Vande Bharat Express: ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಮೊದಲ ಬಲಿ
ಧಾರವಾಡ, ಜೂನ್ 29: ಉತ್ತರ ಕರ್ನಾಟಕ ಭಾಗದ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಮಂಗಳವಾರ ವಿದ್ಯುಕ್ತವಾಗಿ ಚಾಲನೆ ದೊರೆತಿದ್ದು, ಧಾರವಾಡದಿಂದ ಬೆಂಗಳೂರಿಗೆ ಪ್ರತಿನಿತ್ಯ ಸಂಚರಿಸುತ್ತಿದೆ. ಭಾರತೀಯ ರೈಲ್ವೆ ಇಲಾಖೆಯ ಬಹುನೀರಿಕ್ಷಿತ ಯೋಜನೆಯಲ್ಲಿ ಒಂದಾಗಿರುವ ವಂದೇ ಭಾರತ್ ರೈಲಿಗೆ ಸಿಲುಕಿ ಧಾರವಾಡದಲ್ಲಿ ಮೊದಲ ಬಲಿಯಾಗಿದೆ.
ಮೊನ್ನೆಯಷ್ಟೇ ತನ್ನ ಪ್ರಯಾಣ ಆರಂಭಿಸಿದ ವಂದೇ ಭಾರತ್ ರೈಲಿಗೆ ಹಸುವೊಂದು ಸಿಲುಕಿ ಸಾವನ್ನಪ್ಪಿದ ಘಟನೆ ಅರಸಿಕೇರೆ ವಲಯದಲ್ಲಿ ನಡೆದಿದೆ. ಆಹಾರ ಹುಡುಕುತ್ತ ಬಂದಿದ್ದ ಹಸು ರೈಲಿಗೆ ಸಿಲುಕಿ ಸಾವನ್ನಪ್ಪಿದೆ. ಇನ್ನು ಅಪಘಾತ ಸಂಭವಿಸುತ್ತದ್ದಂತೆಯೇ ರೈಲನ್ನು ನಿಲ್ಲಿಸಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಮೃತ ಹಸುವನ್ನು ಟ್ರಾಕ್‌ನಿಂದ ಹೊರಗೆ ಹಾಕಲಾಗಿದೆ.

ಇನ್ನು ನಿನ್ನೆಯಷ್ಟೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೂಡ ನಡೆದಿತ್ತು. ವಾರಣಾಸಿಯಿಂದ ದೆಹಲಿಗೆ ಬರುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದು ಒಬ್ಬ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಫಿರೋಜಾಬಾದ್ ಜಿಲ್ಲೆಯ ಜಲೇಸರ್ ಪಟ್ಟಣ ಮತ್ತು ಪೋರಾ ಗ್ರಾಮದ ನಡುವೆ ತುಂಡ್ಲಾ ಬಳಿ ಘಟನೆ ನಡೆದಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ರೈಲು ಬರುವ ವೇಳೆ ವ್ಯಕ್ತಿ ಅತಿಕ್ರಮ ಪ್ರವೇಶ ಮಾಡಿದ್ದರು ಎನ್ನಲಾಗಿತ್ತು.
ಇನ್ನು ಧಾರವಾಡ- ಬೆಂಗಳೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇರಿದಂತೆ 5 ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ರಾಣಿ ಕಮಲಾಪತಿ ರೈಲು ನಿಲ್ದಾಣದಿಂದ ಮಂಗಳವಾರ ಚಾಲನೆ ನೀಡಿದ್ದರು. ರಾಣಿ ಕಮಲಾಪತಿ-ಜಬಲ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್, ಮಡಗಾಂವ್ (ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಾಗಿತ್ತು.












Click it and Unblock the Notifications