'ಗಾಂಧೀ ಜಯಂತಿ' ಆಚರಿಸಿದ ಹುಬ್ಬಳ್ಳಿಯಲ್ಲಿ ಮಾಜಿ ಪ್ರಧಾನಿಗೆ ಅಪಮಾನವಾಯಿತೇ! ಏನಿದು ಆರೋಪ

ಹುಬ್ಬಳ್ಳಿ, ಅಕ್ಟೋಬರ್ 02: ಕರ್ನಾಟಕ ರಾಜ್ಯ ಸೇರಿದಂತೆ ದೇಶದಾದ್ಯಂತ ಅಕ್ಟೋಬರ್ 2 ಗಾಂಧೀ ಜಯಂತಿ ಜೊತೆಗೆ ಭಾರತ ರತ್ನ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಅರ್ಥಪೂರ್ಣವಾಗಿ ನಡೆದಿದೆ. ಕೆಲವೆಡೆ ಅಹಿತಕರ ಘಟನೆಗಳು ನಡೆದಿವೆ. ಹುಬ್ಬಳ್ಳಿಯಲ್ಲಿ ಗಾಂಧಿ ಜಯಂತಿ ಆಚರಣೆ ವೇಳೆ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಹೌದು, ಹುಬ್ಬಳ್ಳಿಯಲ್ಲಿ ಮಹಾತ್ಮಾ ಗಾಂಧೀಜಿ ಜಯಂತಿಯನ್ನು ಆಚರಿಸಲಾಯಿತು. ಆದರೆ, ಸ್ವತಂತ್ರ ಭಾರತದ ಮೊದಲ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರಿಗೆ ಅವಮಾನ ಮಾಡಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಹಾಗೂ ವಿವಿಧ ಸಂಘಟನೆಗಳು ಕೇವಲ ಗಾಂಧಿ ಜಯಂತಿ ಆಚರಣೆ ಮಾಡಿ ಮಾಜಿ ಪ್ರಧಾನಿ ಅವಮಾನ ಎಸಗಿದ್ದಾರೆ. ಸೌಜನ್ಯಕ್ಕೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಒಂದು ಫೋಟೋ ಇಟ್ಟಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

Gandhi Jayanti Hubballi Dharwad Municipal Corporation Insult for Ex PM Lal Bahadur Shastri

ಮಹಾನಗರ ಪಾಲಿಕೆ ಮತ್ತು ವಿವಿಧ ಸಂಘಟನೆಗಳಿಂದ ಈ ಯಡವಟ್ಟು ಜಗುರಿಗಿದೆ. ಹುಬ್ಬಳ್ಳಿಯ ಕಿಮ್ಸ್ ಗೇಟ್ ಬಳಿಯ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪಾಲಿಕೆ ಮೇಯರ್ ರಾಮಣ್ಣ ಬಡಿಗೇರ ಅವರು, ಪಾಲಿಕೆ ಆಯುಕ್ತ ಈಶ್ವರ್ ಉಳ್ಳಾಗಡ್ಡಿ ಮತ್ತಿತರರು ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಬಗ್ಗೆ ಒಂದು ಮಾತು ಆಡಲಿಲ್ಲ. ಇದರಿಂದ ಮಾಜಿ ಪ್ರಧಾನಿ ಯೊಬ್ಬರಿಗೆ ಅವಮಾನ ಮಾಡಿದಂತಾಗಿದೆ ಎಂದು ದೂರಲಾಗಿದೆ.

ಬೆಂಗಳೂರಿನಲ್ಲಿ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ 155ನೇ ಜನ್ಮ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಕುಮಾರಕೃಪ ರಸ್ತೆಯ ಗಾಂಧಿ ಭವನದಲ್ಲಿ ಬುಧವಾರ ಬೆಳಗ್ಗೆ ಗಾಂಧಿ ಪ್ರತಿಮೆಗೆ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸಿದರು. ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು "ಗಾಂಧಿ ನಡಿಗೆ" ಹಾಗೂ ''ಸ್ವಚ್ಛತಾ ಆಂದೋಲನ ಪ್ರತಿಜ್ಞಾ ವಿಧಿ" ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.

ಈ "ಗಾಂಧಿ ನಡಿಗೆ"ಯು ನಗರದ ಗಾಂಧಿ ಭವನದಿಂದ ಪ್ರಾರಂಭವಾಗಿ ಶಿವಾನಂದ ವೃತ್ತ, ರೇಸ್ ಕೋರ್ಸ್ ವೃತ್ತ, ಬಸವೇಶ್ವರ ವೃತ್ತ, ವಾಲ್ಮಿಕಿ ವೃತ್ತ, ವಿಧಾನಸೌಧದ ಪಶ್ಚಿಮ‌ ದ್ವಾರದ ಮೂಲಕ ಗಾಂಧಿ ಪ್ರತಿಮೆ ಬಳಿಯವರೆಗೆ ಸುಮಾರು 01 ಕಿ.ಮೀ ಸಾಗಿ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

Gandhi Jayanti Hubballi Dharwad Municipal Corporation Insult for Ex PM Lal Bahadur Shastri

''ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ"

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ 'ಸ್ವಚ್ಛತೆ ಪ್ರತಿಜ್ಞಾ ವಿಧಿ'ಯನ್ನು ಅಕ್ಟೊಂಬರ್ 02 ರಂದು ಸನ್ಮಾನ್ಯ ಮುಖ್ಯಮಂತ್ರಿಗಳು ಭೋಧಿಸಿದರು. ಈ ವೇಳೆ ಉಪ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಅಧಿಕಾರಿ/ಸಿಬ್ಬಂದಿಗಳು ಹಾಗೂ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ನೇರವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಜೊತೆಗೆ 800ಕ್ಕೂ ಹೆಚ್ಚು ಸರ್ಕಾರಿ, ಅನುದಾನಿತ ಹಾಗು ಖಾಸಗಿ ಶಾಲಾ-ಕಾಲೇಜುಗಳಿಂದ 1 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಮೂಲಕ ಸ್ವಚ್ಛತಾ ಪ್ರತಿಜ್ಞೆ ಸ್ವೀಕರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+