ಧಾರವಾಡ: ಬೆಣ್ಣೆ ಹಳ್ಳ ಮತ್ತು ತುಪ್ಪರಿ ಹಳ್ಳ "ಪ್ರವಾಹ ಸಮಸ್ಯೆ" ಪರಿಹಾರಕ್ಕೆ 200 ಕೋಟಿ ರೂ!
ಹುಬ್ಬಳ್ಳಿ: ಧಾರವಾಡದಲ್ಲಿ ಉತ್ತಮ ಮಳೆಯಾಗುತ್ತಿದೆ. ನೆರೆ ಪ್ರವಾಹ ಉಂಟಾಗುವ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ನೆರೆ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅತೀ ಹೆಚ್ಚು ಮಳೆಯಿಂದ ಬೆಣ್ಣೆ ಹಳ್ಳ ಹಾಗೂ ತುಪ್ಪರಿ ಹಳ್ಳಗಳು ಪ್ರವಾಹವನ್ನು ಉಂಟಾಗುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ 200 ಕೋಟಿ ರೂಪಾಯಿ ವೆಚ್ಚದಲ್ಲಿ ಬೆಣ್ಣೆ ಹಳ್ಳ ಮತ್ತು ತುಪ್ಪರಿ ಹಳ್ಳಗಳ ಹೂಳೆತ್ತುವ ಕಾರ್ಯವನ್ನು ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದ್ದಾರೆ.
ಬುಧವಾರ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ, ಇಂಗಳಹಳ್ಳಿ ಗ್ರಾಮಗಳಲ್ಲಿ ನೆರೆ ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು. ಬೆಣ್ಣೆ ಹಳ್ಳ ಹಾಗೂ ತುಪ್ಪರಿ ಹಳ್ಳ ಹೂಳೆತ್ತುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಲ್ಲಿ ಅನುದಾನ ನೀಡುವಂತೆ ಕೋರಲಾಗಿತ್ತು. ಅದರಂತೆ ಬಜೆಟ್‌ನಲ್ಲಿ 200 ಕೋಟಿ ರೂಪಾಯಿ ಹಣವನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಹೂಳೆತ್ತುವ ಕಾರ್ಯವನ್ನು ಆರಂಭಿಸಲಾಗುವುದು. ಮುಂದಿನ 5 ರಿಂದ 10 ವರ್ಷಗಳ ಕಾಲ ಯಾವುದೇ ರೀತಿಯ ಸಮಸ್ಯೆ ಉದ್ಭವಿಸುವುದಿಲ್ಲ. ಬೆಣ್ಣೆ ಹಳ್ಳ ಮತ್ತು ತುಪ್ಪರಿ ಹಳ್ಳಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದಿದ್ದಾರೆ.

ಈಗಾಗಲೇ ನೆರೆ ಪ್ರವಾಹ ಸಂಭವಿಸುವ ಹಳ್ಳಿಗಳನ್ನು ಗುರುತಿಸಲಾಗಿದೆ. ಪ್ರವಾಹದಿಂದಾಗಿ ಯಾವುದೇ ರೀತಿಯ ಜೀವಹಾನಿ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೇ ಟಾಸ್ಕ ಫೋರ್ಸ್ ತಂಡವನ್ನು ರಚನೆ ಮಾಡಲಾಗುವುದು. ಟಾಸ್ಕ ಫೋರ್ಸ್ ತಂಡಕ್ಕೆ ಲೈಫ್ ಜಾಕೆಟ್ ಸೇರಿದಂತೆ ಅಗತ್ಯ ಸಲಕರಣೆಗಳನ್ನು ಒದಗಿಸಲಾಗುತ್ತದೆ ಎಂದರು.
ಶಾಸಕರಾದ ಎನ್.ಎಚ್.ಕೋನರಡ್ಡಿ ಮಾತನಾಡಿ, ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಮುಂಗಾರು ಮಳೆ ಬೇಗನೆ ಪ್ರಾರಂಭವಾಗಿದೆ. ರೈತರಲ್ಲಿ ಸಂತೋಷದ ವಾತಾವರಣ ಸೃಷ್ಟಿಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ನಿರ್ದೇಶನದಂತೆ ಆಯಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸ್ಥಳೀಯ ಶಾಸಕರು ನೆರೆ ಪ್ರವಾಹ ಉಂಟಾಗುವ ಹಾನಿಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಣ್ಣೆ ಹಳ್ಳ ಹಾಗೂ ತುಪ್ಪರಿ ಹಳ್ಳದ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ. ಬಜೆಟ್ ನಲ್ಲಿ ಘೋಷಿಸಿದ 200 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ಹಳ್ಳಗಳ ಹೂಳೆತ್ತುವ ಕಾರ್ಯವನ್ನು ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಮುಂದಿನ ದಿನಗಳಲ್ಲಿ ಕಾಮಗಾರಿಯನ್ನು ಆರಂಭಿಸಲಾಗುವುದು. ಅಪಾರ ಪ್ರಮಾಣದ ಮಳೆಯನ್ನು ಎದುರಿಸಲು ಸಿದ್ಧರಾಗಬೇಕಿದೆ. ರೈತರು ಸಹ ನಮ್ಮದೊಂದಿಗೆ ಸಹಕರಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ.ಬಿ.ಮಜ್ಜಗಿ, ಹುಬ್ಬಳ್ಳಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ, ನೀರಾವರಿ ಇಲಾಖೆಯ ಎಇಇ ರವೀಂದ್ರ ಜಾಲಗಾರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಗದೀಶ ಪಾಟೀಲ್, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ಮಂಜುಳಾ ತೆಂಬದ, ಹುಬ್ಬಳ್ಳಿ ಗ್ರಾಮೀಣ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಿವಾನಂದ ಭೂಮಣ್ಣವರ, ಶಿರಗುಪ್ಪಿ ಗ್ರಾಮ ಪಂಚಾಯತ ಅಧ್ಯಕ್ಷೆ ನಿರ್ಮಲಾ ಸಿ.ಜೆ., ಉಪಾಧ್ಯಕ್ಷ ಚನ್ನಬಸಪ್ಪ ಬಳಿಗೇರ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ದಾವಲಸಾಬ ಪಿಂಜಾರ, ಇಂಗಳಹಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷೆ ಸುಧಾ ರೊಟ್ಟಿಗವಾಡ, ಉಪಾಧ್ಯಕ್ಷೆ ಶಾಂತವ್ವ ಬಟಗುರ್ಕಿ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ ಎಂ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications