ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ!

ಬೆಂಗಳೂರು, ಜ. 08: ಧಾರವಾಡ ತಾಲೂಕಿನ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್‍ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಡಲಗಾ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಇಂದು ಕೂಡ ಜಾಮೀನು ಸಿಕ್ಕಿಲ್ಲ. ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಜನವರಿ 22ರವರೆಗೆ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶಿಸಿದೆ.

ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯಗೊಂಡಿತ್ತು. ಅದೇ ಹಿನ್ನೆಲೆಯಲ್ಲಿ ಮತ್ತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಯ್ತು. ಅರ್ಜಿ ವಿಚಾರಣೆ ನಡೆಸಿದ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ಹಿಂಡಲಗಾ ಜೈಲಿನಲ್ಲಿರುವ ವಿನಯ್ ಕುಲಕರ್ಣಿ ಬಂಧನದ ಅವಧಿಯನ್ನು ಇನ್ನೂ 14 ದಿನಗಳ ಕಾಲ ವಿಸ್ತರಿಸಿ ಆದೇಶ ಮಾಡಿದೆ.

Former Minister Vinay Kulkarni has not been granted bail today

ಇದೇ ಜನವರಿ 22ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ, ಧಾರವಾಡದ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಕಳೆದ 2 ತಿಂಗಳುಗಳಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಮತ್ತೆ 14 ದಿನಗಳ ಕಾಲ ಹಿಂಡಲಗಾ ಜೈಲೇ ಅವರಿಗೆ ಗತಿಯಾಗಿದೆ. ವಿನಯ ಕುಲಕರ್ಣಿ ಅವರ ಪರವಾಗಿ ಈಗಾಗಲೇ ಹೈಕೋರ್ಟ್‌ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ. ಹೈಕೋರ್ಟ್‌ನಲ್ಲಿ ಜಾಮೀನು ಸಿಕ್ಕಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+