದ ಗ್ರಾಮೀಣ ಭಾಗದ ಎಲ್ಲಾ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ ಮರಣಗಳ ಉಪನೋಂದಣಾಧಿಕಾರಿಯಾಗಿ ಸರ್ಕಾರವು ನೇಮಕ ಮಾಡಿದೆ. ಜುಲೈ 2024ರೊಳಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ 375 ಅರ್ಜಿಗಳು ಸ್ವೀಕೃತವಾಗಿದೆ. ಅವುಗಳ ಪೈಕಿ 311 ಅರ್ಜಿಗಳ ಅನುಮೋದನೆ ಮರಣಪ್ರಮಾಣ ಪತ್ರಗಳನ್ನು ವಿತರಿಸಿರುವ ಕುರಿತು ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.

Dharwad DC Instructed for Registration of Birth and Death in 21 Days

ಜಿಲ್ಲೆಯಲ್ಲಿ ಹೊಸದಾಗಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳಿಗೆ ಜನನ ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿರುವ ಹಾಗೂ ನೋಂದಣಿ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಅದಕ್ಕಾಗಿ ಗ್ರಾಮ ಪಂಚಾಯತಿಯಲ್ಲಿ ಇರುವ ಸ್ವಚ್ಚತಾ ವಾಹಿನಿ ಮುಖಾಂತರ ಮತ್ತು ಡಂಗೂರ ಸಾರುವ ಮುಖಾಂತರ, ಗ್ರಾಮ ಸಭೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಉಪನಿರ್ದೇಶಕಿ ಡಾ. ಕುಕನೂರ, ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪಟ್ಟಣ ಪಂಚಾಯತಿ ಮತ್ತು ಪುರಸಭೆಗಳ ಮುಖ್ಯಾಧಿಕಾರಿಗಳು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+