ಹುಬ್ಬಳ್ಳಿ: ಜಾರ್ಜ್ ಪ್ರತಿಕೃತಿ ದಹಿಸಿದ ಬಿಜೆಪಿ ಕಾರ್ಯಕರ್ತರು

By: ಹುಬ್ಬಳ್ಳಿ ಪ್ರತಿನಿಧಿ
Subscribe to Oneindia Kannada

ಹುಬ್ಬಳ್ಳಿ,ಜುಲೈ, 15: ಆತ್ಮಹತ್ಯೆ ಮಾಡಿಕೊಂಡ ಡಿವೈಎಸ್ಪಿ ಗಣಪತಿ ಅವರ ಸಾವಿಗೆ ಸಚಿವ ಕೆ.ಜೆ.ಜಾರ್ಜ್ ಕಾರಣ, ಜಾರ್ಜ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಸ್ಥಳೀಯ ದುರ್ಗದಬೈಲ್ ನಲ್ಲಿ ಪ್ರತಿಭಟನೆಯನ್ನು ನಡೆಸಿದ ಬಿಜೆಪಿ ಕಾರ್ಯಕರ್ತರು ಸಚಿವ ಜಾರ್ಜ್ ಪ್ರತಿಕೃತಿ ದಹಿಸಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.[ಸಿಐಡಿ ವರದಿ ಸೋರಿಕೆಯಾಗಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ]

karnataka

ಕೊಲೆಗಡುಕ ಸರಕಾರ, ದಕ್ಷ ಅಧಿಕಾರಿಗಳಿಗೆ ಸಾವಿನ ಭಾಗ್ಯ ನೀಡುವ ಸರಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರನ್ನುದ್ದೇಶಿಸಿ ಸಂಸದ ಪ್ರಹ್ಲಾದ ಜೋಶಿ ಮಾತನಾಡಿದರು.[ಹುಬ್ಬಳ್ಳಿ ಬಸ್ ನಿಲ್ದಾಣದಲ್ಲಿ ವೈಫೈ: ಧಾರವಾಡಕ್ಕೂ ಶೀಘ್ರ]

ರಾಜ್ಯ ಸರಕಾರದ ಆಡಳಿತ ವ್ಯವಸ್ಥೆ ಕುಸಿದಿದೆ, ವಿಧಾನ ಸೌಧದಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರೂ ಅದಕ್ಕೆ ಕ್ಯಾರೆ ಮಾಡುತ್ತಿಲ್ಲ. ಹಲವಾರು ವಿಧೇಯಕಗಳನ್ನು ವಿಧಾನ ಮಂಡಲದಲ್ಲಿ ಚರ್ಚಿಸದೇ ಅಂಗೀಕಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಆದ್ದರಿಂದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕರೆಯಿಸಿಕೊಂಡು ಚರ್ಚಿಸಬೇಕು ಎಂದರು.

ರಾಜ್ಯಪಾಲರೇ ಜಾರ್ಜ್ ರಾಜೀನಾಮೆಗೆ ಸೂಚನೆ ನೀಡಬೇಕೆಂದು ಹೇಳಿದ ಜೋಶಿ, ಅಧಿವೇಶನವನ್ನು ಮುಂದೂಡಿದರೆ ತಾವು ಸುಮ್ಮನಿರಲ್ಲ ಈ ಕುರಿತು ಸಂಸತ್ತಿನಲ್ಲಿಯೂ ಚರ್ಚಿಸುತ್ತೇವೆ ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Hubballi: BJP demanded resignation of Bengaluru Development Minister K J George regarding DySP MK Ganapathi Suicide case. Hubballi BJP Yuva Morcha members gathered at Durgadbail on 15 July 2016.
Please Wait while comments are loading...