'ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳು ನಾಟಕ ನಿಲ್ಲಿಸಲಿ'
ಧಾರವಾಡ, ಜೂ. 25 : 'ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖನೆ ಮಾಲೀಕರ ನಡುವಿನ ನಾಟಕವನ್ನು ಅಂತ್ಯಗೊಳಿಸಿ, ಕಬ್ಬು ಬೆಳೆಗಾರರ ಬಾಕಿ ಪಾವತಿ ಮಾಡಲು ಕ್ರಮ ಕೈಗೊಳ್ಳಬೇಕು' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. [ಚಿತ್ರಗಳು : ಕುಮಾರಸ್ವಾಮಿ ಪಾದಯಾತ್ರೆ]
ಧಾರವಾಡದಿಂದ ಬೆಳಗಾವಿ ತನಕ ಪಾದಯಾತ್ರೆ ಆರಂಭಿಸುವ ಮುನ್ನ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, 'ರಾಜ್ಯ ಸರ್ಕಾರ ರೈತರ ಸಮಸ್ಯೆ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ, ಇದರಿಂದ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅನ್ನದಾತರ ಹೋರಾಟದ ಬಿಸಿ ಎದುರಿಸಬೇಕಾಗುತ್ತದೆ' ಎಂದು ಎಚ್ಚರಿಕೆ ನೀಡಿದರು. [ಕುಮಾರಸ್ವಾಮಿ ಪಾದಯಾತ್ರೆ ಮಾರ್ಗ]

ಪಾದಯಾತ್ರೆ ಆರಂಭಕ್ಕೂ ಮುನ್ನಾ ಹುಬ್ಬಳ್ಳಿ ಸರ್ಕಿಟ್ ಹೌಸ್‌ನಿಂದ ಹೊರಟ ಕುಮಾರಸ್ವಾಮಿ ಅವರು ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧಾರವಾಡಕ್ಕೆ ರಸ್ತೆ ಮೂಲಕ ಆಗಮಿಸಿದರು. ಧಾರವಾಡಕ್ಕೆ ಆಗಮಿಸಿದ ಬಳಿಕ ಪಾದಯಾತ್ರೆ ಆರಂಭಿಸಿದರು. [ಬೆಳಗಾವಿ ಅಧಿವೇಶನ : ಹೋರಾಟಕ್ಕೆ ಸಜ್ಜಾದ ಕಬ್ಬು ಬೆಳೆಗಾರರು]
ಪ್ರಚಾರಕ್ಕಾಗಿ ಪಾದಯಾತ್ರೆ ಕೈಗೊಂಡಿಲ್ಲ : ಕುಮಾರಸ್ವಾಮಿ ಪ್ರಚಾರಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಟೀಕೆಗಳಿಗೆ ಉತ್ತರ ನೀಡಿದ ಕುಮಾರಸ್ವಾಮಿ ಅವರು, 'ರೈತರಿಗೆ ಆಗುತ್ತಿರುವ ಅನ್ಯಾಯವನ್ನು ನೋಡಲಾಗದೆ ಹೋರಾಟ ಮಾಡುತ್ತಿದ್ದೇನೆ, ಇದನ್ನು ಗಿಮಿಕ್ ಎಂದು ಟೀಕಿಸುವವರಿಗೆ ರೈತರ ಬಗ್ಗೆ ನಿಜವಾದ ಕಾಳಜಿ ಇಲ್ಲ' ಎಂದು ಕುಮಾರಸ್ವಾಮಿ ತಿರುಗೇಟು ನೀಡಿದರು.

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆ ಬಗಹರಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಈ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಧಾರವಾಡದಿಂದ ಇಂದು ಪಾದಯಾತ್ರೆ ಆರಂಭವಾಗಿದ್ದು, ಜೂನ್ 29ಕ್ಕೆ ಬೆಳಗಾವಿಯಲ್ಲಿ ಮುಕ್ತಾಯಗೊಳ್ಳಲಿದೆ.












Click it and Unblock the Notifications