ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡದಲ್ಲಿ ಜೋಶಿ ಗೆಲುವಿನ ಓಟಕ್ಕೆ ತಡೆ ಬೀಳಲಿದೆಯೇ?

|
Google Oneindia Kannada News

ಧಾರವಾಡ, ಏಪ್ರಿಲ್ 18 : ಸತತ ಮೂರು ಬಾರಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಮಲ ಅರಳಿದೆ. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರವನ್ನು ವಶಕ್ಕೆ ಪಡೆಯಬೇಕು ಎಂದು ಕಾಂಗ್ರೆಸ್-ಜೆಡಿಎಸ್ ಒಂದಾಗಿವೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಏಪ್ರಿಲ್ 23ರಂದು ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ಹಾಲಿ ಸಂಸದ ಪ್ರಹ್ಲಾದ್ ಜೋಶಿ, ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಕಣದಲ್ಲಿದ್ದಾರೆ. ಈ ಇಬ್ಬರೂ ಸಹ ಕಳೆದ ಚುನಾವಣೆಯಲ್ಲಿಯೂ ಎದುರಾಳಿಗಳಾಗಿದ್ದರು.

ಧಾರವಾಡ ಲೋಕಸಭಾ ಕ್ಷೇತ್ರದ ಪರಿಚಯಧಾರವಾಡ ಲೋಕಸಭಾ ಕ್ಷೇತ್ರದ ಪರಿಚಯ

1991ರ ಹುಬ್ಬಳ್ಳಿ ಈದ್ಗಾ ಮೈದಾನ ವಿವಾದ ಬಿಜೆಪಿಗೆ ವರವಾಗಿದೆ. ಈ ವಿವಾದದ ಬಳಿಕ ನಡೆದ ಆರು ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆದ್ದಿದ್ದಾರೆ. ಈ ಚುನಾವಣೆಯಲ್ಲಿ ಕ್ಷೇತ್ರವನ್ನು ಮರಳಿ ಪಡೆಯಬೇಕು ಎಂದು ಕಾಂಗ್ರೆಸ್ ಪಣ ತೊಟ್ಟಿದೆ.

ಧಾರವಾಡದ ಚುನಾವಣಾ ಪುಟ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡರೂ ನಾಮಪತ್ರ ಸಲ್ಲಿಕೆಗೆ ಎರಡು ದಿನ ಬಾಕಿ ಇರುವಾಗ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ. ಜೆಡಿಎಸ್‌ನ ಯಾವ ಶಾಸಕರೂ ಕ್ಷೇತ್ರದಲ್ಲಿಲ್ಲ. ಆದ್ದರಿಂದ, ಕಾಂಗ್ರೆಸ್ ತನ್ನ ಪ್ರಭಾವ ಬಳಸಿಯೇ ಚುನಾವಣೆ ಗೆಲ್ಲಬೇಕಿದೆ.....

ಗೆಲುವಿನ ಲೆಕ್ಕಾಚಾರ

ಗೆಲುವಿನ ಲೆಕ್ಕಾಚಾರ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಮೂರು ಚುನಾವಣೆಗಳಿಂದ ಬಿಜೆಪಿಯ ಪ್ರಹ್ಲಾದ್ ಜೋಶಿ ಜಯಗಳಿಸುತ್ತಿದ್ದಾರೆ. 2009ರ ಚುನಾವಣೆಯಲ್ಲಿ 1,37,663 ಮತ, 2014ರ ಚುನಾವಣೆಯಲ್ಲಿ 1,11,657 ಮತಗಳ ಅಂತರದಿಂದ ಅವರು ಜಯಗಳಿಸಿದ್ದಾರೆ.

ವಿಧಾನಸಭೆ ಬಲಾಬಲ

ವಿಧಾನಸಭೆ ಬಲಾಬಲ

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಧಾರವಾಡ, ಹಾವೇರಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳು ಸೇರಿ ಒಟ್ಟು 8 ಕ್ಷೇತ್ರಗಳಿವೆ.

* ಬಿಜೆಪಿ : ನವಲಗುಂದ, ಧಾರವಾಡ, ಹುಬ್ಬಳ್ಳಿ-ಧಾರವಾಡ ಪಶ್ಚಿಮ, ಹುಬ್ಬಳ್ಳಿ-ಧಾರವಾಡ ಕೇಂದ್ರ, ಕಲಘಟಗಿ, ಶಿಗ್ಗಾವಿ

* ಕಾಂಗ್ರೆಸ್ : ಕುಂದಗೋಳ, ಹುಬ್ಬಳ್ಳಿ-ಧಾರವಾಡ ಪೂರ್ವ

ವಿನಯ್ ಕುಲಕರ್ಣಿ ಅಭ್ಯರ್ಥಿ

ವಿನಯ್ ಕುಲಕರ್ಣಿ ಅಭ್ಯರ್ಥಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಕಣದಲ್ಲಿದ್ದಾರೆ. ಅವರಿಗೆ ಟಿಕೆಟ್ ಕೈ ತಪ್ಪಲಿದೆ ಎಂದೇ ಅಂದಾಜಿಸಲಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಟಿಕೆಟ್ ಘೋಷಣೆ ಮಾಡಲಾಯಿತು. 2014ರ ಚುನಾವಣೆಯಲ್ಲಿಯೂ ಅವರು ಕಣಕ್ಕಿಳಿದಿದ್ದರು. 431738 ಮತಗಳನ್ನು ಪಡೆದು ಸೋಲು ಕಂಡಿದ್ದರು.

2014ರ ಫಲಿತಾಂಶ

2014ರ ಫಲಿತಾಂಶ

2014ರ ಚುನಾವಣೆಯಲ್ಲಿ ಬಿಜೆಪಿಯ ಪ್ರಹ್ಲಾದ್ ಜೋಶಿ ಅವರು 545395 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್‌ನ ವಿನಯ್ ಕುಲಕರ್ಣಿ ಅವರು 431738 ಮತಗಳನ್ನು ಪಡೆದಿದ್ದರು. ಜೆಡಿಎಸ್‌ನ ಬಿ.ಹನುಂತಪ್ಪ ಮಲ್ಲಪ್ಪ ಅವರು 8,836 ಮತಗಳನ್ನು ಪಡೆದಿದ್ದರು.

English summary
Dharwad lok sabha seat political picture. Sitting MP Pralhad Joshi BJP candidate and Vinay Kulkarni Congress-JD(S) candidate. Election will be held on April 23, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X