Dharwad Lok Sabha Election 2024 Results LIVE: ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು

Dharwad Lok Sabha Election 2024: ಪೇಡಾನಗರಿ ಅಂತಲೇ ಪ್ರಖ್ಯಾತಿ ಪಡೆದಿರುವ ಧಾರವಾಡ ಲೋಕಸಭಾ ಚುನಾಚಣೆಯ ಫಲಿತಾಂಶ ಇಂದು (ಜೂನ್‌ 04) ನಡೆಯುತ್ತಿದೆ. ಈ ಕ್ಷೇತ್ರಕ್ಕೆ ಮೇ 07ರಂದು ನಡೆದ ಮತದಾನ ನಡೆದಿದ್ದು, ಶೇಕಡಾ 74.37ರಷ್ಟು ಮತದಾನ ಮಾಡಿದ್ದರು. ಇನ್ನು ಇಂದಿನ ಮತ ಎಣಿಕೆಯಲ್ಲಿ ಕ್ಷೇತ್ರದಲ್ಲಿ ಯಾರು ವಿಜಯಮಾಲೆಯನ್ನು ಹಾಕಿಕೊಳ್ಳಲಿದ್ದಾರೆ ಎಂದು ತಿಳಿಯಲಿದೆ.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇನ್ನು ಬಿಜೆಪಿಯಿಂದ ಪ್ರಹ್ಲಾದ್ ಜೋಶಿ ಮತ್ತು ಕಾಂಗ್ರೆಸ್‌ನಿಂದ ವಿನೋದ್‌ ಅಸೂಟಿ ಸ್ಪರ್ಧಿಸಿದ್ದು, ಇಂದು ಫಲಿತಾಂಶ ಯಾವಾಗ ಹೊರಬೀಳಲಿದೆ ಎಂದು ಕಾತರದಿಂದ ತುದಿಗಾಲಲ್ಲಿ ಕಾಯುತ್ತಿದ್ದಾರೆ.

Dharwad Lok Sabha Election 2024 Results LIVE Who will Win Pralhad Joshi Vs Vinod Asooti

ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಅವರು ಬ್ರಾಹ್ಮಣ ಸಮುದಾಯದವರಾಗಿದ್ದು, ವಿನೋದ ಅಸೂಟಿ ಕುರುಬ ಕುಟುಂಬದವರಾಗಿದ್ದಾರೆ. ಆದರೂ ಕ್ಷೇತ್ರದಲ್ಲಿ ಜಾತಿ ಮೀರಿ ಪ್ರೀತಿ ತೋರಿದ ಉದಾಹರಣೆಗಳಿವೆ. 1951ರಿಂದ 1991ರವರೆಗೆ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್‌ ಸತತ ಗೆಲುವು ದಾಖಲಿಸಿದ್ದು, 1996ರಿಂದ ಸತತ ಸೋಲನುಭವಿಸಿದ್ದು, 1996ರಿಂದ ಬಿಜೆಪಿ ವಿಜಯದ ಮಾಲೆಯನ್ನು ಹಾಕಿಕೊಳ್ಳುತ್ತಲೇ ಬಂದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ಸಹಿತ 8 ವಿಧಾನಸಭಾ ಕ್ಷೇತ್ರಗಳು ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿವೆ. ಬಿಜೆಪಿ ಮತ್ತು ಕಾಂಗ್ರೆಸ್‌ ಶಾಸಕರು ತಲಾ 4 ಕ್ಷೇತ್ರಗಳಲ್ಲಿದ್ದಾರೆ. 2013ರಿಂದ ಕಾಂಗ್ರೆಸ್‌ನಲ್ಲಿರುವ ವಿನೋದ ಅವರು, 2018ರಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಇದು ತೀವ್ರ ಪೈಪೋಟಿಯ ಕದನಕ್ಕೆ ಸಾಕ್ಷಿಯಾಗಿದ್ದು, ಈ ವೇಳೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಸಾರ್ವತ್ರಿಕ ಚುನಾವಣೆಯಲ್ಲಿ 6,84,837 ಮತಗಳನ್ನು ಪಡೆಯುವ ಮೂಲಕ 2,05,072 ಮತಗಳ ಗೆಲುವಿನ ಅಂತರದಿಂದ ಗೆಲುವು ಸಾಧಿಸಿದ್ದರು. ಇನ್ನು 4,79,765 ಮತಗಳನ್ನು ಪಡೆದ ಐಎನ್‌ಸಿಯ ವಿನಯ್‌ ಕುಲಕರ್ಣಿ ಅವರು ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದರು. ಈ ಮೂಲಕ ಜೋಶಿ ಅವರು ಈ ಬಾರಿಯೂ ಗೆಲ್ಲುವ ನಿರೀಕ್ಷೆಯಲ್ಲಿದ್ದು, ಈ ಕುತೂಹಲಕ್ಕೆ ಇಂದು ತೆರೆ ಕಾಣಲಿದೆ.

ಅಂಚೆ ಮತಪತ್ರಗಳ ಎಣಿಕೆಸರಿಯಾಗಿ 8 ಗಂಟೆಗೆ ಆರಂಭವಾಯಿತು. ಒಟ್ಟು ಆರು ಟೇಬಲ್‌ಗಳಲ್ಲಿ ಏಜೆಂಟರ್, ಅಭ್ಯರ್ಥಿಗಳ ಸಮ್ಮುಖದಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ.

Dharwad Lok Sabha Election 2024 Results LIVE Who will Win Pralhad Joshi Vs Vinod Asooti

ಇನ್ನು ಪೇಡಾನಗರಿ ಧಾರವಾಡ ಲೋಕಸಭಾ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ಲೈವ್ ಅಪ್ಡೇಟ್‌ಗಾಗಿ ನೀವು ಒನ್‌ ಇಂಡಿಯಾ ಕನ್ನಡವನ್ನು ವೀಕ್ಷಣೆ ಮಾಡಬಹುದಾಗಿದೆ.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಅವರು 7,00,440, ಕಾಂಗ್ರೆಸ್‌ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ 6,05,520 ಮತಗಳನ್ನು ಪಡೆದಿದ್ದರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ 94,920 ಮತಗಳ ಅಂತರದಿಣದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಅವರು 5,73,354, ಕಾಂಗ್ರೆಸ್‌ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ 4,79,921 ಮತಗಳನ್ನು ಪಡೆದಿದ್ದರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ 93,433 ಮತಗಳ ಅಂತರದಿಣದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಅವರು 3,93,930, ಕಾಂಗ್ರೆಸ್‌ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ 3,21,602 ಮತಗಳನ್ನು ಪಡೆದಿದ್ದರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ 72,328 ಮತಗಳ ಅಂತರದಿಣದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಅವರು 3,33,408, ಕಾಂಗ್ರೆಸ್‌ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ 2,66,639 ಮತಗಳನ್ನು ಪಡೆದಿದ್ದರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ 66,769 ಮತಗಳ ಅಂತರದಿಣದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಅವರು 2,50,618, ಕಾಂಗ್ರೆಸ್‌ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ 2,08,188 ಮತಗಳನ್ನು ಪಡೆದಿದ್ದರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ 42,430 ಮತಗಳ ಅಂತರದಿಣದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಅವರು 2,11,087 , ಕಾಂಗ್ರೆಸ್‌ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ 1,81,234 ಮತಗಳನ್ನು ಪಡೆದಿದ್ದರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ 29,853 ಮತಗಳ ಅಂತರದಿಣದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಅವರು 1,78,089, ಕಾಂಗ್ರೆಸ್‌ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ 1,52,124 ಮತಗಳನ್ನು ಪಡೆದಿದ್ದರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ 25,965 ಮತಗಳ ಅಂತರದಿಣದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು 1,44,370, ಕಾಂಗ್ರೆಸ್‌ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ 1,18,531 ಮತಗಳನ್ನು ಪಡೆದಿದ್ದರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ 25,839 ಮತಗಳ ಅಂತರದಿಣದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು 1,00,740, ಕಾಂಗ್ರೆಸ್‌ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ 78,452 ಮತಗಳನ್ನು ಪಡೆದಿದ್ದರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ 22,288 ಮತಗಳ ಅಂತರದಿಣದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು, 95,188, ಕಾಂಗ್ರೆಸ್‌ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ 74,917 ಮತಗಳನ್ನು ಪಡೆದಿದ್ದರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ 20,271 ಮತಗಳ ಅಂತರದಿಣದ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು, 83,700, ಕಾಂಗ್ರೆಸ್‌ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ 66,458 ಮತಗಳನ್ನು ಪಡೆದಿದ್ದರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ 17,242 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು, 21,716 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೂಟಿ 17,699 ಮತಗಳನ್ನು ಪಡೆದಿದ್ದರೆ. ಈ ಮೂಲಕ. ಬಿಜೆಪಿ ಅಭ್ಯರ್ಥಿ 4,017 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಹ್ಲಾದ್‌ ಜೋಶಿ ಅವರು, 5236 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು 4,679 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ 557 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಕ್ಷೇತ್ರದಲ್ಲಿ ಈಗಾಗಲೇ ಮತ ಏಣಿಕೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಅವರು ಮುನ್ನಡೆಯಲಿದ್ದಾರೆ.

ಲೋಕಸಭಾ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಹಿನ್ನೆಲೆ ಧಾರವಾಡ ಕೃಷಿ ಕೃಷಿ ವಿವಿಯಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ.

* ಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆ - 17

* ಒಟ್ಟು ಚಲಾವಣೆಯಾದ ಮತ ಶೇಕಡ 74.37

* ಒಟ್ಟು ಮತದಾರರ ಸಂಖ್ಯೆ 18,31,976

* ಚಲಾವಣೆಯಾದ ಮತ 13,62,421

ತಲಾ 14 ಟೇಬಲ್‌ಗಳಲ್ಲಿ 8 ವಿಧಾನಸಭಾ ಕ್ಷೇತ್ರದ ಮತ ಎಣಿಕೆ ನಡೆಯಲಿದೆ. ಒಟ್ಟು 112 ಟೇಬಲ್‌ಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಒಟ್ಟು 20 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಕೃಷಿ ವಿವಿ ಸುತ್ತಮತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಲ್ಲದೆ, ಸಿಸಿ ಕ್ಯಾಮರಾ ಕಣ್ಗಾವಲನ್ನು ಅಳವಡಿಕೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+