• search
  • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸೋಂಕು ಕಳೆಯುವ ಸುರಂಗ; ಕರ್ನಾಟಕದಲ್ಲಿಯೇ ಮೊದಲ ಪ್ರಯತ್ನ

|

ಧಾರವಾಡ, ಏಪ್ರಿಲ್ 05 : ಕೊರೊನಾ ಸೋಂಕು ತಡೆಯಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಹುಬ್ಬಳ್ಳಿಯಲ್ಲಿ ಸೋಂಕು ಕಳೆಯುವ ಸುರಂಗ ನಿರ್ಮಿಸಲಾಗಿದೆ. ರಾಜ್ಯದಲ್ಲಿಯೇ ಇದೊಂದು ಮೊದಲ ವಿನೂತನ ಪ್ರಯತ್ನವಾಗಿದೆ.

ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ, ಯಂಗ್ ಇಂಡಿಯಾ ಹಾಗೂ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ ಸಹಯೋಗದಲ್ಲಿ ಸೋಂಕು ಕಳೆಯುವ ಸುರಂಗ ಮಾರ್ಗ ನಿರ್ಮಾಣ ಮಾಡಲಾಗಿದೆ.

ಧಾರವಾಡ Lockdown; ಅಗತ್ಯ ವಸ್ತುಗಳಿಗೆ ಮಾತ್ರ ವಿನಾಯಿತಿ

ಹುಬ್ಬಳ್ಳಿಯ ಅಮರಗೋಳದ ಎಪಿಎಂಸಿ ಮಹಾದ್ವಾರದ ಬಳಿ ಸೋಂಕು ಕಳೆಯುವ ಸುರಂಗ ನಿರ್ಮಾಣ ಮಾಡಲಾಗಿದೆ. ಭಾನುವಾರ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಸುರಂಗವನ್ನು ಪರಿಶೀಲಿಸಿದರು.

ಎಚ್ಚರ! ಹುಬ್ಬಳ್ಳಿ-ಧಾರವಾಡ ವ್ಯಕ್ತಿಗೆ ಕೊರೊನಾಸೋಂಕು ಪತ್ತೆ

"ಎಪಿಎಂಸಿಗೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ರೈತರು, ವ್ಯಾಪಾರಸ್ಥರ ಆರೋಗ್ಯ ರಕ್ಷಣೆಗೆ ಇದು ಸಹಕಾರಿಯಾಗಲಿದೆ. ಜಿಲ್ಲಾಡಳಿತ, ಮಹಾನಗರಪಾಲಿಕೆ ಹಾಗೂ ಸ್ಥಳೀಯ ಸಂಘಟನೆಗಳ ಸಹಭಾಗಿತ್ವದಲ್ಲಿ ಈ ಕಾರ್ಯ ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ" ಎಂದು ಹೇಳಿದರು.

ಧಾರವಾಡ: ಕೊರೊನಾ ಪ್ರಕರಣ ದೃಢ, ಸ್ವಚ್ಛತಾ ಕಾರ್ಯ

ಏನಿದು ಸೋಂಕು ಕಳೆಯುವ ಸುರಂಗ?

ಏನಿದು ಸೋಂಕು ಕಳೆಯುವ ಸುರಂಗ?

ತಮಿಳುನಾಡಿನ ತಿರುಪ್ಪೂರನಲ್ಲಿ ಅಲ್ಲಿನ ಯಂಗ್ ಇಂಡಿಯಾ ಸಂಸ್ಥೆ ಇಂತಹ ಸುರಗಂ ನಿರ್ಮಾಣ ಮಾಡಿತ್ತು. ಹುಬ್ಬಳ್ಳಿಯಲ್ಲಿಯೂ ಅದನ್ನು ಅನುಷ್ಠಾನಗೊಳಿಸಲು ಮುಂದಾದಾಗ ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಅಗತ್ಯ ಸಹಕಾರ ನೀಡಿತ. ಸ್ಟೀಲ್ ಫ್ರೇಮ್ ಸಿದ್ಧಪಡಿಸಿ, ಹೈ ಪ್ರೆಶರ್ ಉಳ್ಳ ಫಾಗರ್ಸ್, 1 ಅಶ್ವಶಕ್ತಿಯ ಪಂಪ್ ಅಳವಡಿಸಿ ಸುರಂಗ ಮಾಡಲಾಗಿದೆ.

ಸೆನ್ಸಾರ್ ಮೂಲಕ ಕಾರ್ಯ ನಿರ್ವಹಣೆ

ಸೆನ್ಸಾರ್ ಮೂಲಕ ಕಾರ್ಯ ನಿರ್ವಹಣೆ

ಸುರಂಗ ಸೆನ್ಸಾರ್ ಮೂಲಕ ಕಾರ್ಯ ನಿರ್ವಹಣೆ ಮಾಡುತ್ತದೆ. 4 ಅಡಿ ಅಂತರದಲ್ಲಿ ವ್ಯಕ್ತಿಗಳು ಬಂದಾಗ ಸೆನ್ಸಾರ್ ಮೂಲಕ ಕಾರ್ಯ ಆರಂಭವಾಗುತ್ತದೆ. ಮನುಷ್ಯ ತೊಯ್ಯದ ಹಾಗೆ ಸೋಂಕು ನಿವಾರಕ ಸಿಂಪಡಣೆಯಾಗುತ್ತದೆ. ಶೇ.1 ರ ಸೋಡಿಯಂ ಹೈಪೋಕ್ಲೋರೈಟ್ ಮಿಶ್ರಿತ ದ್ರಾವಣವನ್ನು ಮಹಾನಗರಪಾಲಿಕೆ ನಿರಂತರವಾಗಿ ಇದಕ್ಕೆ ಒದಗಿಸಲಿದೆ‌. "ಯಂಗ್ ಇಂಡಿಯಾ ಮತ್ತು ಸಿಐಐ ಒಂದು ಲಕ್ಷ ರೂ. ವೆಚ್ಚದಲ್ಲಿ ಪ್ರಾಯೋಗಿಕವಾಗಿ ಈ ಕಾರ್ಯ ಕೈಗೊಂಡಿದೆ" ಎಂದು ಯಂಗ್ ಇಂಡಿಯಾ ಸಂಸ್ಥೆ ಅಧ್ಯಕ್ಷ ಡಾ.ಶ್ರೀನಿವಾಸ ಜೋಷಿ ಹೇಳಿದ್ದಾರೆ.

ಸಾವಿರಾರು ಜನರು ಆಗಮಿಸುತ್ತಾರೆ

ಸಾವಿರಾರು ಜನರು ಆಗಮಿಸುತ್ತಾರೆ

ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಆಯುಕ್ತರು ಮಾತನಾಡಿ, "ಹುಬ್ಬಳ್ಳಿ ಎಪಿಎಂಸಿಗೆ ಪ್ರತಿನಿತ್ಯ ಸಾವಿರಾರು ರೈತರು, ವ್ಯಾಪಾರಿಗಳು ಆಗಮಿಸುತ್ತಾರೆ. ಅವರಿಗೆ ಸೋಂಕು ಹರಡುವಿಕೆ ತಡೆಯಲು ಈ ಪ್ರಯತ್ನ ಮಾಡಲಾಗಿದೆ. ಸಾರ್ವಜನಿಕರು ಸ್ವಲ್ಪ ತಾಳ್ಮೆಯಿಂದ ವಾಹನದಿಂದ ಇಳಿದು, ಸುರಂಗದಲ್ಲಿ ಒಮ್ಮೆ ಹಾಯ್ದು ಬರುವ ಅಭ್ಯಾಸ ರೂಢಿಸಿಕೊಂಡರೆ ಒಳ್ಳೆಯದು" ಎಂದರು.

ಜಗದೀಶ್ ಶೆಟ್ಟರ್ ವೀಕ್ಷಣೆ

ಜಗದೀಶ್ ಶೆಟ್ಟರ್ ವೀಕ್ಷಣೆ

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಸುರಂಗವನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ದೀಪಾ ಚೋಳನ್, ಮಹಾನಗರ ಪೊಲೀಸ್ ಆಯುಕ್ತ ಆರ್.ದಿಲೀಪ್, ಮಹಾನಗರಪಾಲಿಕೆ ಪರಿಸರ ಇಂಜಿನಿಯರ್ ನಯನ ಮುಂತಾದವರು ಉಪಸ್ಥಿತರಿದ್ದರು.

English summary
Dharwad district administration set up the tunnel in Hubballi APMC. People will be sprayed with disinfectants while passing through the tunnel.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more