ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಅನಗತ್ಯ ಚರ್ಚೆಗೆ ಅವಕಾಶ ಇಲ್ಲ- ಸ್ಪೀಕರ್ ಕಾಗೇರಿ
ಧಾರವಾಡ, ನವೆಂಬರ್ 17: ಈ ಬಾರಿ ಬೆಳಗಾವಿಯಲ್ಲೇ ಹತ್ತು ದಿನಗಳ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಈ ಬಗ್ಗೆ ಅಂತಿಮವಾಗಿ ಕ್ಯಾಬಿನೆಟ್ ಎಷ್ಟು ದಿನ ಅಧಿವೇಶನ ನಡೆಸಲು ನಿರ್ಧರಿಸುತ್ತದೆಯೋ ಅಷ್ಟು ದಿನ ಅಧಿವೇಶನ ನಡೆಸಲಾಗುವುದು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದ ದಿನಾಂಕದ ಬಗ್ಗೆ ಚರ್ಚೆಯಾಗಿದೆ. ಈ ಬಾರಿ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಒಳ್ಳೆಯ ರೀತಿಯಲ್ಲಿ ಅಧಿವೇಶನ ನಡೆಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟದಲ್ಲಿ ನಿರ್ಧರಿಸಿ ಹೇಳಬೇಕಿದೆ. ಅದಕ್ಕಾಗಿ ನಾವೂ ಕಾಯುತ್ತಿದ್ದೇವೆ. 10 ದಿನ ಅಧಿವೇಶನ ಮಾಡಬಹುದು ಎಂದು ಚರ್ಚೆ ಮಾಡಲಾಗಿದೆ ಎಂದರು.
ಅಧಿವೇಶನಕ್ಕೆ 10 ದಿನ ಸಾಕಾಗುವುದಿಲ್ಲ ಚರ್ಚೆ ಮಾಡಲು ಸಮಯ ಸಾಕಾಗುವುದಿಲ್ಲ ಎಂಬ ಸಲಹೆಗೆ ಪ್ರತಿಕ್ರಿಯಿಸಿದ ಅವರು, ಧಾರವಾಡದ ಪತ್ರಕರ್ತರು ಅಧಿವೇಶನ ಹೆಚ್ಚು ದಿನ ನಡೆಸಲು ಮನವಿ ಮಾಡಿದ್ದಾರೆಂದು ಸರ್ಕಾರಕ್ಕೆ ಹೇಳುತ್ತೇನೆ. ಕೊನೆಗೆ ಸರ್ಕಾರ ಸಂಪುಟದಲ್ಲಿ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದರಂತೆ ಮಾಡುತ್ತೇವೆ ಎಂದರು.
ಇನ್ನು ಪ್ರತಿ ಸಲ ಅಧಿವೇಶನ ಗೊಂದಲದ ಗೂಡಾಗಿ ಕೇವಲ ಆರೋಪ ಪ್ರತ್ಯಾರೋಪ, ಪ್ರತಿಭಟನೆ, ಧರಣಿ ವಿನಾಕಾರಣ ಕಾಲ ಹಗರಣದಲ್ಲಿಯೇ ಅಧಿವೇಶನ ಮುಗಿದು ಹೋಗುತ್ತದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಈ ಬಾರಿಯ ಅಧಿವೇಶನವನ್ನು ಒಳ್ಳೆಯದಾಗಿ ಮಾಡೋಣ ಯಾವುದೇ ರೀತಿಯ ಅನಗತ್ಯವಾದ ವಿಚಾರ ಬೇಡ ಎಂದರು.

ಸಂಸ್ಕೃತಿ ಶಿಕ್ಷಣ ಸಿಗಬೇಕೆಂದು ಶಿಕ್ಷಣ ಬದಲಾವಣೆ ಮಾಡಲಾಗಿದೆ
ಇನ್ನು ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ ವಿಷಯದ ಕುರಿತು ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, 75ನೇ ಸ್ವಾತಂತ್ರ್ಯವನ್ನು ಮನೆ ಮನೆಯಲ್ಲಿ ತಿರಂಗಾ ಹಾರಿಸುವ ಮೂಲಕ ಆಚರಣೆ ಮಾಡಲಾಯಿತು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರು ನಮ್ಮ ನಡುವೆ ಇದ್ದಾರೆ. ಬ್ರಿಟಿಷರು, ಪೋರ್ಚುಗೀಸರು, ಡಚ್ಚರು, ಮೊಘಲರು ನಮ್ಮನ್ನು ಆಳಿದ್ದಾರೆ. ಶತಶತಮಾನಗಳ ಕಾಲ ಪರಕೀಯರು ಆಳ್ವಿಕೆ ನಡೆಸಿದ್ದಾರೆ.
ವ್ಯಾಪಾರಕ್ಕಾಗಿ ಬಂದವರು ನಮ್ಮನ್ನು ಆಳಿದರು. ವಿದೇಶಿಗರ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಹೋರಾಟಗಾರರ ಸ್ಮರಣೆಯನ್ನು ನಾವು ಮಾಡಿಕೊಳ್ಳಬೇಕು. ಬ್ರಿಟಿಷರು ಭಾರತೀಯರ ಹೋರಾಟದ ಕಿಚ್ಚನ್ನು ಎದುರಿಸದೇ ನಮಗೆ ಸ್ವಾತಂತ್ರ್ಯ ನೀಡಿದರು. ಶಿಕ್ಷಣ ಸಚಿವರಾಗಿದ್ದ ಸಂದರ್ಭದಲ್ಲಿ ಭಾರತೀಯ ಸಂಸ್ಕೃತಿ ಶಿಕ್ಷಣ ಸಿಗಬೇಕೆಂದು ಶಿಕ್ಷಣ ಬದಲಾವಣೆ ಮಾಡಲಾಗಿದೆ. ಗಾಂಧಿ, ಸುಭಾಷ್ ಚಂದ್ರ ಬೋಸ್, ಮದನ ಲಾಲ್ ಧಿಂಗ್ರ ಅವರ ತ್ಯಾಗ ಬಲಿದಾನ ನೆನಯಬೇಕಾಗಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ದೇಶದ ಅಭಿವೃದ್ಧಿ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ
ಭಾರತದ ಅಭಿವೃದ್ಧಿ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದ ಅವರು, ಇಂದು ದೇಶದಲ್ಲಿ ಆಹಾರ ಸ್ವಾವಲಂಬನೆ, ಆಹಾರ ಭದ್ರತೆಯನ್ನು ಸಾಧಿಸಿದ್ದೇವೆ. 30 ಕೋಟಿ ಜನಸಂಖ್ಯೆ ಇದ್ದಾಗ 295 ಕೋಟಿ ತಲಾದಾಯ ಹೊಂದಿದ್ದೇವು. 2018ರ ಅಂಕಿ ಅಂಶಗಳ ಪ್ರಕಾರ ರೂಪಾಯಿ 1,12,835 ತಲಾದಾಯ ಹೊಂದಿದ್ದೇವೆ. ಚಂದ್ರಯಾನ ಮೂಲಕ ಬಾಹ್ಯಾಕಾಶ ವಿಜ್ಞಾನದಲ್ಲಿ ಸಾಧನೆ ಮಾಡಿದ್ದೇವೆ.
ಜಗತ್ತಿನ ವಿಜ್ಞಾನಿಗಳ ಸಾಲಿಗೆ ಸೇರುವ ಮಟ್ಟದಲ್ಲಿ ಭಾರತೀಯ ವಿಜ್ಞಾನಿಗಳು ಸಾಧನೆ ಮಾಡಿದ್ದಾರೆ. ಜಗತ್ತಿನ ಬೇರೆ ಬೇರೆ ದೇಶದವರು ಭಾರತದಲ್ಲಿ ಉತ್ತಮ ಉನ್ನತ ಶಿಕ್ಷಣ ದೊರೆಯುತ್ತಿದೆ ಎಂಬುದನ್ನು ಅರಿತು ಭಾರತಕ್ಕೆ ಬರುತ್ತಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಭಾರತ ಮೈಲಿಗಲ್ಲು ಸಾಧಿಸಲಾಗಿದೆ ಎಂದರು.

ಮತಗಳು ವ್ಯಾಪಾರದ ಸರಕಾಗಬಾರದು
ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ ವಿಷಯದ ಬಗ್ಗೆ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಮತಗಳು ವ್ಯಾಪಾರದ ಸರಕಾಗಬಾರದು. ಇಡೀ ಜಗತ್ತಿನಲ್ಲಿ ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರ ಮತ್ತೊಂದಿಲ್ಲ. ಬೇರೆ ಬೇರೆ ದೇಶಗಳಲ್ಲಿ ಅರಾಜಕತೆ ಭುಗಿಲೆದ್ದಿವೆ. ಚುನಾವಣಾ ನೀತಿ ಸಂಹಿತೆ ನಿಯಮಗಳನ್ನು ನಾವು ಪಾಲಿಸಬೇಕು. ಪತ್ರಿಕಾ ರಂಗ ಸಂವಿಧಾನದ ನಾಲ್ಕನೇ ಅಂಗವಾಗಿದೆ. ಇತಿಹಾಸವನ್ನು ನಮಗೆ ನೀಡಿದ ಕೀರ್ತಿ ಪತ್ರಿಕಾ ರಂಗಕ್ಕೆ ಸಲ್ಲುತ್ತದೆ.
ಪತ್ರಕರ್ತರು, ವೈದ್ಯರು, ವಕೀಲರು ಸೇರಿದಂತೆ ಇತರರು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯನ್ನು ಅರಿತುಕೊಳ್ಳಬೇಕಿದೆ. ಹಣವನ್ನು ನ್ಯಾಯ ಮಾರ್ಗದಿಂದ ಗಳಿಸಬೇಕು. ನಮ್ಮಲ್ಲಿ ಮೊದಲು ಪರಿವರ್ತನೆ ಆಗಬೇಕು. ಸರ್ಕಾರದ ಸೌಲಭ್ಯಗಳು ಅರ್ಹರಿಗೆ ದೊರೆಯಬೇಕಾಗಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಯುವಕರು ನನ್ನ ಮತ ಮಾರಾಟಕ್ಕಿಲ್ಲ ಎಂದು ಪ್ರತಿಜ್ಞೆ ಮಾಡಬೇಕು
ಇನ್ನು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಸಂವಿಧಾನದ 10ನೇ ಅನುಸೂಚಿಯಲ್ಲಿ ಸೇರಿಸಲಾಗಿದೆ. ಚುನಾವಣೆ ವ್ಯವಸ್ಥೆಯಲ್ಲಿ ಹಲವಾರು ಬದಲಾವಣೆಗಳನ್ನು ತರಲಾಗಿದೆ. ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗಿದೆ. ಮತದಾನದ ವಯಸ್ಸನ್ನು 21 ರಿಂದ 18ಕ್ಕೆ ಇಳಿಸಲಾಯಿತು. ಆಧಾರ್ ಕಾರ್ಡ್‌ನ್ನು ಚುನಾವಣಾ ಗುರುತಿನಿ ಚೀಟಿಗೆ ಜೋಡಣೆ ಮಾಡಲಾಗುತ್ತಿದೆ. ಚುನಾವಣಾ ಖರ್ಚು ವೆಚ್ಚಕ್ಕೆ ಮಿತಿ ಹಾಕಲಾಗಿದೆ ಎಂದರು.
ಜನರು ಮೊದಲು ಸರಿಯಾದರೆ, ವ್ಯವಸ್ಥೆ ಸರಿಯಾಗುತ್ತದೆ. ಯುವಕರು ನನ್ನ ಮತ ಮಾರಾಟಕ್ಕಿಲ್ಲ ಎಂದು ಪ್ರತಿಜ್ಞೆ ಮಾಡಬೇಕು. ಈ ಅಭಿಯಾನ ಜನಾಂದೋಲನದ ರೀತಿಯಲ್ಲಿ ಬೆಳೆಯಬೇಕು. ಭಾರತವು ಯುವ ದೇಶವಾಗಿದೆ. ಚುನಾವಣಾ ಆಯೋಗ ವರ್ಷವಿಡಿ ಕಾರ್ಯಪ್ರವೃತ್ತವಾಗಬೇಕು. ಮತದಾರರನ್ನು ಜಾಗೃತಗೊಳಿಸಬೇಕಾಗಿದೆ. ಪಕ್ಷಗಳು ಆಂತರಿಕ ಪ್ರಜಾಪ್ರಭುತ್ವ ಶಕ್ತಿಯನ್ನು ಹೊಂದಬೇಕು. ರಾಜಕೀಯ ಪಕ್ಷಗಳು ದೊಡ್ಡ ಜವಾಬ್ದಾರಿ ಅರಿತು ಹೆಜ್ಜೆಯಿಡಬೇಕಿದೆ ಎಂದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications