ಧಾರವಾಡ: ಜಿಲ್ಲೆಯ ಬ್ಯಾಂಕ್‌ಗಳಿಂದ 15,258.75 ಕೋಟಿ ರೂಪಾಯಿ ಸಾಲ ವಿತರಣೆ
ಧಾರವಾಡ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ವಿವಿಧ ಜನಕಲ್ಯಾಣ ಯೋಜನೆಗಳಿಗೆ ಬ್ಯಾಂಕ್ ಅಧಿಕಾರಿಗಳು ಆದ್ಯತೆ ಮೇರೆಗೆ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಸಲಹಾ ಹಾಗೂ ಪ್ರಗತಿ ಸಮಿತಿ ಹಾಗೂ ಜಿಲ್ಲಾಮಟ್ಟದ ಬ್ಯಾಂಕರ್‌ಗಳ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2022-23ನೇ ಸಾಲಿನ ಜಿಲ್ಲಾ ಬ್ಯಾಂಕುಗಳ ನಾಲ್ಕನೇ ತ್ರೈಮಾಸಿಕ ಅಂತ್ಯಕ್ಕೆ ಒಟ್ಟು 15258.75 ಕೋಟಿ ರೂಪಾಯಿ ಸಾಲವನ್ನು ವಿತರಣೆ ಮಾಡಲಾಗಿದ್ದು, ಶೇ.98 ಗುರಿ ಸಾಧಿಸಲಾಗಿದೆ. 1819.39 ಕೋಟಿ ಬೆಳೆಸಾಲ, 1844.76 ಕೋರಿ ಕೃಷಿ ಅವಧಿ ಸಾಲ, 3664-15 ಕೃಷಿ ಸಾಲ, 4161 ಕೋಟಿ ಸೂಕ್ಷ್ಮ ಸಣ್ಣ ಮಧ್ಯಮ ಉದ್ಯಮಗಳ ಸಾಲ, 8452 ವಿವಿಧ ಆದ್ಯತಾ ವಲಯದ ಸಾಲ, 6806 ಆದ್ಯತಾ ರಹಿತ ಸಾಲವನ್ನು ವಿತರಣೆ ಮಾಡಲಾಗಿದೆಯೆಂದು ಜಿಲ್ಲಾಧಿಕಾರಿ ತಿಳಿಸಿದರು.
ವಿವಿಧ ಬ್ಯಾಂಕ್‍ಗಳಲ್ಲಿ ಬಾಕಿಯಿರುವ ವಿವಿಧ ಇಲಾಖೆಗಳ ಹಾಗೂ ಅಭಿವೃದ್ಧಿ ನಿಗಮಗಳ ಅರ್ಜಿಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಲಾಯಿತು. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಪ್ರಭುದೇವ ಅವರು ಈ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ರೂಟ್‍ಸೆಟ್) ಯ ವಾರ್ಷಿಕ ಗುರಿಯನ್ನು 800 ರಿಂದ 1000 ಫಲಾನುಭವಿಗಳಿಗೆ ವಿಸ್ತರಿಸಲು ಹಾಗೂ ಹೊಸದಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸೂಚಿಸಿದರು. ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಎಲ್ಲ ಫಲಾನುಭವಿಗಳ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಿ ಫಲಾನುಭವಿಗಳಿಗೆ ಪ್ರೋತ್ಸಾಹ ಧನವನ್ನು ಪಡೆಯಲು ಸಹಕರಿಸಬೇಕೆಂದು ಬ್ಯಾಂಕರಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಕುಂದಗೋಳ : 8 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಪಿಡಿಓ ಲೋಕಾಯುಕ್ತ ಬಲೆಗೆ
ಧಾರವಾಡ, ಮೇ 30: ಮತಕ್ಷೇತ್ರದ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ಇ ಸ್ವತ್ತು ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಸಿಲುಕಿರುವ ಘಟನೆ ನಡೆದಿದೆ.

ಪಿಡಿಓ ಎಂ.ಡಿ. ಕರಡಿಗುಡ್ಡ ಎಂಬುವವರೇ ಲೋಕಾಯುಕ್ತರ ಬಲೆ ಬಿದ್ದ ಅಧಿಕಾರಿ. ಅದರಗುಂಚಿ ಗ್ರಾಮದ ನಿಂಗಪ್ಪ ಪಾಟೀಲ ಎಂಬುವರಿಂದ ಎಂಟು ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಡಿಓ ಅವರ ಧಾರವಾಡದಲ್ಲಿನ ಮನೆಯನ್ನು ಕೂಡ ಪೊಲೀಸರು ತಪಾಸಣೆ ನಡೆಸಿದ್ದಾರೆ.
ಗ್ರಾಮದಲ್ಲಿ ಇ ಸ್ವತ್ತು ಮಾಡಿಕೊಡಲು ಪಿಡಿಓ ಹಣದ ಬೇಡಿಕೆಯನ್ನು ಇಟ್ಟಿದ್ದು, ಗ್ರಾಮಸ್ಥರು ಲೋಕಾಯುಕ್ತರ ಮೊರೆ ಹೋಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಲೋಕಾಯುಕ್ತಾ ಎಸ್ಪಿ ಸತೀಶ್ ಚಿಟಗುಬ್ಬಿ, ಡಿವೈಸ್ಪಿ ವಿಜಯ ಬಿರಾದರ, ಪೊಲೀಸ್ ಇನ್ಸಪೆಕ್ಟರ್ ಹಿರೇಮಠ ನೇತೃತ್ವದ ತಂಡ ಪಿಡಿಓ ಎಂ.ಡಿ. ಕರಡಿಗುಡ್ಡ ಎನ್ನುವಾತನನ್ನು ವಶಕ್ಕೆ ಪಡೆದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications