BSY-Swamiji: ಧಾರವಾಡ ಜನರು ಬಿಜೆಪಿ ಪರ: ಸ್ವಾಮೀಜಿಗೆ ಸ್ಪರ್ಧೆಯ ದುಸ್ಸಾಹಸ ಬೇಡ: ಯಡಿಯೂರಪ್ಪ ಮಹತ್ವದ ಹೇಳಿಕೆ
ಧಾರವಾಡ, ಏಪ್ರಿಲ್ 15: ಇಂದು ಧಾರವಾಡ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿಯವರು ನಾಮಪತ್ರ ಸಲ್ಲಿಸಲಿದ್ದಾರೆ. ಬೃಹತ್ ಮೆರವಣಿಗೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಯಡಿಯೂರಪ್ಪ ಅವರು, ಶ್ರಿ ದಿಂಗಾಲೇಶ್ವರ ಸ್ವಾಮೀಜಿ ಪಕ್ಷೇತರ ಸ್ಪರ್ಧೆ ಕುರಿತು ಅವರು ಮಾತನಾಡಿದರು.
ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರು 'ರೋಡ್ ಶೋ' ಗು ಮೊದಲು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ ಮಾಜಿ ಸಿಎಂ ಯಡಿಯೂರಪ್ಪ ಅವರು, ಧಾರವಾಡ ಮತ ಕ್ಷೇತ್ರದಲ್ಲಿ ಜನರು ಪ್ರಹ್ಲಾದ್ ಜೋಶಿಯವರ ಪರವಾಗಿದ್ದಾರೆ. ಶ್ರೀ ಶಿರಹಟ್ಟಿಮಠದ ಶ್ರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ಪಕ್ಷೇತರವಾಗಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಅವರು ಹೇಳಿದರು.

ಧಾರವಾಡ ಮತ ಕ್ಷೇತ್ರದಲ್ಲಿ ಮತದಾರರು ಬಿಜೆಪಿಯ ಪರವಾಗಿದ್ದಾರೆ. ನೀವು ಪ್ರಹ್ಲಾದ್ ಜೋಶಿ ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು. ತಮ್ಮ ರಾಜಕೀಯ ನಿರ್ಧಾರ ಕೈ ಬಿಡಬೇಕು ಎಂದು ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದರು.
ಪ್ರಹ್ಲಾದ್ ಜೋಶಿ ಪ್ರಬುದ್ಧ ರಾಜಕಾರಣಿ
ಕರ್ನಾಟಕದಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಇದೆ. ಪ್ರಹ್ಲಾದ್ ಜೋಶಿ ಅವರು ಪ್ರಬುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ತಿಳಿಸಿದರು.

ಸ್ವಾಮೀಜಿ ಜತೆ ಇನ್ನೊಮ್ಮೆ ಮಾತನಾಡುವೆ: ಬಿಎಸ್‌ವೈ
ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಸ್ವಾಮಿಜಿ ಅವರಿಗೆ ಮತ್ತೊಮ್ಮೆ ವಿನಂತಿ ಮಾಡುತ್ತೇನೆ. ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ಈ ಕುರಿತು ಈಗಾಗಲೇ ಅವರೊಂದಿಗೆ ಮಾತನಾಡಿದ್ದೇನೆ. ಇನ್ನೊಮ್ಮೆ ಫೋನ್ ಕರೆ ಮೂಲಕ ಅವರನ್ನು ಮನವೊಲಿಸುವ ಕೆಲಸ ಮಾಡುವೆ ಎಂದು ಹೇಳಿದರು.
ಇಂದು ಪ್ರಹ್ಲಾದ್ ಜೋಶಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಬೃಹತ್ ರೋಡ್ ಶೋ ನಡೆಯಲಿದೆ ಸಿಟಿರವಿ, ಬೈರತಿ ಬಸವರಾಜ್, ಮಾಜಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ದಿಂಗಾಲೇಶ್ವರ ಸ್ವಾಮೀಜಿಗೆ ಭಕ್ತರ ಎಚ್ಚರಿಕೆ
ಶ್ರೀ ದಿಂಗಾಲೇಶ್ವರ ಶ್ರೀಗಳು ಮೂರು ಸಾವಿರ ಮಠದಲ್ಲಿ ಸಭೆ ಮಾಡಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರ ವಿರುದ್ಧ ಸ್ಪರ್ಧೆ ಘೋಷಿಸಿದರು. ಇದೀಗ ಅವರ ಈ ನೀರ್ಧಾರಕ್ಕೆ ಅವರ ಭಕ್ತಗಣವೇ ಅಸಮಾಧಾನ ವ್ಯಕ್ತಪಡಿಸಿದೆ. ನೀವು ಮಠ ಬಿಟ್ಟು ರಾಜಕಾರಣ ಮಾಡಿ. ನಿಮಗೆ ಮಠ ಬೇಕೋ? ರಾಜಕಾರಣ ಬೇಕೋ ಎಂದು ನೀವೇ ನೀರ್ಧರಿಸಿ ಎಂದು ಭಕ್ತರು ಬಹಿರಂಗವಾಗಿಯೇ ಎಚ್ಚರಿಕೆ ಕೊಟ್ಟಿದ್ದಾರೆ.
ಈ ಮೂಲಕ ಪ್ರಹ್ಲಾದ್ ಜೋಶಿಯವರ ವಿರುದ್ಧ ರಾಜಕೀಯ ಪ್ರವೇಶಿಸಿ ಪಕ್ಷೇತರ ಸ್ಪರ್ಧೆಗೆ ಮನಸ್ಸು ಮಾಡಿದ್ದ ಶ್ರೀ ದಿಂಗಾಲೇಶ್ವರಿ ಶ್ರೀಗಳಿಗೆ ಸಂಕಷ್ಟ ಎದುರಾಗಿದೆ. ಈ ಮಧ್ಯೆ ಬಿಎಸ್ ಯಡಿಯೂರಪ್ಪ ಅವರು ಮತ್ತೊಮ್ಮೆ ಶ್ರೀಗಳು ಬಳಿ ಮಾತನಾಡುವುದಾಗಿ ತಿಳಿಸಿದ್ದಾರೆ.












Click it and Unblock the Notifications