ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾಕಾಶಿ ಧಾರವಾಡದಲ್ಲಿ ಹಾಸ್ಟೆಲ್‌ ಸಮಸ್ಯೆ: ಸಾವಿರಾರು ವಿದ್ಯಾರ್ಥಿಗಳು ಊರಿಗೆ ವಾಪಸ್‌

By ಧಾರವಾಡ ಪ್ರತಿನಿಧಿ
|
Google Oneindia Kannada News

ಧಾರವಾಡ, ಡಿಸೆಂಬರ್‌ 13: ವಿದ್ಯಾಕಾಶಿ ಧಾರವಾಡದಲ್ಲಿ ವಿದ್ಯಾಭ್ಯಾಸ ಪಡೆಯಲು ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ಬರುತ್ತಾರೆ. ಹೀಗೆ ಬರುವ ವಿದ್ಯಾರ್ಥಿಗಳು ವಸತಿ ನಿಲಯಕ್ಕಾಗಿ ಅರ್ಜಿ ಸಲ್ಲಿಸುತ್ತಾರೆ. ಪ್ರಸಕ್ತ ವರ್ಷ ಐದು ಸಾವಿರ ವಿದ್ಯಾರ್ಥಿಗಳು ವಸತಿ ನಿಲಯಕ್ಕಾಗಿ ಅರ್ಜಿ ಸಲ್ಲಿಸಿದ್ದರು.

ಈ ಬಾರಿ ಅರ್ಜಿ ಸಲ್ಲಿಸಿದವರಲ್ಲಿ ಕೇವಲ 492 ವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೆಲ್ ಸೌಲಭ್ಯ ಸಿಕ್ಕಿದ್ದು, ವಸತಿ ನಿಲಯದಲ್ಲಿ ಅವಕಾಶ ಸಿಗದ ವಿದ್ಯಾರ್ಥಿಗಳು ಮರಳಿ ತಮ್ಮ ಊರಿನತ್ತ ತೆರಳುವಂತಾಗಿದೆ.

Breaking; ಹುಬ್ಬಳ್ಳಿ BRTS ಸ್ಮಾರ್ಟ್‌ಕಾರ್ಡ್‌ನಲ್ಲಿ ಭಾರೀ ರಿಯಾಯಿತಿBreaking; ಹುಬ್ಬಳ್ಳಿ BRTS ಸ್ಮಾರ್ಟ್‌ಕಾರ್ಡ್‌ನಲ್ಲಿ ಭಾರೀ ರಿಯಾಯಿತಿ

ಧಾರವಾಡಕ್ಕೆ ಪಿಯುಸಿ ಹಾಗೂ ಪದವಿ ಪಡೆಯಲು ಬಂದ ಒಟ್ಟು 5, 618 ವಿದ್ಯಾರ್ಥಿಗಳು ಹಾಸ್ಟೆಲ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಅದರಲ್ಲಿ ವಸತಿ ನಿಲಯ 492 ವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೆಲ್ ಪ್ರವೇಶಾತಿ ನೀಡಲಾಗಿದೆ. ಹೀಗಾಗಿ ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ ಸಿಗದೆ, ವಸತಿಗೆ ಬೇರೆ ಮಾರ್ಗ ಕಾಣದೆ ತಮ್ಮ ಊರುಗಳಿಗೆ ವಾಪಸ್ ತೆರಳುತ್ತಿದ್ದಾರೆ.

Government Hostels Problem In Dharwad District

ಇದು ಕೇವಲ ಹಿಂದುಳಿದ ವರ್ಗಗಳ ಇಲಾಖೆಯ ಕಥೆ. ಇನ್ನು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಹಾಸ್ಟೆಲ್‌ಗಳಿಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೂ ಕೂಡ ಸಮರ್ಪಕವಾಗಿ ವಸತಿ ನಿಲಯ ಸಿಕ್ಕಿಲ್ಲ. ಅವರ ಸಮಸ್ಯೆ ಕೂಡ ಇದೇ ಆಗಿದೆ.

ಸಾವಿರಾರು ವಿದ್ಯಾರ್ಥಿಗಳಿಗೆ ವಸತಿ ನಿಲಯ ಸಿಗದ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ, ಧಾರವಾಡ ಜಿಲ್ಲೆಯಲ್ಲಿ ವಸತಿ ನಿಲಯದ ಸಮಸ್ಯೆ ಇರುವುದು ನಿಜ. ಈಗಾಗಲೇ ಬಾಡಿಗೆ ಕಟ್ಟಡ ಹಿಡಿದು ಕೊಡುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Government Hostels Problem In Dharwad District

ಇದು ಕೇವಲ ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳ ಸಂಖ್ಯೆ ಕಥೆಯಾಗಿದೆ. ಇನ್ನು ಹಾಸ್ಟೆಲ್‌ಗಾಗಿ ಸ್ನಾತಕೋತ್ತರ ಹಾಗೂ ಉಳಿದ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಶಿಕ್ಷಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕೂಡಲೇ ಕ್ರಮ ಕೈಗೊಳ್ಳಬೇಕಾಗಿದೆ.

English summary
Government Hostels problem in Dharwad District, More than four thousand students go back to their village.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X