ಕುಂದಗೋಳ : ಡಿ.ಕೆ.ಶಿವಕುಮಾರ್ ತಂತ್ರದಿಂದ ಬಿಜೆಪಿಗೆ ನಡುಕ

Recommended Video

      ಕುಂದಗೋಳದ ಉಪಚುನಾವಣೆಯಲ್ಲಿ ಬಿಜೆಪಿ ನಾಯಕರ ಪರದಾಟ.!? | Oneindia Kannada

      ಧಾರವಾಡ, ಮೇ 08 : ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಉಸ್ತುವಾರಿ ಡಿ.ಕೆ.ಶಿವಕುಮಾರ್ ತಂತ್ರದಿಂದಾಗಿ ಬಿಜೆಪಿ ನಾಯಕರಿಗೆ ನಡುಕ ಆರಂಭವಾಗಿದೆ. ಡಿ.ಕೆ.ಶಿವಕುಮಾರ್ ಅವರ ಹೆಸರು ಕೇಳಿದೊಡನೆ ಬಳ್ಳಾರಿ ಲೋಕಸಭಾ ಉಪ ಚುನಾವಣೆಯನ್ನು ನಾಯಕರು ನೆನಪು ಮಾಡಿಕೊಳ್ಳುತ್ತಿದ್ದಾರೆ.

      ಕುಂದಗೋಳದ ಶಂಭುಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕಾಂಗ್ರೆಸ್‌ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಕ್ಷೇತ್ರದ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಎರಡು ದಿನಗಳಲ್ಲಿ ಸರಣಿ ಸಭೆ ನಡೆಸಿ ಮತಬೇಟೆಯ ತಂತ್ರಗಳನ್ನು ಹಣೆದಿದ್ದಾರೆ.

      ಮೇ 19ರಂದು ನಡೆಯಲಿರುವ ಕುಂದಗೋಳ ಉಪ ಚುನಾವಣೆಯಲ್ಲಿ ಸಿ.ಎಸ್.ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರು ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಅಭ್ಯರ್ಥಿ. ಬಿಜೆಪಿಯಿಂದ ಎಸ್‌.ಐ.ಚಿಕ್ಕನಗೌಡ ಅವರು ಕಣದಲ್ಲಿದ್ದಾರೆ. ಕಾಂಗ್ರೆಸ್ ಉಪ ಚುನಾವಣೆ ಗೆಲ್ಲಲೇಬೇಕು ಎಂಬ ಪಣದೊಂದಿಗೆ ಡಿ.ಕೆ.ಶಿವಕುಮಾರ್‌ಗೆ ಉಸ್ತುವಾರಿ ನೀಡಿದೆ.

      ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಮಾಡಿದ ಮ್ಯಾಜಿಕ್ ನೋಡಿರುವ ಬಿಜೆಪಿ ನಾಯಕರು ಈಗ ಆತಂಕ ಗೊಂಡಿದ್ದಾರೆ. ಕುಂದಗೋಳದಲ್ಲಿ ಡಿ.ಕೆ.ಶಿವಕುಮಾರ್ ಮಾಡುತ್ತಿರುವ ತಂತ್ರಗಳನ್ನು ನೋಡಿ ಆತಂಕಗೊಂಡಿದ್ದಾರೆ.....

      ಕಾರ್ಯಕರ್ತರ ಸಭೆ

      ಕಾರ್ಯಕರ್ತರ ಸಭೆ

      ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಉಸ್ತುವಾರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹುಬ್ಬಳ್ಳಿಯ ಕಾಟನ್ ಕ್ಲಬ್ ನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದರು. ಚುನಾವಣೆಯಲ್ಲಿ ಗೆಲ್ಲಲು ಬೇಕಾದ ತಂತ್ರಗಳ ಬಗ್ಗೆ ಸೂಚನೆಗಳನ್ನು ನೀಡಿದರು.

      ಸ್ಥಳೀಯ ನಾಯಕರ ಮೇಲೆ ನಿಗಾ

      ಸ್ಥಳೀಯ ನಾಯಕರ ಮೇಲೆ ನಿಗಾ

      ಪ್ರಮುಖ ಚುನಾವಣೆಗಳಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಉಸ್ತುವಾರಿ ವಹಿಸಲಾಗುತ್ತದೆ. ಅವರು ಸ್ವಂತ ಹಣ ಖರ್ಚು ಮಾಡಿ ಚುನಾವಣೆ ಗೆಲ್ಲಿಸುತ್ತಾರೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಸ್ಥಳೀಯ ಬಿಜೆಪಿ ನಾಯಕರ ಮೇಲೆ ಕಣ್ಣಿಡಲು ಡಿ.ಕೆ.ಶಿವಕುಮಾರ್ ಹಲವರನ್ನು ನೇಮಿಸಿದ್ದು, ಅವರು ಯಾರು ಎಂದು ಗುರುತಿಸಲು ಬಿಜೆಪಿ ನಾಯಕರು ಪರದಾಡಬೇಕಿದೆ.

      ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ

      ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ

      ಬಿಜೆಪಿ ಚುನಾವಣೆ ಗೆಲ್ಲಲು ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತದೆ. ಡಿ.ಕೆ.ಶಿವಕುಮಾರ್ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ಮಾಡುತ್ತಾರೆ. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ನಾಯಕರನ್ನು ಗುರುತಿಸಿ ಅವರಿಗೆ ಟಫ್ ಟಾಸ್ಕ್ ನೀಡುತ್ತಾರೆ.

      ಗೆಲ್ಲಿಸಬೇಕು ಎಂಬ ಪಣ

      ಗೆಲ್ಲಿಸಬೇಕು ಎಂಬ ಪಣ

      ಡಿ.ಕೆ.ಶಿವಕುಮಾರ್ ಅವರನ್ನು ಉಸ್ತುವಾರಿ ಮಾಡಿದ ಕಾಂಗ್ರೆಸ್ ಅವರಿಗೆ ಸಂಪೂರ್ಣ ಅಧಿಕಾರ ನೀಡುತ್ತದೆ. ಸ್ಥಳೀಯ ನಾಯಕರು ಸಾಧ್ಯವಿಲ್ಲ ಎನ್ನುವ ಮಾತನ್ನು ಹೇಳದಂತೆ ಅವರು ತಂತ್ರ ರೂಪಿಸುತ್ತಿದ್ದಾರೆ. ಇದರಿಂದಾಗಿ ಪ್ರತಿಪಕ್ಷಗಳು ಡಿ.ಕೆ.ಶಿವಕುಮಾರ್ ಅವರು ಉಸ್ತುವಾರಿ ಆಗುತ್ತಿದ್ದಂತೆ ಆತಂಕಗೊಂಡಿವೆ.

      ಈ ಬಾರಿ ಗೆಲುವು ಸುಲಭವಲ್ಲ

      ಈ ಬಾರಿ ಗೆಲುವು ಸುಲಭವಲ್ಲ

      ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಐ.ಚಿಕ್ಕನಗೌಡ ಅವರು 2008ರಲ್ಲಿ ಕ್ಷೇತ್ರದಲ್ಲಿ ಗೆದ್ದಿದ್ದರು. 2013ರ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. 2018ರ ಚುನಾವಣೆಯಲ್ಲಿ 634 ಮತಗಳ ಅಂತರದಲ್ಲಿ ಸೋತಿದ್ದರು. ಬಾರಿ ಸೋಲಿನ ಅಂತರ ಹೆಚ್ಚಾಗಬೇಕು ಎಂದು ಡಿ.ಕೆ.ಶಿವಕುಮಾರ್ ತಂತ್ರ ಹಣೆಯುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+