ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೆ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ

By Lekhaka
|
Google Oneindia Kannada News

ಧಾರವಾಡ, ನವೆಂಬರ್ 23: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ಪೊಲೀಸರಿಂದ ಬಂಧನಕ್ಕೊಳಗಾಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಸದ್ಯಕ್ಕೆ ಬಿಡುಗಡೆಯಾಗುವಂತೆ ಕಾಣುತ್ತಿಲ್ಲ.

ಡಿಸೆಂಬರ್ 7ರವರೆಗೆ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಿಸಿ ಧಾರವಾಡ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.

ನ.23ರವರೆಗೆ ನ್ಯಾಯಾಂಗ ಬಂಧನದಲ್ಲಿ ವಿನಯ್ ಕುಲಕರ್ಣಿನ.23ರವರೆಗೆ ನ್ಯಾಯಾಂಗ ಬಂಧನದಲ್ಲಿ ವಿನಯ್ ಕುಲಕರ್ಣಿ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ.9ರಂದು ಜಿಲ್ಲಾ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಸೋಮವಾರ ನ್ಯಾಯಾಂಗ ಬಂಧನದ ಮೊದಲ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಧಾರವಾಡ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು. ವಿಚಾರಣೆ ನಂತರ ವಿನಯ್ ಕುಲಕರ್ಣಿಗೆ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್​ ಆದೇಶಿಸಿದೆ. ಡಿ.7ರವರೆಗೆ ನ್ಯಾಯಾಂಗ ಬಂಧನದಲ್ಲಿರಲು ಸೂಚಿಸಿದೆ.

 Dharwad: Former Minister Vinay Kulkarni Judicial Custody Extended Till Dec 7

Recommended Video

ಮಹಾಮಾರಿಗೆ Gandhi ಮರಿ ಮೊಮ್ಮಗ ಬಲಿ | Oneindia Kannada

2016ರಲ್ಲಿ ಯೋಗೇಶ್ ಗೌಡ ಬರ್ಬರವಾಗಿ ಕೊಲೆಯಾಗಿದ್ದರು. ಈ ಸಂಬಂಧ ಸಿಬಿಐ ವಿಚಾರಣೆ ಕೈಗೆತ್ತಿಕೊಂಡಿದ್ದು, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಹಾಗೂ ತನ್ನ ಪ್ರಭಾವದಿಂದ ಪ್ರಕರಣ ಮುಚ್ಚಿ ಹಾಕಿರುವ ಆರೋಪದಲ್ಲಿ ನ.5ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು.

English summary
Dharwad 3rd additional sessions court ordered to extend Former minister vinay kulkarni judicial custody till dec 7. He was arrested in murder case of dharwad zilla panchayat member yogesh gowda
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X