Pendrive Prajwal: ಇದು ಹೇಸಿಗೆಯ ಕೆಲಸ, ಪ್ರಜ್ವಲ್ ಕ್ಷಮೆಗೆ ಅರ್ಹನಲ್ಲ: ಪ್ರಹ್ಲಾದ್ ಜೋಶಿ ಹೇಳಿದ್ದೇನು?
ಧಾರವಾಡ, ಜೂನ್ 01: ಒಂದು ತಿಂಗಳ ಬಳಿಕ ವಿದೇಶದಿಂದ ವಾಪಾಸ್ ಆದ ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಎಸ್‌ಐಟಿ ವಶಕ್ಕೆ ನೀಡಲಾಗಿದೆ. ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು. ಪ್ರಜ್ವಲ್ ರೇವಣ್ಣ ಕ್ಷಮಿಸಲಾರದಂತಹ ಅಪರಾಧ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹಾಸನದ ಅಶ್ಲೀಲ ಪೆನ್‌ಡ್ರೈವ್ ಪ್ರಕರಣ ಕುರಿತು ಸುದ್ದಿಗಾರರ ಜತೆ ಶನಿವಾರ ಧಾರವಾಡದಲ್ಲಿ ಮಾತನಾಡಿದ ಅವರು, ಇದೊಂದು ಗಂಭೀರ ಪ್ರಕರಣವಾಗಿದ್ದು, ಪ್ರಜ್ವಲ್‌ರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಭಾರತದಲ್ಲಿ ನಾವು ಮಹಿಳೆಯರನ್ನು ಹೆಚ್ಚು ಗೌರವದಿಂದ ಕಾಣುತ್ತೇವೆ. ಇಂತಹ ಸಮಾಜದಲ್ಲಿ ಈ ರೀತಿಯ ಘಟನೆ ನಡೆದಿರುವುದು ಹೇಸಿಗೆ ಹುಟ್ಟಿಸುವಂತಾಗಿದೆ ಮನಸ್ಸಿಗೆ ಕಿರಿಕಿರಿ ಆಗುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಪೆನ್‌ಡ್ರೈವ್ ಪ್ರಕರಣವನ್ನು ಅತ್ಯಂತ ಕಟ್ಟುನಿಟ್ಟಾಗಿ ತನಿಖೆಗೆ ಒಳಪಡಿಸಬೇಕು. ಈ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಲಿದೆ ಅನ್ನೋ ಭರವಸೆ ಇದೆ. ತ್ವರಿತ ಗತಿಯಲ್ಲಿ ತನಿಖೆ ಮುಗಿಸಿ ಗರಿಷ್ಠ ಶಿಕ್ಷೆ ಕೊಡುವಂತಾಗಬೇಕು ಎಂದು ಅವರು ಒತ್ತಾಯಿಸಿದರು.
ಪ್ರಜ್ವಲ್ ಕ್ಷಮೆ ಕೇಳಿದ ಕೂಡಲೇ ಬಿಟ್ಟು ಬಿಡಬೇಕೆ?
ಹಾಸನ ಸಂಸದ ಪ್ರಜ್ವಲ್ ರೇವಣ್ಣ ರಾಜ್ಯದ ಜನರ ಕ್ಷಮೆ ಕೇಳಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆರೋಪಿ ಸ್ಥಾನದಲ್ಲಿದ್ದವರು ಕ್ಷಮೆ ಕೇಳಿದ ಕೂಡಲೇ ಬಿಟ್ಟು ಬಿಡಲು ಆಗುವುದಿಲ್ಲ. ಯಾಕೆ ಕ್ಷಮೆ ಕೇಳಿದರು ಎಂದು ಪ್ರಜ್ವಲ್ ಉತ್ತರ ಕೊಡಲಿ.
ಅವರು ಕ್ಷಮೆ ಕೇಳುವುದಿದ್ದರೆ ಸಂತ್ರಸ್ಥರನ್ನು ಕ್ಷಮೆ ಕೇಳಲಿ. ಪ್ರಜ್ವಲ್ ರೇವಣ್ಣಗೆ ಆಗುವ ಶಿಕ್ಷೆ ಆಗಲೇಬೇಕು. ಪೆನ್ ಡ್ರೈವ್ ಹಂಚಿಕೆ ಇತ್ಯಾದಿಗಳನ್ನು ನೋಡಿದಾಗ ಪ್ರಜ್ವಲ್ ಕ್ಷಮೆಗೆ ಅರ್ಹರಲ್ಲ ಎಂದು ಜೋಶಿಯವರು ಪುನರುಚ್ಚರಿಸಿದರು.
ಸಚಿವರನ್ನು ಬಂಧಿಸಲು ಒತ್ತಾಯ
ವಾಲ್ಮೀಕ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ, ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯಿಸಿರುವ ಪ್ರಹ್ಲಾದ್ ಜೋಶಿ, ಸಚಿವ ನಾಗೇಂದ್ರ ಅವರಿಂದ ರಾಜೀನಾಮೆ ಪಡೆದು ಬಂಧಿಸಬೇಕು. ನಿಗಮದಲ್ಲಿ ನಡೆದಿರುವುದು ಬಹುದೊಡ್ಡ ಹಗರಣ. ರಾಜ್ಯ ಸರ್ಕಾರದ ಹಗರಣದಲ್ಲಿ ಸಂಪೂರ್ಣವಾಗಿ ಭಾಗಿಯಾಗಿದೆ ಎಂದು ಅವರು ಆರೋಪಿಸಿದರು.

ಯಾವ ಕಾರಣಕ್ಕೆ ನಿಗಮದ ಹಣ ಬೇರೆ ಖಾತೆಗೆ ವರ್ಗಾವಣೆ ಆಯಿತು ಅಂತ ಸರ್ಕಾರ ಹೇಳಿಲ್ಲ. ಆ ಹಣವನ್ನು ತೆಲಂಗಾಣ ಚುನಾವಣೆಗೆ ಬಳಸಿಕೊಳ್ಳಲಾಗಿದೆ. ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳದೆ ಇದ್ದಲ್ಲಿ ಈ ಹಗರಣ ಮುಚ್ಚಿ ಹೋಗುತ್ತಿತ್ತು ಎಂದರು.
ಇದು ದಪ್ಪ ಚರ್ಮದ ಸರ್ಕಾರ
ಹಗರಣದ ಹೊಣೆ ಹೊತ್ತು ಮಂತ್ರಿ ರಾಜೀನಾಮೆ ಕೊಟ್ಟಿಲ್ಲ. ಅಷ್ಟರಮಟ್ಟಿಗೆ ಇದು ದಪ್ಪ ಚರ್ಮದ ಸರ್ಕಾರ. ಸಚಿವ ನಾಗೇಂದ್ರ ಕೂಡಲೇ ರಾಜೀನಾಮೆ ಕೊಡಬೇಕು. ನಾಗೇಂದ್ರ ನನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸಬೇಕು. ಯೂನಿಯನ್ ಬ್ಯಾಂಕಿನ ಅಧಿಕಾರಿಗಳು ಆವರಣದಲ್ಲಿ ಭಾಗಿಯಾಗಿದ್ದಾರೆ. ಸರ್ಕಾರಿ ದುಡ್ಡನ್ನು ಹೊಡೆದು ಚುನಾವಣೆಗೆ ಬಳಸುವಂತಹ ವ್ಯವಸ್ಥಿತ ಷಡ್ಯಂತ್ರ ಇದಾಗಿದೆ ಎಂದು ಅವರು ವಿವರಿಸಿದರು.
ಈಶ್ವರಪ್ಪ ಕೇಸ್‌ಗೂ, ಈ ಕೇಸ್‌ಗೂ ವ್ಯತ್ಯಾಸವಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮತ್ತಿತರರನ್ನು ಪ್ರಕರಣದ ಸಂಬಂಧ ವಿಚಾರಣೆಗೆ ಗುರಿಪಡಿಸಬೇಕು. ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಬ್ಯಾಂಕ್ ನ ಹಗರಣ ಸಾಮಾನ್ಯವಾಗಿ ಸಿಬಿಐಗೆ ಹೋಗುತ್ತದೆ. ಇಷ್ಟು ದೊಡ್ಡ ಹಗರಣ ಆಗಿರುವುದರಿಂದ ರಾಜ್ಯ ಸರ್ಕಾರವೇ ಸಿಬಿಐಗೆ ರೆಫರ್ ಮಾಡಬೇಕು.
ಈಶ್ವರಪ್ಪ ಪ್ರಕರಣಕ್ಕೂ ಈ ಹಗರಣಕ್ಕೂ ಬಹಳ ವ್ಯತ್ಯಾಸವಿದೆ. ಈಶ್ವರಪ್ಪ ಪ್ರಕರಣದಲ್ಲಿ ಯಾವುದೇ ದಾಖಲೆಗಳಿರಲಿಲ್ಲ. ಈ ಪ್ರಕರಣದಲ್ಲಿ ಹಣಕಾಸು ವರ್ಗಾವಣೆಯ ದಾಖಲೆಗಳಿವೆ ಎಂದು ಅವರು ತಿರುಗೇಟು ನೀಡಿದರು.
ಕೂಡಲೇ ಸಚಿವ ನಾಗೇಂದ್ರನನ್ನು ಬಂಧಿಸಬೇಕು, ರಾಜೀನಾಮೆ ಪಡೆಯಬೇಕು. ಕಾಂಗ್ರೆಸ್ ಪಕ್ಷದಲ್ಲಿ 100 ಪರ್ಸೆಂಟ್ ಬ್ರಷ್ಟಾಚಾರದಲ್ಲಿದೆ. ಗುತ್ತಿಗೆದಾರನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂತೋಷ್ ಪಾಟೀಲ್ ಮಾದರಿಯಲ್ಲಿ ಆತ್ಮಹತ್ಯೆ ಆಗಿದೆ ಎಂದು ಹೇಳಿದರು.
ಸದ್ಯ ಮೇ 30ರಂದು ತಡರಾತ್ರಿ ವಿದೇಶದಿಂದ ಬೆಂಗಳೂರಿಗೆ ತಡರಾತ್ರಿ ಬಂದ ಪ್ರಜ್ವಲ್ ರೇವಣ್ಣ, ಮರುದಿನ ಶುಕ್ರವಾರ ವಿಶೇಷ ನ್ಯಾಯಾಲಯದ ಮುಂದೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಹಾಜರುಪಡಿಸಿ, ಆರು ದಿನ ಎಸ್‌ಐಟಿ ವಶಕ್ಕೆ ನೀಡಲಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications