ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡ ಕಟ್ಟಡ ಕುಸಿತ ದುರಂತ:ಮೃತರ ಕುಟುಂಬಕ್ಕೆ 2 ಲಕ್ಷ ರೂ.ಪರಿಹಾರ ಘೋಷಣೆ

By ಧಾರವಾಡ ಪ್ರತಿನಿಧಿ
|
Google Oneindia Kannada News

ಧಾರವಾಡ, ಮಾರ್ಚ್ 20: ನಗರದಲ್ಲಿ ನಡೆದ ಕಟ್ಟಡ ಕುಸಿತ ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ರೂ. 2 ಲಕ್ಷ ಪರಿಹಾರ ಧನವನ್ನು ನೀಡುವುದಾಗಿ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ತುಷಾರ ಗಿರಿನಾಥ ಘೋಷಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಟ್ಟಡ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಆರೋಪಿಗಳು ಎಷ್ಟೇ ಪ್ರಭಾವಿ ಆಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ಎಷ್ಟೇ ಪ್ರಭಾವ ಇದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕಟ್ಟಡ ಯಾರದ್ದು ಎನ್ನುವುದು ನಮಗೆ ಗೊತ್ತಿದೆ. ಅವರು ಏನೆಲ್ಲಾ ಮಾಡಿದ್ದಾರೆ ಎಂಬುವುದು ನನಗೆ ಗೊತ್ತು ಎಂದು ತಿಳಿಸಿದರು.

ಧಾರವಾಡ ಕಟ್ಟಡ ಕುಸಿತಕ್ಕೆ ಕಳಪೆ ಕಾಮಗಾರಿಯೇ ಕಾರಣವೆಂದ ಶಾಸಕ ಪ್ರಸಾದ್ ಅಬ್ಬಯ್ಯಧಾರವಾಡ ಕಟ್ಟಡ ಕುಸಿತಕ್ಕೆ ಕಳಪೆ ಕಾಮಗಾರಿಯೇ ಕಾರಣವೆಂದ ಶಾಸಕ ಪ್ರಸಾದ್ ಅಬ್ಬಯ್ಯ

ಪರಿಹಾರದ ಮೊತ್ತವನ್ನು ಹೊರತು ಪಡಿಸಿ, ರಕ್ಷಣಾ ಕಾರ್ಯಾಚರಣೆಗೆ ಬಳಸಿದ ವೆಚ್ಚದ ಹಣವನ್ನು ಕಟ್ಟಡದ ಮಾಲೀಕರಿಂದ ವಸೂಲಿ ಮಾಡಲಾಗುವುದು. ಪೊಲೀಸ್ ಇಲಾಖೆಯಿಂದ ಒಂದು ದೂರು, ಕಾರ್ಮಿಕ ಇಲಾಖೆಯಿಂದ ದೂರು ದಾಖಲಾಗಿದೆ. ಈ ಬಗ್ಗೆ ನ್ಯಾಯಾಂಗ ತನಿಖೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

Dharwad Tragedy:Rs 2 lakh relief announced for the deceased family

 LIVE:ಧಾರವಾಡದಲ್ಲಿ ಕಟ್ಟಡ ಕುಸಿತ:ನಾಲ್ವರು ಸಾವು, ಅವಶೇಷಗಳಡಿ 40 ಜನ LIVE:ಧಾರವಾಡದಲ್ಲಿ ಕಟ್ಟಡ ಕುಸಿತ:ನಾಲ್ವರು ಸಾವು, ಅವಶೇಷಗಳಡಿ 40 ಜನ

ನಮ್ಮ ಬಳಿ ಎಲ್ಲಾ ದಾಖಲೆ ಸಂಗ್ರಹ ಇದೆ. ದಾಖಲೆಯನ್ನು ಪರಿಶೀಲನೆ ಮಾಡಿದ ಬಳಿಕ ಮುಂದಿನ ಕ್ರಮಕ್ಕೆ ಆದೇಶ ಮಾಡಲಾಗುತ್ತದೆ ಎಂದು ಪ್ರಾದೇಶಿಕ ಆಯುಕ್ತರು ಹೇಳಿದರು.

English summary
Dharwad Building Tragedy: Belgaum regional commissioner Tushara Girinath has announced Rs 2 lakh relief for the deceased family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X