ಬರ ಪರಿಹಾರದ ಹಣ ರೈತರ ಸಾಲಕ್ಕೆ ಸರಿಮಾಡಿಕೊಂಡರೆ ಕಾನೂನು ಕ್ರಮ: ಬ್ಯಾಂಕ್‌ಗಳಿಗೆ ಖಡಕ್ ಎಚ್ಚರಿಕೆ
ಧಾರವಾಡ, ಮೇ 16: ಕರ್ನಾಟಕ ರಾಜ್ಯ ಸರ್ಕಾರ ಕೊಡುವ ಬರ ಪರಿಹಾರ ಹಣವು ರೈತರ ಬ್ಯಾಂಕ್ ಖಾತೆಗೆ ಜಮೆ ಆಗುತ್ತದೆ. ಈ ಹಣವನ್ನು ರೈತರಿಗೆ ಸಾಲ ನೀಡಿರುವ ಬ್ಯಾಂಕ್‌ಗಳು ತಮ್ಮ ಸಾಲಕ್ಕೆ ಸರಿ ಮಾಡಿಕೊಳ್ಳುತ್ತವೆ ಎಂಬ ಮಾತುಗಳು, ಆರೋಪವು ಕೇಳಿ ಬಂದಿವೆ. ಇಂತಹ ಬ್ಯಾಂಕ್‌ಗಳಿಗೆ ಸರ್ಕಾರ ಎಚ್ಚರಿಕೆ ಕೊಟ್ಟಿದೆ.
ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡುವ ಬರ ಪರಿಹಾರ, ವಿವಿಧ ಯೋಜನೆಗಳ ಸಹಾಯಧನ, ಸಾಮಾಜಿಕ ನೆರವು ಯೋಜನೆಯ ಸಹಾಯಧನವನ್ನು ರೈತರ ಒಪ್ಪಿಗೆ ಇಲ್ಲದೆ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಳ್ಳಬಾರದು. ಈ ಬಗ್ಗೆ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಈಗಾಗಲೇ ಸಾಕಷ್ಟು ಬಾರಿ ಎಲ್ಲ ಬ್ಯಾಂಕ್ ಗಳಿಗೆ ತಿಳಿಸಲಾಗಿದೆ.

ಒಂದು ವೇಳೆ ಸಾಲಕ್ಕೆ ಹೊಂದಾಣಿಕೆ ಮಾಡಿಕೊಂಡರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಧಾರವಾಡ ಜಿಲ್ಲಾಧಿಕಾರಿಗಳಾ ದಿವ್ಯ ಪ್ರಭು ಬ್ಯಾಂಕ್‌ಗಳಿಗೆ ಎಚ್ಚರಿಕೆ ನೀಡಿದ್ದಾರೆ.
ರೈತರಿಗೆ ನೀಡುವ ಪರಿಹಾರ, ಆರ್ಥಿಕ ನೆರವು ವಿಷಯದಲ್ಲಿ ಸರ್ಕಾರ ಮತ್ತು ಜಿಲ್ಲಾಡಳಿತ ನೀಡಿರುವ ನಿರ್ದೇಶನ ಉಲ್ಲಂಘಿಸಿದರೆ ಅಂತಹ ಬ್ಯಾಂಕಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ಹೇಳಿದರು.
ಸರ್ಕಾರ ಬರ ಪರಿಹಾರ ಸೌಲಭ್ಯ ನೀಡುತ್ತಿದೆ
2024ರ ಮುಂಗಾರು ವಿಫಲವಾಗಿದ್ದರಿಂದ ರಾಜ್ಯ ಸರ್ಕಾರ ಧಾರವಾಡ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪಡೀತ ತಾಲೂಕುಗಳೆಂದು ಘೋಷಣೆ ಮಾಡಿದೆ. ಸರ್ಕಾರದ ನಿಯಮಾವಳಿಗಳ ಪರಿಹಾರ ಹಣ, ಇತರ ಸೌಲಭ್ಯಗಳನ್ನು ಬಿಡುಗಡೆ ಮಾಡುತ್ತಿದೆ.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಆರಂಭವಾಗುತ್ತಿದೆ. ಆದ್ದರಿಂದ ರೈತರು ಭೂಮಿ ಉಳುಮೆ ಮಾಡಿ ಬಿತ್ತನೆಗೆ ಸಿದ್ದಗೊಳಿಸಬೇಕಿದೆ. ಅದಕ್ಕಾಗಿ ರೈತರು ಬೀಜ, ರಸಗೊಬ್ಬರ ಖರೀದಿಸಲು ಅವರ ನೆರವಿಗಾಗಿ ರಾಜ್ಯ ಸರ್ಕಾರ ರೈತರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ನೇರವಾಗಿ ಬರ ಪರಿಹಾರ ಜಮೆ ಮಾಡುತ್ತಿದೆ ಎಂದರು ವಿವರಿಸಿದರು.
ಬ್ಯಾಂಕ್‌ಗಳಿಗೆ ಸರ್ಕಾರದ ಕಟ್ಟುನಿಟ್ಟಿನ ಸೂಚನೆ
ರೈತರಿಗೆ ಸರ್ಕಾರ ನೀಡುವ ಸಹಾಯಧನ, ಸಬ್ಸಿಡಿ, ಬರಪರಿಹಾರ ಮುಂತಾದವುಗಳನ್ನು ರೈತರ ಬ್ಯಾಂಕ್ ಸಾಲದ ಖಾತೆಗೆ ಹೊಂದಾಣಿಕೆ ಮಾಡದಂತೆ ರಾಜ್ಯ ಸರ್ಕಾರ ಮತ್ತು ರಾಜ್ಯಮಟ್ಟದ ಬ್ಯಾಂಕರ್ಸ್ ಕಮೀಟಿ ಸೂಚಿಸಿವೆ. ಈ ಕುರಿತು ಪತ್ರ ಸಹ ಹೊರಡಿಸಿವೆ.
ಈ ಸೂಚನೆ ಮೇರೆಗೆ ಧಾರವಾಡ ಜಿಲ್ಲಾಡಳಿತವು ಕಳೆದ ವರ್ಷ ಮತ್ತು ಈ ವರ್ಷದಲ್ಲಿ ಎರಡು-ಮೂರು ಸಲ, ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಜಿಲ್ಲೆಯ ಪ್ರತಿ ಬ್ಯಾಂಕ್ ಮುಖ್ಯಸ್ಥರಿಗೆ, ವ್ಯವಸ್ಥಾಪಕರಿಗೆ ಮಾಹಿತಿ ನೀಡಲಾಗಿದೆ.
ಜಮೆಯಾದ ಹಣ ಕಟ್ ಆದರೆ ನೀವೇ ಜವಾಬ್ದಾರರು
ಸಹಾಯಧನ ಪಡೆದ ರೈತರ ಸಹಮತ ಪಡೆಯದೇ ಅವರ ಬರ ಪರಿಹಾರದ ಹಣವನ್ನು ಅವರ ಸಾಲದ ಖಾತೆಗೆ ಜಮೆ ಮಾಡಿಕೊಂಡರೆ ಆಯಾ ಬ್ಯಾಂಕ್ ಮುಖ್ಯಸ್ಥರನ್ನು ಮತ್ತು ಬ್ಯಾಂಕ್ ಶಾಖಾ ವ್ಯವಸ್ಥಾಪಕರನ್ನು ಜವಾಬ್ದರರನ್ನಾಗಿ ಮಾಡಲಾಗುವುದು. ಕಾನೂನಿನಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ದಯಮಾಡಿ ಬ್ಯಾಂಕ್‌ಗಳು ರೈತರ ಏಳಿಗೆ, ಕೃಷಿ ವಲಯದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಅವರು ಸೂಚಿಸಿದರು.
ಜಿಲ್ಲೆಯ ಎಲ್ಲ ಬ್ಯಾಂಕುಗಳ ಮುಖ್ಯಸ್ಥರು ಮತ್ತು ಎಲ್ಲ ಬ್ಯಾಂಕ್ ಗಳ ಶಾಖಾ ವ್ಯವಸ್ಥಾಪಕರು ಗಮನಹರಿಸಿ, ರೈತರಿಗೆ ತೊಂದರೆ ಆಗದಂತೆ ಮತ್ತು ಬರಪರಿಹಾರ ಮೊತ್ತ ರೈತರ ಒಪ್ಪಿಗೆ ಇಲ್ಲದೆ ಅವರ ಸಾಲದ ಖಾತೆಗೆ ತೆಗೆದುಕೊಳ್ಳದೆ ರೈತರ ಕೈಗೆ ನೇರವಾಗಿ ಬರ ಪರಿಹಾರ ಹಣ ಸೀಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications