ಹುಬ್ಬಳ್ಳಿ - ಧಾರವಾಡ ಅವಳಿ ನಗರದಲ್ಲಿ ಹೊಸ ಸಮಸ್ಯೆ, ಜಿಲ್ಲಾಡಳಿತ ಎಚ್ಚರಿಕೆ!
ಹುಬ್ಬಳ್ಳಿ - ಧಾರವಾಡ ಅವಳಿ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಅಪಾಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು. ಆಘಾತಕಾರಿ ಅಂಶವೊಂದನ್ನು ಧಾರವಾಡ ಜಿಲ್ಲಾಡಳಿತ ಇದೀಗ ಬಹಿರಂಗಪಡಿಸಿದೆ. ಅಪರಾಧಮುಕ್ತ ಅವಳಿನಗರ ಮಾಡಲು ಪೊಲೀಸ್ ಹಾಗೂ ಜಿಲ್ಲಾಡಳಿತ ಮುಂದಾಗಿದ್ದು. ಯುವ ಸಮೂಹ ಕೈ ಜೋಡಿಸಿ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಮನವಿ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಹುಬ್ಬಳ್ಳಿ - ಧಾರವಾಡದಲ್ಲಿ ನಡೆಯುತ್ತಿರುವ ವಿವಿಧ ಆಘಾತಕಾರಿ ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ ಯುವಕರಿಗೆ ಎಚ್ಚರಿಕೆಯನ್ನೂ ನೀಡಲಾಗಿದೆ.
ಮಾದಕವಸ್ತುಗಳ ಮತ್ತು ಸಂಚಾರ ನಿಯಮಗಳ ಬಗ್ಗೆ ನಿರಂತರವಾಗಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಜನಜಾಗೃತಿ ಮೂಡಿಸಲಾಗುತ್ತಿದೆ. ಅವಳಿನಗರ ಅಪರಾಧ ಮುಕ್ತವಾಗಿ ಮಾಡಲು ಪೊಲೀಸ್ ಮತ್ತು ಜಿಲ್ಲಾಡಳಿತದೊಂದಿಗೆ ಯುವಸಮೂಹ ಕೈ ಜೋಡಿಸಬೇಕು ಮತ್ತು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದ್ದಾರೆ.

ಭಾನುವಾರದಂದು (ಮಾರ್ಚ್ 9ಕ್ಕೆ) ಬೆಳಿಗ್ಗೆ ಮಹಾನಗರ ಪೊಲೀಸ್ ಆಯುಕ್ತಾಲಯ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಡ್ರಗ್ಸ್, ಅಪರಾಧ ಮುಕ್ತ ನಗರವಾಗಿ ಮಹಾನಗರ ಸೇರಿದಂತೆ ಧಾರವಾಡ ಜಿಲ್ಲೆ ರೂಪಿಸಲು ಹಮ್ಮಿಕೊಂಡಿದ್ದ ಪೊಲೀಸ್ ಹಾಗೂ ನಾಗರಿಕರಿಂದ ಕೂಡಿದ್ದ ಪೊಲೀಸ್ ರನ್- 2025 ಮ್ಯಾರಾಥನ್ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ್ದಾರೆ.
ಕೇವಲ ದಿನಾಚರಣೆಗಳಿಂದ ನಮ್ಮ ಉದ್ದೇಶ ಸಫಲವಾಗುವದಿಲ್ಲ. ಅದನ್ನು ವ್ಯಕ್ತಿಗತವಾಗಿ ಮತ್ತು ಸಾಮಾಜಿಕವಾಗಿ ಅನುಷ್ಠಾನಕ್ಕೆ ತಂದಾಗ ಸಾರ್ಥಕವಾಗುತ್ತದೆ. ಅವಳಿ ನಗರ ಸೇರಿದಂತೆ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಉತ್ತಮವಾಗಿ ಕೆಲಸ ಮಾಡುತ್ತಿದೆ. ಅಪರಾಧಗಳ ಸಂಖ್ಯೆ ಇಳಿ ಮುಖವಾಗಿದೆ ಎಂದೂ ಅವರು ಹೇಳಿದ್ದಾರೆ. ಧಾರವಾಡದಲ್ಲಿ ಅಪರಾಧಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಸಮಾಧಾನಪಡುವ ಸಂದರ್ಭದಲ್ಲಿಯೇ ಆಘಾತಕಾರಿ ವಿಷಯವನ್ನೂ ದಿವ್ಯಪ್ರಭು ಅವರ ಹಂಚಿಕೊಂಡಿದ್ದಾರೆ.
ಇಲಾಖೆಗಳು ಹೆಚ್ಚು ಜನಪರ ಮತ್ತು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾರ್ವಜನಿಕರ ಸಹಕಾರ ಮತ್ತು ಸಕ್ರಿಯವಾಗಿ ಭಾಗವಹಿಸುವುದು ಮುಖ್ಯವಾಗಿದೆ. ಡ್ರಗ್ಸ್ ನಿಯಂತ್ರಣಕ್ಕೆ ಹಾಗೂ ರಸ್ತೆ ಅಪಘಾತಗಳನ್ನು ತಪ್ಪಿಸಿ ಸಂಚಾರ ನಿಯಮಗಳನ್ನು ಉತ್ತಮವಾಗಿ ನಿರ್ವಹಿಸಲು ಯುವಕ, ಯುವತಿಯರ ಸಹಕಾರಬೇಕು. ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಿ, ಸಕ್ರಿಯವಾಗಿ ಭಾಗವಹಿಸಬೇಕು. ಪೊಲೀಸ್ ರನ್-2025 ಗೆ ಯುವ ಸಮೂಹದಿಂದ ಉತ್ತಮ ಸ್ಪಂದನೆ ಮೂಡಿದೆ ಎಂದು ಅವರು ತಿಳಿಸಿದ್ದಾರೆ.

ಮುಂದುವರಿದು ಅವಳಿನಗರ ಸೇರಿದಂತೆ ಧಾರವಾಡ ಜಿಲ್ಲೆಯನ್ನು ಸಶಕ್ತವನ್ನಾಗಿ ಮಾಡುವುದಕ್ಕೆ ಎಲ್ಲರೂ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು. ಪೊಲೀಸ್ ಇಲಾಖೆ ಉತ್ತಮವಾಗಿ ಕೆಲಸ ಮಾಡುತ್ತಿದೆ. ಧಾರವಾಡ ಜಿಲ್ಲೆ ಹಾಗೂ ಆಯುಕ್ತಾಲಯದ ಎಲ್ಲ ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಕೆಲಸ ಮಾಡುತ್ತಿವೆ. ಇದರಿಂದಾಗಿ ಇದು ನಮ್ಮ ಪೊಲೀಸ್ ನಮ್ಮ ಹೆಮ್ಮೆ ಆಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಮಾತನಾಡಿ, ಅವಳಿ ನಗರವನ್ನು ಶಾಂತಿ ಮತ್ತು ಸುಂದರ, ಅಪರಾಧ ಮುಕ್ತ ಮಾಡುವಲ್ಲಿ ಪೊಲೀಸ್ ಇಲಾಖೆ ಹತ್ತಾರು ರೀತಿಯ ಕಾರ್ಯಕ್ರಮಗಳನ್ನು ಸಂಘಟಿಸಿ, ಸಾರ್ವಜನಿಕರ ಭಾಗವಹಿಸುವಿಕೆ ಹೆಚ್ಚಿಸುತ್ತಿದೆ. ಪ್ರತಿಯೊಬ್ಬರಿಗೂ ದೈಹಿಕ ಮತ್ತು ಮಾನಸಿಕ ಫಿಟ್‌ನೆಸ್ ಬೇಕು. ಅದನ್ನು ಸಾಧಿಸುವದರಿಂದ ಉತ್ತಮ ವಾತಾವರಣ ಕಾಣಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪೊಲೀಸ್ ರನ್-2025 ಕಾರ್ಯಕ್ರಮದಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಯುವಕ, ಯುವತಿಯರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಾರ್ವಜನಿಕ ಸಂಘ, ಸಂಘಟನೆಗಳು ಮತ್ತು ಸಮಾಜದ ಗಣ್ಯರು ಭಾಗವಹಿಸಿದ್ದಾರೆ. ತಮ್ಮೆಲ್ಲರ ಸಕ್ರಿಯ ಪಾಲ್ಗೊಳ್ಳುವಿಕೆ ನಮಗೆ ಸಂತೋಷ ಮತ್ತು ಹೆಮ್ಮೆ ತಂದಿದೆ. ಎಲ್ಲರ ಸಹಕಾರದಲ್ಲಿ ಅವಳಿನಗರವನ್ನು ಶಾಂತಿ, ಸುವ್ಯವಸ್ಥೆ ಮತ್ತು ಸಾಮರಸ್ಯದ ಊರಾಗಿ ಕಾಪಾಡಿಕೊಳ್ಳೋಣ ಎಂದು ಅವರು ಹೇಳಿದರು.
ಡ್ರಗ್ಸ್ ಮತ್ತು ಅಪಘಾತ ಪ್ರಕರಣ ಹೆಚ್ಚಳ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ಅವರು ಮಾತನಾಡಿ, ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಮಾಡಲು ತಮ್ಮೆಲ್ಲರ ಸಹಕಾರಬೇಕು. ಡ್ರಗ್ಸ್ ಸೇವನೆಯಿಂದ ವಾಹನ ಅಪಘಾತ, ಕಳ್ಳತನ, ಹಲ್ಲೆ, ಕೊಲೆ ಅಂತಹ ಪ್ರಕರಣಗಳು ನಡೆಯುತ್ತವೆ. ಈ ಅಪರಾಧಗಳು ಒಂದಕ್ಕೊಂದು ಆಂತರಿಕ ಸಂಪರ್ಕ ಹೊಂದಿವೆ ಎಂದರು.
ಹೌದು ಹುಬ್ಬಳ್ಳಿ - ಧಾರವಾಡ ನಗರದಲ್ಲಿ ಅಪರಾಧ ಪ್ರಕರಣಗಳು ಇಳಿಕೆಯಾಗುತ್ತಿದೆ ಎಂದು ಸಂತೋಷಪಡುವ ಸಂದರ್ಭದಲ್ಲಿಯೇ ಈ ಆಘಾತಕಾರಿ ಅಂಶವು ಬೆಳಕಿಗೆ ಬಂದಿದೆ. ಡ್ರಗ್ಸ್‌ನಿಂದ ಯುಕವರು ಅಡ್ಡದಾರಿ ಹಿಡಿಯುತ್ತಿದ್ದಾರೆ ಎನ್ನುವ ಅಂಶವನ್ನು ಜಿಲ್ಲಾಡಳಿತ ಬಹಿರಂಗಪಡಿಸಿದೆ.
ಅವಳಿನಗರ ಸೇರಿ ಧಾರವಾಡ ಜಿಲ್ಲೆಯಲ್ಲಿ ಪ್ರತಿವರ್ಷ ರಸ್ತೆ ಅಪಘಾತದಲ್ಲಿ ಸುಮಾರು 500 ಜನ ಮೃತಪಡುತ್ತಿದ್ದಾರೆ ಎನ್ನುವ ಆಘಾತಕಾರಿ ಅಂಶವನ್ನು ಅವರು ಹಂಚಿಕೊಂಡಿದ್ದಾರೆ. ಇದು ದೇಶದಲ್ಲಿ 1.50 ಲಕ್ಷದಷ್ಟಿದೆ. ಬಹುತೇಕ ಪ್ರಕರಣಗಳಿಗೆ ಮದ್ಯ ಸೇವನೆ, ಸ್ಪೀಡ್ ಡ್ರೈವಿಂಗ್ ಮತ್ತು ನಿರ್ಲಕ್ಷ್ಯದ ಚಾಲನೆ ಕಾರಣವಾಗಿವೆ. ಯುವಕರು ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸಿ ವಾಹನ ಚಾಲನೆ ಮಾಡಬೇಕು. ಯುವಕರ ಸಹಕಾರ ಮುಖ್ಯವಾಗಿದೆ. ಫಿಟ್‌ನೆಸ್ ಪಾರ್ ಆಲ್ ಎಂಬ ತತ್ತ್ವದಡಿ ಪೊಲೀಸ್ ರನ್ ಯಶಸ್ವಿಗೊಳಿಸೋಣ ಎಂದು ಎಸ್.ಪಿ.ಡಾ.ಗೋಪಾಲ ಬ್ಯಾಕೋಡ ಅವರು ತಿಳಿಸಿದರು.
ಸಭೆಯಲ್ಲಿ ಮಾಜಿ ಸಂಸದ ಐ.ಜಿ.ಸನದಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಉಪ ಪೊಲೀಸ ಆಯುಕ್ತರಾದ ರವೀಶ ಸಿ.ಆರ್., ಮಾನಿಂಗ ನಂದಗಾಂವಿ, ಹೆಚ್ಚುವರಿ ಪೊಲೀಸ ಅಧೀಕ್ಷಕ ನಾರಾಯಣ ಭರಮನಿ, ಉದ್ಯಮಿ ಡಾ.ವಿ.ಎಸ್.ವಿ.ಪ್ರಸಾದ ಅವರು ಸೇರಿದಂತೆ ನಗರದ ವಿವಿಧ ಗಣ್ಯರು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಮುಖಂಡರು ಭಾಗವಹಿಸಿದ್ದರು.
ಪೊಲೀಸ್ ರನ್ -2025 ದಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿ, ಶಾಲಾ- ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ, ಸಂಸ್ಥೆಗಳ ಸದಸ್ಯರು, ಯುವಕರ ಗುಂಪುಗಳು ಭಾಗವಹಿಸಿದ್ದವು. ಪೊಲೀಸ್ ರನ್ -2025 ದಲ್ಲಿ 10 ಕೀ.ಮಿ ಮತ್ತು ಐದು ಕೀ.ಮಿ ಮ್ಯಾರಾಥಾನ್ ಆಯೋಜಿಸಲಾಗಿತ್ತು. ಕಿತ್ತೂರು ಚನ್ನಮ್ಮ ವೃತ್ತದಿಂದ ಆರಂಭವಾಗಿ ತೋಳನಕೆರೆ ತಟದಲ್ಲಿ ಕಾರ್ಯಕ್ರಮ ಮುಕ್ತಾಯವಾಯಿತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications