ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡ; ಒಡೆದ ಹೊಲ್ತಿಕೋಟಿ ಕೆರೆ ಶಾಶ್ವತ ದುರಸ್ತಿ

|
Google Oneindia Kannada News

ಧಾರವಾಡ, ನವೆಂಬರ್ 19; ಧಾರವಾಡದ ಹೊಲ್ತಿಕೋಟಿ ಗ್ರಾಮದ ಕೆರೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದೆ. ಕೆರೆಯ ನೀರು ನುಗ್ಗಿದ ಪರಿಣಾಮ ರೈತರ ಬೆಳೆಗಳಿಗೆ ಹಾನಿಯಾಗಿದೆ. ಕೆರೆಯ ಶಾಶ್ವತ ದುರಸ್ತಿಗೆ ಆದ್ಯತೆ ನೀಡಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು.

ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕೆರೆ ಒಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಸೂಕ್ತ ತಾಂತ್ರಿಕತೆಯೊಂದಿಗೆ ಪೋಲಾಗುತ್ತಿರುವ ನೀರನ್ನು ತಡೆಯಲು ಪ್ರಯತ್ನಿಸಲಾಗುವುದು ಎಂದರು.

ದಾವಣಗೆರೆಯಲ್ಲಿ ನಿಲ್ಲದ ಮಳೆ: ರೈತರ ಮೊಗದಲ್ಲಿಲ್ಲ ಹರ್ಷದ ಕಳೆ!ದಾವಣಗೆರೆಯಲ್ಲಿ ನಿಲ್ಲದ ಮಳೆ: ರೈತರ ಮೊಗದಲ್ಲಿಲ್ಲ ಹರ್ಷದ ಕಳೆ!

ಈಗಾಗಲೇ ಕೆರೆ ಒಡೆದು ನೀರು ಪೋಲಾಗುತ್ತಿದೆ. ಮುಂಬರುವ ಎರಡು, ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ರೈತರು ಅಗತ್ಯ ಎಚ್ಚರಿಕೆಗಳನ್ನು ವಹಿಸಬೇಕು ಎಂದು ಸಚಿವರು ಹೇಳಿದರು.

ಕರ್ನಾಟಕದಲ್ಲಿ ಮಳೆ; ಶಾಲೆಗಳಿಗೆ ರಜೆ ನೀಡುವ ಹೊಣೆ ಡಿಸಿಗಳಿಗೆ ಕರ್ನಾಟಕದಲ್ಲಿ ಮಳೆ; ಶಾಲೆಗಳಿಗೆ ರಜೆ ನೀಡುವ ಹೊಣೆ ಡಿಸಿಗಳಿಗೆ

Heavy Rain Holtikoti Village Lake Damaged

ಸುಮಾರು 110 ಮಿ. ಮೀ. ಪ್ರಮಾಣದ ಮಳೆಯಾದ ಪರಿಣಾಮವಾಗಿ ಹೊಲ್ತಿಕೋಟಿ ಕೆರೆಗೆ ಒಳಹರಿವು ಹೆಚ್ಚಾಗಿದೆ. ಪರಿಣಾಮ ಕೆರೆಯ ತಡೆಗೋಡೆ ಒಡೆದು ಸುಮಾರು 27 ಎಕರೆ ವಿಸ್ತಾರದ ಕೆರೆಯಲ್ಲಿ ಸಂಗ್ರಹವಾಗಿದ್ದ ದೊಡ್ಡ ಪ್ರಮಾಣದ ನೀರು ಪೋಲಾಗಿದೆ.

ದಾವಣಗೆರೆಯಲ್ಲಿ ಮಳೆ; ಬೆಳೆ ಹಾನಿ ವೀಕ್ಷಿಸಿದ ಜಿಲ್ಲಾಧಿಕಾರಿಗಳು ದಾವಣಗೆರೆಯಲ್ಲಿ ಮಳೆ; ಬೆಳೆ ಹಾನಿ ವೀಕ್ಷಿಸಿದ ಜಿಲ್ಲಾಧಿಕಾರಿಗಳು

ಕೆರೆ ನೀರು ನುಗ್ಗಿದ ಪರಿಣಾಮ ಸುಮಾರು 300 ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, ಭತ್ತದ ಬೆಳೆಗೆ ಹಾನಿಯಾಗಿದೆ. ಜಿಲ್ಲೆಯ ಕುಂದಗೋಳ, ನವಲಗುಂದ, ಹುಬ್ಬಳ್ಳಿ, ಕಲಘಟಗಿ ತಾಲೂಕುಗಳಲ್ಲಿಯೂ ಕೂಡ ಮಳೆಯಿಂದ ಹತ್ತಿ ಬೆಳೆಗೆ ಹಾನಿಯಾಗಿದೆ ಎಂದು ಸಚಿವರು ತಿಳಿಸಿದರು.

ಪ್ರಸ್ತುತ ರಾಜ್ಯದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸಮೀಕ್ಷೆ ಮಾಡಲು ಸೂಚಿಸಲಾಗಿದೆ. ಬೆಳೆ ಹಾಗೂ ಮನೆಗಳ ಹಾನಿಗೊಳಗಾದವರಿಗೆ ಸಮೀಕ್ಷೆ ವರದಿ ಆಧರಿಸಿ ಪರಿಹಾರ ಒದಗಿಸಲಾಗುವುದು ಎಂದರು.

Heavy Rain Holtikoti Village Lake Damaged

30 ವರ್ಷಗಳ ಹಿಂದೆ ಒಡೆದಿತ್ತು; ಹೊಲ್ತಿಕೋಟಿ ಕೆರೆಯು 30 ವರ್ಷಗಳ ಹಿಂದೆ ಒಂದು ಬಾರಿ ಒಡೆದಿತ್ತು ಎಂಬುದನ್ನು ಸ್ಥಳೀಯ ರೈತರು ಹೇಳಿದ್ದಾರೆ. ಕೆರೆಯ ಶಾಶ್ವತ ದುರಸ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ.

ಹೊಲ್ತಿಕೋಟಿ ಟೆನೆಂಟ್ ಫಾರ್ಮಿಂಗ್ ಸೊಸೈಟಿಯ ಹೆಸರಿನ ಮಾಲೀಕತ್ವದಲ್ಲಿರುವ ಸುಮಾರು 220 ಎಕರೆ ಭೂಮಿಯನ್ನು ರೈತರಿಗೆ ಹೆಸರಿಗೆ ವರ್ಗಾಯಿಸಲು ಸ್ಥಳೀಯರ ಬೇಡಿಕೆ ಇದೆ. ಅಗತ್ಯ ದಾಖಲೆಗಳನ್ನು ಪಡೆದು ವರ್ಗಾಯಿಸಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನೂ 2-3 ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿರುವುದರಿಂದ ರೈತರು ಹೊಲ-ಗದ್ದೆಗಳಿಗೆ ತೆರಳುವಾಗ, ಹಳ್ಳ-ಕೊಳ್ಳಗಳನ್ನು ದಾಟುವ ಮುನ್ನ ತೀವ್ರ ಎಚ್ಚರಿಕೆ ವಹಿಸಬೇಕು. ಮಳೆ ಬೀಳುವಾಗ ಸುರಕ್ಷಿತ ಸ್ಥಳಗಳಲ್ಲಿ ಇರಬೇಕು ಎಂದು ಸಚಿವರು ಮನವಿ ಮಾಡಿದರು.

ಮುಂದುವರೆದ ಮಳೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭತ್ತ ಸೇರಿದಂತೆ ಕಟಾವಿಗೆ ಬಂದಿರುವ ಬೆಳೆಗಳಿಗೆ ಹಾನಿಯಾಗಿದೆ. ಶುಕ್ರವಾರ ಸಹ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹುಬ್ಬಳ್ಳಿಯಲ್ಲಿ ಗುರುವಾರ ಬೆಳಗ್ಗೆಯಿಂದ ಜಿಟಿ-ಜಿಟಿ ಮಳೆ ಸುರಿಯಿತು. ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆಯ ಆವರಣಕ್ಕೆ ನೀರು ನುಗ್ಗಿತ್ತು. ತರಗತಿಗಳಿಗೆ ಹೋಗುವ ಮೆಟ್ಟಿಲಿನ ತನಕ ನೀರು ನಿಂತಿತ್ತು.

ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೋವಿಡ್ ಪರಿಸ್ಥಿತಿ ಬಳಿಕ ಶಾಲೆಗಳು ಆರಂಭವಾಗಿವೆ. ಮಕ್ಕಳು ಮಳೆಯಲ್ಲಿಯೇ ಶಾಲೆಗೆ ಆಗಮಿಸುತ್ತಿದ್ದಾರೆ. ಆದರೆ ಮಳೆಯಿಂದಾಗಿ ಶಾಲೆಗಳಿಗೆ ಆಗಮಿಸುವುದಕ್ಕೆ ತೊಂದರೆ ಉಂಟಾಗಿದೆ.

ವಿವಿಧ ಜಿಲ್ಲೆಗಳಲ್ಲಿ ಮಳೆ ಹಿನ್ನಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಕುರಿತು ಗುರುವಾರ ಆದೇಶ ಹೊರಡಿಸಿದೆ. ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿ ರಜೆ ಘೋಷಿಸುವ ಕುರಿತು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

English summary
Dharwad district Holtikoti village lake damaged due to heavy rain. Minister of textiles & sugarcane Shankar Patil Munenakoppa visited the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X