• search
  • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹುಬ್ಬಳ್ಳಿ-ಧಾರವಾಡ : ಬಿಆರ್‌ಟಿಎಸ್‌ ಯೋಜನೆ ಶೀಘ್ರ ಪೂರ್ಣ

|

ಹಾಸನ, ನವೆಂಬರ್ 02 : 'ಕೆಲವೇ ದಿನಗಳಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ನಡುವೆ ಬಿ.ಆರ್‌.ಟಿ.ಎಸ್ ಬಸ್ ಸಂಚಾರ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ' ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ.

ದೀಪಾವಳಿ ವಿಶೇಷ ಪುರವಣಿ

ಧಾರವಾಡದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿದ ಬಳಿಕ ದೀಪಾ ಚೋಳನ್ ಅವರು ಮಾತನಾಡಿದರು.

ಹುಬ್ಬಳ್ಳಿ-ಧಾರವಾಡ ನಡುವೆ 'ಚಿಗರಿ' ಸಂಚಾರ

'ಹುಬ್ಬಳ್ಳಿ-ಧಾರವಾಡ ಅವಳಿ ನಗರದ ನಡುವೆ ತ್ವರಿತ ಸಾರಿಗೆ ಸಂಪರ್ಕ ಕಲ್ಪಿಸುವ ದೃಷ್ಟಿಯಿಂದ ಬಿ.ಆರ್.ಟಿ.ಎಸ್.ಯೋಜನೆ ಕೈಗೆತ್ತಿಕೊಳ್ಳಲಾಗಿದೆ. 929 ಕೋಟಿ ರೂ.ಗಳ ಯೋಜನೆ ಇದಾಗಿದೆ' ಎಂದು ಹೇಳಿದರು.

ಬಿಎಂಟಿಸಿ ಮಾದರಿಯಲ್ಲಿ ಹುಬ್ಬಳ್ಳಿ-ಧಾರವಾಡಕ್ಕೆ ಪ್ರತ್ಯೇಕ ಸಾರಿಗೆ ನಿಗಮ

'ಯೋಜನೆಯ ಅನ್ವಯ ಬಸ್ ತಂಗುದಾಣ, ಡಿಪೋ, ಮೇಲ್ಸೇತುವೆ, ಪಥ ಬದಲಾವಣೆ ಮೊದಲಾದ ಶೇ.95ರಷ್ಟು ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಅವಳಿನಗರದ ಮಧ್ಯೆ 32 ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ' ಎಂದರು.

ಹುಬ್ಬಳ್ಳಿ-ಧಾರವಾಡದಲ್ಲಿ ಆಟೋ ಪ್ರಯಾಣದರ ಏರಿಕೆ

'ಒಟ್ಟು 929 ಕೋಟಿ ರೂಪಾಯಿಗಳ ಈ ಯೋಜನೆಯಲ್ಲಿ ಈಗಾಗಲೇ 826.26 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಈಗಾಗಲೇ ಬಿ.ಆರ್‌.ಟಿ.ಎಸ್ ಬಸ್‌ಗಳ ಪ್ರಾಯೋಗಿಕ ಸಂಚಾರ ಆರಂಭವಾಗಿದೆ' ಎಂದು ವಿವರಣೆ ನೀಡಿದರು.

ಹುಬ್ಬಳ್ಳಿ-ಧಾರವಾಡ ಅವಳಿ ನಗರದ ನಡುವೆ ಪ್ರಸ್ತುತ ಬೇಂದ್ರೆ ಖಾಸಗಿ ಬಸ್‌ಗಳು ಸಂಚಾರ ನಡೆಸುತ್ತಿವೆ. ಈ ಬಸ್ ಸೇವೆಯ ಪರ್ಮಿಟ್ ಜೂನ್ 2019ಕ್ಕೆ ಅಂತ್ಯಗೊಳ್ಳಲಿದೆ. ಬಳಿಕ ಬಸ್ ಸೇವೆಯ ಪರ್ಮಿಟ್ ನವೀಕರಿಸದಿರಲು ತೀರ್ಮಾನಿಸಲಾಗಿದೆ.

English summary
Dharwad Deputy Commissioner M.Deepa said that, Bus Rapid Transit System (BRTS) between Hubballi and Dharwad city would shortly start functioning on a full scale.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X