Dharwad Lok Sabha Election 2024 Results: ಸತತ 5 ಬಾರಿ ಗೆದ್ದು ಬೀಗಿದ ದಾಖಲೆ ವೀರ
Dharwad Lok Sabha Election 2024: ಪೇಡಾನಗರಿ ಅಂತಲೇ ಪ್ರಖ್ಯಾತಿ ಪಡೆದಿರುವ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರು ಜಯ ಸಾಧಿಸಿದ್ದಾರೆ. ಇದುವರೆಗೂ 5 ಬಾರಿ ಗೆಲುವು ಸಾಧಿಸುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಹಾಗಾದರೆ ಯಾವಾಗಿನಿಂದ ಗೆಲ್ಲುತ್ತಾ ಬಂದಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈ ಕ್ಷೇತ್ರಕ್ಕೆ ಮೇ 07ರಂದು ನಡೆದ ಮತದಾನ ನಡೆದಿದ್ದು, ಶೇಕಡಾ 74.37ರಷ್ಟು ಮತದಾನ ಮಾಡಿದ್ದರು. ಇನ್ನು ಇಂದಿನ ಮತ ಎಣಿಕೆಯಲ್ಲಿ ಕ್ಷೇತ್ರದಲ್ಲಿ ಪ್ರಹ್ಲಾದ್ ಜೋಶಿ ಅವರು ವಿಜಯ ಮಾಲೆಯನ್ನು ಹಾಕಿಕೊಂಡಿದ್ದಾರೆ. ಪ್ರಹ್ಲಾದ್ ಜೋಶಿ ಅವರು 7,16,231 ಮತಗಳನ್ನು ಪಡದಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರು 6,18,907 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ ಪ್ರಲ್ಹಾದ್ ಜೋಶಿಯವರು 97,324 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಅವರು ಬ್ರಾಹ್ಮಣ ಸಮುದಾಯದವರಾಗಿದ್ದು, ವಿನೋದ ಅಸೂಟಿ ಕುರುಬ ಕುಟುಂಬದವರಾಗಿದ್ದಾರೆ. ಆದರೂ ಕ್ಷೇತ್ರದಲ್ಲಿ ಜಾತಿ ಮೀರಿ ಪ್ರೀತಿ ತೋರಿದ ಉದಾಹರಣೆಗಳಿವೆ. 1951ರಿಂದ 1991ರವರೆಗೆ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಸತತ ಗೆಲುವು ದಾಖಲಿಸಿದ್ದು, 1996ರಿಂದ ಸತತ ಸೋಲನುಭವಿಸಿದ್ದು, 1996ರಿಂದ ಬಿಜೆಪಿ ವಿಜಯದ ಮಾಲೆಯನ್ನು ಹಾಕಿಕೊಳ್ಳುತ್ತಲೇ ಬಂದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ ಸಹಿತ 8 ವಿಧಾನಸಭಾ ಕ್ಷೇತ್ರಗಳು ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿವೆ. ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ತಲಾ 4 ಕ್ಷೇತ್ರಗಳಲ್ಲಿದ್ದಾರೆ. 2013ರಿಂದ ಕಾಂಗ್ರೆಸ್‌ನಲ್ಲಿರುವ ವಿನೋದ್ ಅವರು, 2018ರಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದರು.
2019ರ ಲೋಕಸಭಾ ಚುನಾವಣೆಯಲ್ಲಿ ಇದು ತೀವ್ರ ಪೈಪೋಟಿಯ ಕದನಕ್ಕೆ ಸಾಕ್ಷಿಯಾಗಿದ್ದು, ಈ ವೇಳೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಸಾರ್ವತ್ರಿಕ ಚುನಾವಣೆಯಲ್ಲಿ 6,84,837 ಮತಗಳನ್ನು ಪಡೆಯುವ ಮೂಲಕ 2,05,072 ಮತಗಳ ಗೆಲುವಿನ ಅಂತರದಿಂದ ಗೆಲುವು ಸಾಧಿಸಿದ್ದರು. ಇನ್ನು 4,79,765 ಮತಗಳನ್ನು ಪಡೆದ ಐಎನ್‌ಸಿಯ ವಿನಯ್ ಕುಲಕರ್ಣಿ ಅವರು ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದರು. ಇನ್ನು ಈ ಬಾರಿಯೂ ಕೂಡ 7,16,231 ಮತಗಳನ್ನು ಪಡೆಯುವ ಮೂಲಕ ಸತತವಾಗಿ 5ನೇ ಬಾರಿ ಗೆಲುವು ದಾಖಲಿಸಿ ಇತಿಹಾಸ ಸೃಷ್ಟಿಸಿದ್ದಾರೆ.












Click it and Unblock the Notifications