ಕರುಣೆ ತೋರದ ವರುಣ: ಹಣ ಕೊಟ್ಟು ನೀರು ಖರೀದಿ, ಊಹೆಗೂ ಮೀರಿದ ರೈತರ ಕಷ್ಟದ ಬದುಕು!
ಧಾರವಾಡ, ಜುಲೈ 1: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಸಾಲದ ಸೋಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು ಮತ್ತೊಂದು ಹಂಗಾಮಿಗೆ ಸಿದ್ಧತೆಯಾಗಬೇಕಿತ್ತು. ತುಂತುರು ಮಳೆ ಕೂಡ ಸುರಿಯದ ಪರಿಣಾಮ ಬರದ ಭಯ ಸೃಷ್ಟಿಯಾಗಿದೆ. ಸ್ಥಿತಿ ಹೀಗೆ ಮುಂದುವರಿದರೆ ರೈತನ ಪರಿಸ್ಥಿತಿ ದಯನೀಯವಾಗಲಿದೆ.

ಬಾರೋ ಮಳೆರಾಯ ಎಂದು ಒಣ ಬೇಸಾಯ ನಂಬಿಕೊಂಡಿರುವ ಜಿಲ್ಲೆಯ ಧಾರವಾಡ, ಗದಗ ಹಾವೇರಿ ಸೇರಿದಂತೆ ಎಲ್ಲೆಡೆ ಈಗ ಆತಂಕ ಆವರಿಸಿದೆ. ಮಳೆ ಬಂದರೆ ಮಾತ್ರ ಕೃಷಿ ಎನ್ನುವ ಕೃಷಿಕರು ಆಕಾಶದೆಡೆ ದೃಷ್ಟಿ ಬೀರಿದ್ದಾರೆ. ಜೋರಾಗಿ ಮಳೆ ಸುರಿದು ಎಲ್ಲೆಡೆ ಹಸಿರು ಕಾಣುವ ಬದಲು ಬಿಸಿಲು, ಬೀಸುತ್ತಿರುವ ಗಾಳಿ ಮಾತ್ರ ರೈತನ ಎದೆಬಡಿತ ಹೆಚ್ಚಿಸಿದೆ.
ಇನ್ನು ಜೂನ್‌ನಿಂದ ಆರಂಭಗೊಳ್ಳುವ ಮುಂಗಾರು ಮಳೆ ಸೆಪ್ಟೆಂಬರ್‌ವರೆಗೆ ಸುರಿಯುತ್ತದೆ. ಜೂನ್, ಜುಲೈನಲ್ಲಿ ಅಲ್ಪಸ್ವಲ್ಪ ಮಳೆ ಸುರಿದಿದ್ದು ಬಿಟ್ಟರೆ ಮೋಡಗಳ ಚೆಲ್ಲಾಟ ಮಾತ್ರ ಕಣ್ಣಿಗೆ ಕಟ್ಟುತ್ತಿದೆ. ಹವಾಮಾನ ಇಲಾಖೆ ಪ್ರಕಾರ ಇನ್ನು ಹದಿನೈದು ದಿನಗಳಲ್ಲಿ ಮಳೆಯಾಗಬೇಕು. ವರುಣ ಕೃಪೆ ತೋರದಿದ್ದರೆ ರೈತರು ಹದಗೊಳಿಸಿದ ಭೂಮಿಯಲ್ಲಿ ಬೆಳೆ ಕಾಣಲು ಸಾಧ್ಯವಿಲ್ಲ.

ಬಾಡಿದ ಬೆಳೆ ಜಿಲ್ಲೆಯಲ್ಲಿ ಬಿತ್ತನೆ ಕೈಗೊಂಡಿದ್ದ ಸಜ್ಜೆ, ಮೆಕ್ಕೆಜೋಳ ಹಾಗೂ ಸೂರ್ಯಕಾಂತಿ ಬೆಳೆಗಳು ನೀರಿಲ್ಲದೇ ಒಣಗುತ್ತಿವೆ. ರೈತರು ಮಳೆ ಬರುತ್ತದೆ ಎಂಬ ನಿರೀಕ್ಷೆಯಲ್ಲಿ ಅಲ್ಪ ಸ್ವಲ್ಪ ಮಳೆಯಾದಾಗ ಬಿತ್ತನೆ ಕೈಗೊಂಡಿದ್ದರು. ಇದೀಗ ಬೆಳೆಯುವ ಹಂತದಲ್ಲಿರುವ ಬೆಳೆ ಒಣಗಿ ಹಾನಿಯಾಗುವ ಸ್ಥಿತಿ ಎದುರಾಗಿದೆ. ನೀರಾವರಿ ಸೌಲಭ್ಯವಿರುವ ರೈತರು ಕೈಗೊಂಡ ಬಿತ್ತನೆಗೆ ಉತ್ತಮ ಫಲಿತಾಂಶ ದೊರೆತಿದೆ. ಒಣ ಬೇಸಾಯದಲ್ಲಿ ಮಾತ್ರ ನಿರೀಕ್ಷಿತ ಪ್ರಗತಿ ಇಲ್ಲದೆ ರೈತ ವರ್ಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
-
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು











Click it and Unblock the Notifications