ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನ ಪರಿಷತ್ ಚುನಾವಣೆ: ಅ.28 ರಂದು ಝೆರಾಕ್ಸ್, ಕಂಪ್ಯೂಟರ್ ಕೇಂದ್ರಗಳು ಬಂದ್‌

By ಧಾರವಾಡ ಪ್ರತಿನಿಧಿ
|
Google Oneindia Kannada News

ಧಾರವಾಡ, ಅಕ್ಟೋಬರ್ 25: ಅಕ್ಟೋಬರ್ 27ರ ಸಂಜೆ 5 ಗಂಟೆಯಿಂದ ಅ.28ರ ಸಂಜೆ 5 ಗಂಟೆಯವರೆಗೆ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಸ್ಕ್ಯಾನಿಂಗ್, ಝೆರಾಕ್ಸ್ ಹಾಗೂ ಕಂಪ್ಯೂಟರ್ ಕೇಂದ್ರಗಳು ಬಂದ್‌ ಆಗಲಿವೆ.

ಅ.28 ರಂದು ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥಿತ ಚುನಾವಣೆ ನಡೆಸುವ ಉದ್ದೇಶದಿಂದ ಅ. 27ರ ಸಂಜೆ 5 ಗಂಟೆಯಿಂದ ಅ. 28ರ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ಸ್ಕ್ಯಾನಿಂಗ್, ಝೆರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್‌ಗಳು ಬಂದ್ ಆಗಲಿವೆ.

ಪದವೀಧರ ಕ್ಷೇತ್ರದ ಚುನಾವಣೆ ಅವಧಿಯಲ್ಲಿ ಕಾರ್ಯನಿರ್ವಹಿಸದಂತೆ ನಿರ್ಬಂಧಿಸಿ ಧಾರವಾಡ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

Dharwada: Xerox And Computer Centers Will Be Closed On October 28th

ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಅನ್ವಯ ಈ ಆದೇಶ ಹೊರಡಿಸಲಾಗಿದ್ದು, ಆದೇಶ ಉಲ್ಲಂಘಿಸುವ ಇಂತಹ ಕೇಂದ್ರಗಳ ಮಾಲೀಕರು ಯಾವುದೇ ಪರಿಹಾರಕ್ಕೆ ಅರ್ಹರಾಗಿರುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಹೇಳಿದ್ದಾರೆ.

Recommended Video

Corona ಓಡಿಸೋ ಸಮಯ ದೂರ ಇಲ್ಲಾ | Corona Vaccine | Oneindia Kannada

ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಒಟ್ಟು 11 ಅಭ್ಯರ್ಥಿಗಳು ಚುನಾವಣಾ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಎಸ್. ವಿ.ಸಂಕನೂರ, ಕಾಂಗ್ರೆಸ್‌ನಿಂದ ಆರ್.ಎಂ.ಕುಬೇರಪ್ಪ, ಜೆಡಿಎಸ್ ನಿಂದ ಶಿವಶಂಕರ ಚನ್ನಪ್ಪ ಕಲ್ಲೂರ ಕಣದಲ್ಲಿದ್ದಾರೆ. ಆದರೆ ಜೆಡಿಎಸ್ ಪಕ್ಷ ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸುವ ನಿರ್ಧಾರ ಮಾಡಿದ್ದಾರೆ.

English summary
All scanning, Xerox and computer centers will be Closed across Dharwad district from 5 pm on October 27 to October 28.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X