ಧಾರವಾಡ: 5 ದಿನಗಳ ಮಾವು ಮೇಳ, ವಿಶೇಷತೆಗಳು
ಧಾರವಾಡ, ಮೇ 14: ಮಾವು ಬೆಳೆಗಾರರು ಮತ್ತು ಜನರ ನಡುವೆ ವಹಿವಾಟಿಗೆ ಉತ್ತಮ ವೇದಿಕೆ ಕಲ್ಪಿಸಲು ಧಾರವಾಡದಲ್ಲಿ 5 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಲಾಗಿದೆ. ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಈ ಮೇಳವನ್ನು ಉದ್ಘಾಟಿಸಿದ್ದಾರೆ. ಈ ಮೇಳದಲ್ಲಿ 30 ಮಾವು ಬೆಳೆಗಾರರು ಮಳಿಗೆಗಳನ್ನು ಹಾಕಿದ್ದಾರೆ. ಸಾರ್ವಜನಿಕರಿಂದ ಸಹ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.
ಮಾವು ಪ್ರದರ್ಶನ ಮತ್ತು ಮಾರಾಟ ಮೇಳ 2025 ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯ ಪ್ರಭು, "ಮಾವು ಬೆಳೆಗಾರರಿಗೆ ಮಾವು ಮಾರಾಟ ಮತ್ತು ವಿವಿಧ ಮಾವುಗಳ ಪ್ರದರ್ಶನಕ್ಕೆ ಅವಕಾಶವಾಗುವಂತೆ 5 ದಿನಗಳವರೆಗೆ ತೋಟಗಾರಿಕೆ ಕಚೇರಿ ಆವರಣದಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ" ಎಂದು ಹೇಳಿದರು.

"ಧಾರವಾಡ ನಗರದ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಮಾವು ಬೆಳೆಗಾರರಿಂದ ಮತ್ತು ಸಾರ್ವಜನಿಕರಿಂದ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಧಾರವಾಡ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಇದು ಸಹ ಒಂದಾಗಿದೆ" ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
"ಮಾವು ಮಾರಾಟ ಮೇಳದಿಂದ ರೈತರಿಗೆ ಮತ್ತು ಮಾವು ಬೆಳೆಗಾರರಿಗೆ ಅನುಕೂಲವಾಗುತ್ತದೆ. ಸಾರ್ವಜನಿಕರಿಗೆ ಅದರಲ್ಲೂ ಗ್ರಾಹಕರಿಗೆ ಉತ್ತಮ ಬೆಲೆಗೆ, ರುಚಿಕರವಾದ ಮಾವು ಸಿಗುವುದಕ್ಕೆ ಇದೊಂದು ಸುವರ್ಣ ಅವಕಾಶವಾಗಿದೆ" ಎಂದರು.
"ಧಾರವಾಡ ಜಿಲ್ಲೆಯಲ್ಲಿ ಮಾವು ಒಂದು ಪ್ರಮುಖ ಬೆಳೆಯಾಗಿದ್ದು, ಒಟ್ಟು 29,610 ಎಕರೆ, ಅಂದಾಜು 8,881 ರೈತರು ಮಾವು ಬೆಳೆಯುತ್ತಿದ್ದಾರೆ, ಸಾಂಪ್ರದಾಯಕವಾಗಿ 4 ಟನ್, ಎಕರೆ ಇಳುವರಿ ಬರುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಇಳುವರಿಯಲ್ಲಿ ಕುಂಠಿತವಾಗಿದ್ದು ಸುಮಾರು 1 ಟನ್, ಎಕರೆಯಂತೆ ಜಿಲ್ಲೆಯಿಂದ ಒಟ್ಟು 29,000 ಟನ್ ಇಳುವರಿಯನ್ನು ಅಂದಾಜಿಸಬಹುದಾಗಿದೆ" ಎಂದು ಜಿಲ್ಲಾಧಿಕಾರಿಗಳು ಹೇಳಿದರು.
"ಧಾರವಾಡ ಜಿಲ್ಲೆಯು ಸಾಂಪ್ರದಾಯಕವಾಗಿ ಮಾವು ಬೆಳೆಯುವ ರಾಜ್ಯದ ಮುಖ್ಯ ಭಾಗವಾಗಿದ್ದು, ಪ್ರಮಖವಾಗಿ ಧಾರವಾಡ, ಕಲಘಟಗಿ, ಹುಬ್ಬಳ್ಳಿ ಮತ್ತು ಕುಂದಗೋಳ ತಾಲೂಕುಗಳಲ್ಲಿ ಮಾವು ಬೆಳೆಯನ್ನು ಬೆಳೆಯಲು ಸೂಕ್ತವಾದ ವಾತಾವರಣವಿರುವುದರಿಂದ ಉತ್ತಮ ಮಾವು ಬೆಳೆಯನ್ನು ಬೆಳೆಯಬಹುದಾಗಿದೆ" ಎಂದರು.
"ರೈತರಿಗೆ ಒಳ್ಳೆಯ ಬೆಲೆ ಸಿಗಬೇಕು ಎಂಬ ಉದ್ದೇಶದಿಂದ ಮೇಳವನ್ನು ಆಯೋಜನೆ ಮಾಡಿದ್ದೇವೆ. ಧಾರವಾಡ ಜಿಲ್ಲೆಗೆ ಸರಕಾರದಿಂದ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಆದೇಶ ನೀಡಿ, ಈಗಾಗಲೇ ಸುಮಾರು 7 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಉದ್ದೇಶಿತ ಕೇಂದ್ರವನ್ನು ಧಾರವಾಡ ತಾಲೂಕಿನ ಕುಂಭಾಪುರ ಫಾರ್ಮದಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗುವುದು. ಮಾವು ಅಭಿವೃದ್ಧಿ ಕೇಂದ್ರವು ಜಿಲ್ಲೆಯ ರೈತರಿಗೆ ಮಾತ್ರವಲ್ಲದೇ, ಸುತ್ತಲಿನ ಜಿಲ್ಲೆಗಳಲ್ಲಿ ಮಾವು ಬೆಳೆಯುವ ರೈತರಿಗೂ ಪ್ರಯೋಜನವಾಗಲಿದೆ" ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಮಾವು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಸುಂದರ ಶಾ, ಪೈರಿ, ಜಿರಗಿಮಾವು, ಉಪ್ಪಿನಕಾಯಿ ತಳಿ, ಅರ್ಕಾ ನೀಲಕಿರಣ, ಸುವರ್ಣರೇಖಾ, ಧಾರವಾಡ ರಸಪೂರಿ, ಖಾದರ, ಫರ್ನಾಡಿನ್, ಕಿಶನ ಭಾಗ್, ಫಜಲಿ, ದಿಲಪಸಂದ, ರತ್ನಾ, ಗೂಂಗ, ಹಿಮಸಾಗರ, ಆಮ್ರಪಾಲ, ಲಕನೌ ಸಫೇದ, ನಿರಂಜನ, ಸಿಂಧು, ಕಲಪಡಿ, ನೀಲಗೋವಾ, ಮಲ್ಲಿಕಾ, ಅರ್ಕಾ ಪುನೀತ, ಲಾಂಗ್ರಾ, ನಾಜೂಕ ಪಸಂದ, ಚರಕು ರಸಂ ಮುಂತಾದ ಹಲವಾರು ತಳಿಗಳ ಮಾವಿನ ಹಣ್ಣುಗಳು ಮಾರಾಟಕ್ಕಾಗಿ ಲಭ್ಯ ಇದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications