10 ವರ್ಷಗಳ ಬಳಿಕ ತುಂಬಿದ ಧಾರವಾಡದ ನೀರಸಾಗರ

ಧಾರವಾಡ, ಆಗಸ್ಟ್ 08 : ಹುಬ್ಬಳ್ಳಿ-ಧಾರವಾಡದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಘಟಗಿ ತಾಲೂಕಿನ ನೀರಸಾಗರ ಜಲಾಶಯ ಹಾಗೂ ಬೆಣಚಿ ಕೆರೆ ತುಂಬಿ ಹರಿಯುತ್ತಿವೆ.

ಗುರುವಾರ ನೀರಸಾಗರ ಕೆರೆಗೆ ಶಾಸಕರಾದ ಸಿ.ಎಂ.ನಿಂಬಣ್ಣವರ ಹಾಗೂ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಬಾಗಿನ ಅರ್ಪಿಸಿದರು. ಸುಮಾರು 10 ವರ್ಷಗಳ ನಂತರ ನೀರಸಾಗರ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ.

ಧಾರವಾಡ ಜಿಲ್ಲಾಡಳಿತದಿಂದ ನೀರಸಾಗರ ಜಲಾಶಯದ ಪ್ರದೇಶವನ್ನು ಸಮೀಕ್ಷೆ ಮಾಡಿ, ಹೂಳು ತಗೆಯುವ ಕಾರ್ಯವನ್ನು ಮಾಡಲಾಗಿತ್ತು. ಮತ್ತು ಜಲಾಶಯದ ಭೂಮಿಯನ್ನು ಅನಧಿಕೃತವಾಗಿ ಅತಿಕ್ರಮಿಸಿಕೊಂಡಿದ್ದನ್ನು ತೆರವುಗೊಳಿಸಲಾಗಿತ್ತು.

Dharwad DC Offers Bagina To Neerasagar Reservoir

ಜಲಾಶಯಕ್ಕೆ ನೀರು ಬರುವ ಮಾರ್ಗಗಳನ್ನು ಸ್ವಚ್ಛಗೊಳಿಸಿ ಒತ್ತುವರಿಯನ್ನು ತೆರವುಗೊಳಿಸಲಾಗಿತ್ತು. ಈ ಎಲ್ಲ ಕ್ರಮಗಳಿಂದಾಗಿ ನೀರಸಾಗರ ಜಲಾಶಯ ಭರ್ತಿಯಾಗಿದೆ. ಜಲಾಶಯದಲ್ಲಿ ಒಟ್ಟು 1.01 ಟಿ.ಎಂಸಿ ಅಡಿ ನೀರಿನ ಸಂಗ್ರಹವಿದೆ.

ದೀಪಾ ಚೋಳನ್ ಗುರುವಾರ ನೀರಸಾಗರ ಜಲಾಶಯಕ್ಕೆ ಭೇಟಿ ನೀಡಿ, ಹಣ್ಣು, ಹಂಪಲು, ಉಡಿತುಂಬುವ ಸಾಮಗ್ರಿಗಳೊಂದಿಗೆ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಇದಕ್ಕೂ ಮುನ್ನ ಶಾಸಕ ಸಿ.ಎಂ.ನಿಂಬಣ್ಣವರ ಸಹ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+