ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೋಮವಾರ ಧಾರವಾಡ ಐಐಐಟಿ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ ರಾಷ್ಟ್ರಪತಿ

|
Google Oneindia Kannada News

ಧಾರವಾಡ, ಸೆಪ್ಟೆಂಬರ್ 25; ರಾಷ್ಟ್ರಪತಿ ದ್ರೌಪದಿ ಮುರ್ಮು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಸೆಪ್ಟೆಂಬರ್ 26ರಂದು ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಳ್ಗೊಳ್ಳಲಿದ್ದಾರೆ. ರಾಷ್ಟ್ರಪತಿಗಳಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಸೆಪ್ಟೆಂಬರ್ 26ರ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರು ಮತ್ತು ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಮೈಸೂರು ದಸರಾ 2022ಕ್ಕೆ ಅವರು ಚಾಲನೆ ನೀಡಲಿದ್ದಾರೆ. ಧಾರವಾಡದಲ್ಲಿ ಐಐಐಟಿಯ ನೂತನ ಕಟ್ಟಡದ ಉದ್ಘಾಟನೆಯನ್ನು ಮಾಡಲಿದ್ದಾರೆ.

ಹುಬ್ಬಳ್ಳಿಗೆ ರಾಷ್ಟ್ರಪತಿ ಆಗಮನ: ಉಡುಗೊರೆಯಾಗಿ ಸಿದ್ದಾರೂಢರ ಬೆಳ್ಳಿ ಪ್ರತಿಮೆ, ಧಾರವಾಡ ಪೇಡ ಹುಬ್ಬಳ್ಳಿಗೆ ರಾಷ್ಟ್ರಪತಿ ಆಗಮನ: ಉಡುಗೊರೆಯಾಗಿ ಸಿದ್ದಾರೂಢರ ಬೆಳ್ಳಿ ಪ್ರತಿಮೆ, ಧಾರವಾಡ ಪೇಡ

ಶಾಸಕ ಅರವಿಂದ ಬೆಲ್ಲದ ಧಾರವಾಡ ಐಐಐಟಿಗೆ ಭೇಟಿ ನೀಡಿ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರು, ರಾಜ್ಯ ಸಚಿವರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಯು ಸಮರ್ಪಕವಾಗಿ ನಡೆಯುತ್ತಿದೆ.

ಧಾರವಾಡ ಐಐಐಟಿಯಿಂದ ಆದಿವಾಸಿಗಳ ಭಾಷೆಗಳಿಗೆ ಧ್ವನಿ ಭಾಷಾನುವಾದ ರೋಬೋಟ್ ಸಂಶೋಧನೆ ಧಾರವಾಡ ಐಐಐಟಿಯಿಂದ ಆದಿವಾಸಿಗಳ ಭಾಷೆಗಳಿಗೆ ಧ್ವನಿ ಭಾಷಾನುವಾದ ರೋಬೋಟ್ ಸಂಶೋಧನೆ

ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಧಾರವಾಡದ ಉದ್ಘಾಟನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮ ಸೆಪ್ಟೆಂಬರ್ 26ರಂದು ಮಧ್ಯಾಹ್ನ 3 ಗಂಟೆಗೆ ಸತ್ತೂರು ಬಳಿಯ ಹೊಚ್ಚಹೊಸ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದೆ. ಧಾರವಾಡ ಐಐಐಟಿಯ ಕುಲಸಚಿವ ಚನ್ನಪ್ಪ ಅಕ್ಕಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೋಶ ಜಗಲಾಸರ್ ಸೇರಿದಂತೆ ಐಐಐಟಿಯ ಅಧಿಕಾರಿಗಳು ಅಂತಿಮ ಕ್ಷಣದ ತಯಾರಿಯಲ್ಲಿ ತೊಡಗಿದ್ದಾರೆ.

ದಸರಾ ಮಹೋತ್ಸವ 2022: ರಾಷ್ಟ್ರಪತಿ ಸೇರಿದಂತೆ ವಿವಿಧ ಗಣ್ಯರಿಗೆ ಆಹ್ವಾನ ದಸರಾ ಮಹೋತ್ಸವ 2022: ರಾಷ್ಟ್ರಪತಿ ಸೇರಿದಂತೆ ವಿವಿಧ ಗಣ್ಯರಿಗೆ ಆಹ್ವಾನ

ಐಐಟಿಗೆ ಜಾಗ ನೀಡಿದ ರೈತರಿಗೆ ಸನ್ಮಾನ

ಐಐಟಿಗೆ ಜಾಗ ನೀಡಿದ ರೈತರಿಗೆ ಸನ್ಮಾನ

ಸೋಮವಾರ ಮಧ್ಯಾಹ್ನ ಐಐಐಟಿ ಕ್ಯಾಂಪಸ್ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅತಿಥಿಗಳು ಸೇರಿದಂತೆ ಸುಮಾರು 700 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ರಾಷ್ಟ್ರಪತಿಗಳಿಗೆ ನಿಗದಿತವಾದ ಊಟದ ಮೆನು ಇರಲಿದ್ದು, ಆ ಪ್ರಕಾರ ಊಟ ಸಿದ್ದಪಡಿಸಲಾಗುತ್ತದೆ. ಅದರೊಂದಿಗೆ ಉತ್ತರ ಕರ್ನಾಟಕ ಶೈಲಿಯ ಊಟವು ಇರಲಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಐಐಐಟಿ ನಿರ್ಮಾಣಕ್ಕೆ ಜಾಗ ನೀಡಿದ ರೈತರು ಪಾಲ್ಗೊಳ್ಳಲಿದ್ದು, ಅವರಿಗೆ ಸನ್ಮಾನ ಮಾಡಲಾಗುತ್ತದೆ. ರಾಷ್ಟ್ರಪತಿಗಳು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಬಗ್ಗೆ ಮಾತುಕತೆ ನಡೆಯುತ್ತಿದ್ದು, ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ.

ಧಾರವಾಡದ ಐಐಟಿ ಕ್ಯಾಂಪಸ್

ಧಾರವಾಡದ ಐಐಟಿ ಕ್ಯಾಂಪಸ್

ರಾಷ್ಟ್ರಪತಿ ದ್ರೌಪದಿ ಮುರ್ಮು ಐಐಟಿಯ ನೂತನ ಕ್ಯಾಂಪಸ್ ಉದ್ಘಾಟನೆ ಮಾಡಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ಪ್ರತಿನಿಧಿಗಳು, ಕೈಗಾರಿಕಾ ಪಾಲುದಾರರಾದ ಕಿಯಾನಿಕ್ಸ್, ಇನ್ಫೋಸಿಸ್‍ನ ಪ್ರತಿನಿಧಿಗಳು, ಕಾಲೇಜಿನ ಬೋರ್ಡ್ ಆಫ್ ಗವರ್ನರ್ಸ್, ಸೆನಟ್, ಹಣಕಾಸು ಸಮಿತಿ, ಕಟ್ಟಡ ಮತ್ತು ಕಾಮಗಾರಿ ಸಮಿತಿಯವರು, ಪ್ರತಿಷ್ಠಿತ ಸಂಸ್ಥೆಗಳ ಶಿಕ್ಷಣ ತಜ್ಞರು ಮತ್ತು ಉದ್ಯಮಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.

ಧಾರವಾಡದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯು ಸಾರ್ವಜನಿಕ ಖಾಸಗಿ-ಕೈಗಾರಿಕಾ ಪಾಲುದಾರಿಕೆಯ ಮಾದರಿಯಲ್ಲಿ ಭಾರತ ಸರಕಾರ, ಕರ್ನಾಟಕ ಸರಕಾರ ಹಾಗೂ ಕೈಗಾರಿಕಾ ಸಂಸ್ಥೆಯಾದ ಕಿಯೋನಿಕ್ಸ್ ಇವುಗಳ ಸಹಭಾಗಿತ್ವದೊಂದಿಗೆ 2015 ರಲ್ಲಿ ಅಸ್ತಿತ್ವಕ್ಕೆ ಬಂತು. ದೇಶದಲ್ಲಿ ಮಾಹಿತಿ ತಂತ್ರಜ್ಞಾನ ಉನ್ನತ ಶಿಕ್ಷಣ, ವೃತ್ತಿಪರ ಪರಿಣತಿ ಮತ್ತು ಕೌಶಲ್ಯವನ್ನು ಹೆಚ್ಚಿಸುವ ಉದ್ದೇಶಕ್ಕೆ ಈ ಸಂಸ್ಥೆಯನ್ನು ಸ್ಥಾಪಿಸಲಾಯಿತು. 2017 ಸಂಸತ್ತಿನ 23ನೇ ಕಾಯ್ದೆಯಡಿಯಲ್ಲಿ ಈ ಸಂಸ್ಥೆಯನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯೆಂದು ಘೋಷಿಸಲಾಗಿದೆ.

834 ವಿದ್ಯಾರ್ಥಿಗಳಿದ್ದರು

834 ವಿದ್ಯಾರ್ಥಿಗಳಿದ್ದರು

ಧಾರವಾಡ ಐಐಟಿಯಲ್ಲಿ ಹಿಂದಿನ ಶೈಕ್ಷಣಿಕ ವರ್ಷದಲ್ಲಿ 834 ವಿದ್ಯಾರ್ಥಿಗಳಿದ್ದರು. ಈ ವರ್ಷದ ಪ್ರವೇಶಾತಿ ಕೊನೆಯಲ್ಲಿ 1000 ವಿದ್ಯಾರ್ಥಿಗಳನ್ನು ಹೊಂದುವ ನಿರೀಕ್ಷೆ ಇದೆ. ಪ್ರಸ್ತುತ ಭಾರತದ ಮತ್ತು ಹೊರ ದೇಶದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿಂದ ಪಿ.ಎಚ್.ಡಿ, ಪೇಸ್ಟ್‌ ಡಾಕ್ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಪರಿಣತಿಯನ್ನು ಪಡೆದಿರುವ 36 ಅಧ್ಯಾಪಕರನ್ನು ಸಂಸ್ಥೆ ಹೊಂದಿದೆ. ಸಂಸ್ಥೆಯಲ್ಲಿ 29 ಭೋಧಕೇತರ ಸಿಬ್ಬಂದಿಗಳಿದ್ದಾರೆ. ಸಂಸ್ಥೆಯ ನಾಲ್ಕನೇ ಸರದಿಯಲ್ಲಿ ತೇರ್ಗಡೆಗೊಳ್ಳುತ್ತಿರುವವರ ಮಕ್ಕಳ ಕ್ಯುಮಿಲೇಟಿವ್ ಸರಾಸರಿ 7.0 ಇದೆ ಹಾಗೂ ಆಸಕ್ತಿಯಿರುವ ಮಕ್ಕಳಲ್ಲಿ ಶೇ.100 ರಷ್ಟು ಕೆಲಸ ಗಳಿಸಿದ್ದಾರೆ.

ಭಾರತೀಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ, ಶೈಕ್ಷಣಿಕ ಮತ್ತು ಸಂಶೋಧನಾ ಸಮುದಾಯಕ್ಕೆ ಬದಲಾವಣೆ ತರುವಂತಹ ಅಪರೂಪದ ಅವಕಾಶವನ್ನು ಈ ಸಂಸ್ಥೆ ಹೊಂದಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರವು ಈಗಾಗಲೇ ಉತ್ತರ ಕರ್ನಾಟಕದಲ್ಲಿ ತಾಂತ್ರಿಕ, ಕೃಷಿ, ವೈದ್ಯಕೀಯ, ಕಾನೂನು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಉತ್ಕೃಷ್ಟ ಶೈಕ್ಷಣಿಕ ಸಂಸ್ಥೆಯನ್ನು ಹೊಂದಿದ್ದು, ಶೈಕ್ಷಣಿಕ ನಗರಿ ಎಂದು ಪ್ರಸಿದ್ಧಿ ಪಡೆದಿದೆ. ಐಐಐಟಿ ಧಾರವಾಡ ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯಾಗಿಯೂ ಬೆಳೆಯುತ್ತಿದೆ.

ರೋಬೋಟ್ ಸಂಶೋಧನೆ

ರೋಬೋಟ್ ಸಂಶೋಧನೆ

ರಾಷ್ಟ್ರಪತಿಗಳು ಆಗಮಿಸುವ ವೇಳೆ ಧಾರವಾಡ ಐಐಟಿಯಿಂದ ರಾಷ್ಟ್ರಪತಿಗಳ ಮೂಲ ರಾಜ್ಯವಾದ ಓರಿಸ್ಸಾದ ಬುಡಕಟ್ಟು ನಿವಾಸಿಗಳಿಗಾಗಿ ಬಹುಭಾಷಾ ಧ್ವನಿಅನುವಾದ ಮಾಡುವ ರೋಬೋಟ್ ಯಂತ್ರವನ್ನು ಸಿದ್ಧಪಡಿಸಲಾಗಿದೆ. ಈ ಸಂಸ್ಥೆಯು ಉನ್ನತ ಮಟ್ಟದಲ್ಲಿ ತಯಾರಿಸುತ್ತಿರುವ ಹುಮುನೊಯ್ಡ ರೋಬೋಟ್ ಯಂತ್ರದ ಮಾಹಿತಿಯನ್ನು ರಾಷ್ಟ್ರಪತಿಗಳ ಗಮನಕ್ಕೆ ತರಲಾಗುತ್ತದೆ.

ಅತ್ಯಾಧುನಿಕ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನವನ್ನು ಬಳಸಿಕೊಂಡು ಬುಡಕಟ್ಟು ಭಾಷೆಗಳಿಂದ ಇತರ ಭಾಷೆಗಳಿಗೆ ಧ್ವನಿಭಾಷಾನುವಾದದ ಉಪಕರಣವನ್ನು ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆಯೆಂದು ಸಂಸ್ಥೆಯ ಇಸಿಇ ವಿಭಾಗದ ಪ್ರಾಧ್ಯಾಪಕರು ಹಾಗೂ ಈ ಯೋಜನೆಯ ಪ್ರಧಾನ ಪರೀಕ್ಷಕರಾದ ಡಾ. ಕೆ. ಟಿ. ದೀಪಕ ತಿಳಿಸಿದ್ದಾರೆ. ಪ್ರಸ್ತುತ ಈ ರೋಬೋಟ್ ತಂತ್ರಜ್ಞಾನದಲ್ಲಿ ಬುಡಕಟ್ಟು ಜನರಿಗೆ ಇಂಗ್ಲೀಷ್ ಭಾಷೆಯಲ್ಲಿ ಲಭ್ಯವಿರುವ ಮಾಹಿತಿಯ ಬುಡಕಟ್ಟಿನ ಭಾಷೆಯಲ್ಲಿ ದೊರೆಯಲಿದೆ.

English summary
President of India Droupadi Murmu will inaugurate the new campus of the Indian Institute of Information Technology, Dharwad (IIIT) on September 26th, 2022
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X