ತಡರಾತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ ಚರ್ಚಿಸಿದ್ದೇನು?
ಧಾರವಾಡ, ಏಪ್ರಿಲ್ 02: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮಾಜಿ ಸಂಸದ ಐ.ಜಿ.ಸನ್ನದಿ ಪುತ್ರ ಶಾಕಿರ್ ಸನದಿಗೆ ಫೈನಲ್ ಆಗಿದೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕಾಂಗ್ರೆಸ್ ವರಿಷ್ಠರ ಫೇಕ್ ಪತ್ರದೊಂದಿಗೆ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ, ಏ. 1ರಂದು ತಡರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‌ನಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾಗಿ, ಟಿಕೆಟ್ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತನಗೇ ಕೊಡಿಸುವಂತೆ ವಿನಯ್, ರಾಜ್ಯ ನಾಯಕರಾದ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಎಂ.ಬಿ. ಪಾಟೀಲ್ ಕಡೆಯಿಂದ ಕಾಂಗ್ರೆಸ್ ವರಿಷ್ಠರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.












Click it and Unblock the Notifications