ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಶ್ಚಿಮ ಘಟ್ಟ ಉಳಿಸಲು ಮುಖ್ಯಮಂತ್ರಿಗಳಿಗೆ ಸೌಮ್ಯಾ ರೆಡ್ಡಿ ಪತ್ರ

|
Google Oneindia Kannada News

ಧಾರವಾಡ, ಏಪ್ರಿಲ್ 07; ಗೋವಾ ರಾಜ್ಯಕ್ಕೆ ಹೆಚ್ಚುವರಿ ವಿದ್ಯುತ್ ಒದಗಿಸಲು ಪಶ್ಚಿಮಘಟ್ಟದ ಮೂಲಕ ಹಾದು ಹೋಗುವ ವಿದ್ಯುತ್ ಮಾರ್ಗಕ್ಕೆ ಅವಕಾಶ ನೀಡಬಾರದು ಎಂದು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಲಾಗಿದೆ.

ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಈ ಕುರಿತು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ವಿದ್ಯುತ್ ಮಾರ್ಗ ನಿರ್ಮಾಣಕ್ಕೆ ಗೋವಾದ ಸಂಸ್ಥೆ ಈಗಾಗಲೇ ಕರ್ನಾಟಕ ಸರ್ಕಾರಕ್ಕೆ ಪತ್ರವನ್ನು ಬರೆದಿದೆ.

ಶಿರಸಿ-ಕುಮಟಾ ರಸ್ತೆ: ಹೈಕೋರ್ಟ್ ಅನುಮತಿ ಪಡೆಯದೇ ಮರ ತೆರವು ಶಿರಸಿ-ಕುಮಟಾ ರಸ್ತೆ: ಹೈಕೋರ್ಟ್ ಅನುಮತಿ ಪಡೆಯದೇ ಮರ ತೆರವು

ಧಾರವಾಡ ಜಿಲ್ಲೆಯ ನರೇಂದ್ರದಿಂದ ಗೋವಾಕ್ಕೆ ವಿದ್ಯುತ್ ಮಾರ್ಗ ನಿರ್ಮಾಣವಾಗಲಿದೆ. ಗೋವಾ ತಮ್ನಾರ್ ಟ್ರಾನ್ಸ್‌ಮಿಷನ್ ಪ್ರಾಜೆಕ್ಟ್ ಲಿಮಿಟೆಡ್ ಎಂಬ ಸಂಸ್ಥೆ ಯೋಜನೆ ಕೈಗೊಳ್ಳಲಿದ್ದು, ಗೋವಾ ಮತ್ತು ಕರ್ನಾಟಕದಲ್ಲಿ ಅರಣ್ಯ ಭೂಮಿ ಪರಿವರ್ತನೆಗೆ ಮನವಿ ಸಲ್ಲಿಕೆ ಮಾಡಿದೆ.

ಹೆಲಿ ಟೂರಿಸಂಗೆ ಆಕ್ಷೇಪ: ಮರಗಳನ್ನು ಉಳಿಸಲು ಅಭಿಯಾನ ಹೆಲಿ ಟೂರಿಸಂಗೆ ಆಕ್ಷೇಪ: ಮರಗಳನ್ನು ಉಳಿಸಲು ಅಭಿಯಾನ

Goa Power Line Project Sowmya Reddy Letter To CM

ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಭೂಮಿ ಪರಿವರ್ತನೆಗೆ ಮನವಿಯನ್ನು ಮಾಡಲಾಗಿದೆ. ಈ ಎಲ್ಲಾ ಜಾಗಗಳು ರಾಜ್ಯದ ಪಶ್ಚಿಮಘಟ್ಟದ ಪ್ರದೇಶಕ್ಕೆ ಸೇರಿವೆ. ಪ್ರಾಣಿ, ಪಕ್ಷಿಗಳ ಆವಾಸ ಸ್ಥಾನವಾಗಿದೆ.

ಭೂಕುಸಿತ ಅಧ್ಯಯನ ಸಮಿತಿ ವರದಿ ಸಲ್ಲಿಕೆ: ಶಿಫಾರಸುಗಳು ಭೂಕುಸಿತ ಅಧ್ಯಯನ ಸಮಿತಿ ವರದಿ ಸಲ್ಲಿಕೆ: ಶಿಫಾರಸುಗಳು

ಈ ಯೋಜನೆಗೆ ಧಾರವಾಡದ 4.7 ಹೆಕ್ಟೇರ್, ಬೆಳಗಾವಿಯ 101 ಹೆಕ್ಟೇರ್, ಉತ್ತರ ಕನ್ನಡದ 70 ಹೆಕ್ಟೇರ್ ಅರಣ್ಯ ಭೂಮಿ ಪರಿವರ್ತನೆ ಮಾಡಲು ಅರ್ಜಿ ಸಲ್ಲಿಸಲಾಗಿದೆ. ದಾಂಡೇಲಿ, ಭೀಮಗಢ, ಕಾಳಿ ಸಂರಕ್ಷಿತ ಪ್ರದೇಶದಲ್ಲಿ ವಿದ್ಯುತ್ ಮಾರ್ಗ ಹಾದು ಹೋಗಲಿದೆ.

ಈ ಯೋಜನೆಗೆ ಸರ್ಕಾರ ಒಪ್ಪಿಗೆ ಕೊಟ್ಟರೆ ಸುಮಾರು 60 ಸಾವಿರ ಮರಗಳನ್ನು ಕಡಿಯಬೇಕಾಗುತ್ತದೆ. ಗೋವಾದಲ್ಲಿಯೂ ಯೋಜನೆಗೆ ವಿರೋಧ ವ್ಯಕ್ತವಾಗಿದೆ. ಕರ್ನಾಟಕದಲ್ಲಿ ಯೋಜನೆಗೆ ಒಪ್ಪಿಗೆ ಕೊಡಬಾರದು ಎಂದು ಪತ್ರದಲ್ಲಿ ಸೌಮ್ಯಾ ರೆಡ್ಡಿ ಒತ್ತಾಯಿಸಿದ್ದಾರೆ.

English summary
Sowmya Reddy Congress MLA of Jayanagara wrote CM B. S. Yediyurappa to not allowed for Goa power line project. Project will harm 177 hectares of western ghats forest land.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X