ಕುಂದಗೋಳ ಉಪ ಚುನಾವಣೆಗೆ ಆಯೋಗ ಸಿದ್ಧ, 214 ಮತಗಟ್ಟೆ ಸ್ಥಾಪನೆ
ಧಾರವಾಡ, ಮೇ 16 : ಧಾರವಾಡ ಜಿಲ್ಲೆಯ ಕುಂದಗಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧವಾಗಿದೆ. 214 ಮತಗಟ್ಟೆಗಳಲ್ಲಿ ಮೇ 19ರಂದು ಮತದಾನ ನಡೆಯಲಿದೆ.
ಕುಂದಗೋಳ ಉಪಚುನಾವಣೆಗೆ ನಡೆಯುವ ಮತದಾನಕ್ಕೆ ಮುನ್ನ ಮೇ.18 ರಂದು ಕುಂದಗೋಳದ ಹರಭಟ್ಟ ಮಹಾವಿದ್ಯಾಲಯ ಆವರಣದಲ್ಲಿ ಮಸ್ಟರಿಂಗ್ ಕಾರ್ಯ ನಡೆಯಲಿದೆ. ಕ್ಷೇತ್ರದಲ್ಲಿ 1,89,435 ಮತದಾರರಿದ್ದಾರೆ. ಒಟ್ಟು 214 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಚುನಾವಣಾ ಕರ್ತವ್ಯಕ್ಕೆ 968 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಪ್ರತಿ ಮತಗಟ್ಟೆಗೆ ಒಂದರಂತೆ ಕಂಟ್ರೋಲ್ ಯುನಿಟ್, ಬ್ಯಾಲೆಟ್ ಯುನಿಟ್ ಹಾಗೂ ವಿವಿಪ್ಯಾಟ್ ಗಳನ್ನು ಒದಗಿಸಲಾಗುತ್ತದೆ.

ಹೆಚ್ಚುವರಿಯಾಗಿ 43 ಕಂಟ್ರೋಲ್ ಯುನಿಟ್, 44 ಬ್ಯಾಲೆಟ್ ಯುನಿಟ್ ಹಾಗೂ 157ವಿವಿಪ್ಯಾಟ್ ಗಳನ್ನು ಕಾಯ್ದಿರಿಸಲಾಗಿದೆ. ತಾಂತ್ರಿಕ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಬಿಇಎಲ್ ಇಂಜಿನಿಯರ್‌ಗಳನ್ನು ಒಳಗೊಂಡ ಮೂರು ತಂಡಗಳನ್ನು ರಚಿಸಲಾಗಿದೆ.
ಪೊಲೀಸ್ ಬಂದೋಬಸ್ತ್ : ಉಪಚುನಾವಣೆಗೆ ಇಬ್ಬರು ಡಿವೈಎಸ್ಪಿ, 6 ಪೊಲೀಸ್ ಇನ್ಸ್ ಪೆಕ್ಟರ್ ಗಳು , 17 ಪಿಎಸ್ ಐ , 41 ಎ ಎಸ್ ಐ, 114 ಮುಖ್ಯಪೇದೆಗಳು, 144 ಪೊಲೀಸ್ ಕಾನ್ಸ್ ಟೇಬಲ್ ಗಳು, 216 ಗೃಹರಕ್ಷಕ ದಳ ಸಿಬ್ಬಂದಿ ಮತ್ತು 68 ಜನ ಅರೆಸೇನಾಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕ್ಷೇತ್ರದಲ್ಲಿ 38 ಸೂಕ್ಷ್ಮ ಹಾಗೂ 33 ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಪ್ರತಿ ಮತಗಟ್ಟೆಗೆ ಇಬ್ಬರು ಆರಕ್ಷಕ ಸಿಬ್ಬಂದಿ , ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಿಗೆ ಅರೆಸೇನಾಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.
ಎಲ್ಲಾ 214 ಮತಗಟ್ಟೆಗಳಿಗೆ ವಿದ್ಯುತ್, ಕುಡಿಯುವ ನೀರು, ನೆರಳು, ಶೌಚಾಲಯ, ಮತದಾನ ಮಾಡಲು ಉತ್ತಮ ಗುಣಮಟ್ಟದ ಪ್ರತ್ಯೇಕ ವಿಭಾಗ, ವಿಕಲಚೇತನ ಮತದಾರರು ಇರುವ ಕಡೆಗಳಲ್ಲಿ ಇಳಿಜಾರು ನಿರ್ಮಾಣ ಮಾಡಲಾಗಿದೆ. 25 ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
ಎಡಗೈ ಮಧ್ಯದ ಬೆರಳಿಗೆ ಶಾಹಿ : ಏಪ್ರಿಲ್ 23ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ ಮತದಾರರಿಗೆ ಎಡಗೈ ತೋರು ಬೆರಳಿಗೆ ಚುನಾವಣಾ ಆಯೋಗದ ಅಳಿಸಲಾಗದ ಶಾಹಿ ಹಾಕಲಾಗಿದೆ. ಆದ್ದರಿಂದ, ಮೇ 9ರಂದು ನಡೆಯುವ ಚುನಾವಣೆಯಲ್ಲಿ ಎಡಗೈ ಮಧ್ಯದ ಬೆರಳಿಗೆ ಶಾಹಿ ಹಾಕಲು ಆಯೋಗ ಸೂಚನೆ ಕೊಟ್ಟಿದೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications