ಚುನಾವಣೆ ವೇಳೆ ನವಲಗುಂದ ಕಾಂಗ್ರೆಸ್ಸಿನಲ್ಲಿ ಸೂತಕ

ಧಾರವಾಡ, ಮೇ 09: ನವಲಗುಂದ ‌ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಪ್ರಚಾರ ನಡೆಸುವಾಗ ಚಕ್ಕಡಿಯಿಂದ ಬಿದ್ದು, ಗಾಯಗೊಂಡಿದ್ದ ಧಾರವಾಡ ಗ್ರಾಮೀಣ ಜಿಲ್ಲಾ ‌ಅಧ್ಯಕ್ಷ ಎಚ್.ವಿ.ಮಾಡಳ್ಳಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನವಲಗುಂದ ‌ಪಟ್ಟಣದಲ್ಲಿ ಮಾಡಳ್ಳಿ ಕಾರ್ಯಕರ್ತರೊಂದಿಗೆ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಚಕ್ಕಡಿ ಮೇಲಿಂದ ಆಯತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ನಂತರ ಅವರನ್ನು ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಗೆ ಸೇರಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಯಿತು, ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಬೆಳಗಿನ ಜಾವ 3.30ಕ್ಕೆ ನಿಧನರಾಗಿದ್ದಾರೆ.

Elections 2018 : Dharwad district Congress H.V. Madalli passes away

ಮೇ 7ರಂದು ಸಂಜೆ ನವಲಗುಂದ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಶಲವಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಪ್ರಚಾರ ನಡೆಸುವಾಗ ಈ ದುರ್ಘಟನೆ ನಡೆದಿತ್ತು.

ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ 5 ಗಂಟೆ ನವಲಗುಂದ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನೆರವೇರಲಿದೆ. ಮೃತರು ಮೂವರು ಪುತ್ರಿಯರು ಹಾಗೂ ಒಬ್ಬ ಪುತ್ರ ವೆಂಕಟೇಶ ಸೇರಿ ಅಪಾರಬಂಧು ಬಳಗವನ್ನು ಅಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+