ಭಾರೀ ಮಳೆಗೆ ಧಾರವಾಡ- ಬೆಳಗಾವಿ ರಾಜ್ಯ ಹೆದ್ದಾರಿಯ ಸೇತುವೆ ಮುಳುಗಡೆ

ಧಾರವಾಡ, ಅಕ್ಟೋಬರ್ 13: ಎರಡು- ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನರಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಶನಿವಾರ ಸುರಿದ ಮಳೆಯಿಂದಾಗಿ ಧಾರವಾಡ- ಬೆಳಗಾವಿ ರಾಜ್ಯ ಹೆದ್ದಾರಿಯ ಸೇತುವೆ ಮುಳುಗಡೆಯಾಗಿದೆ. ಶನಿವಾರ ರಾತ್ರಿ ಧಾರವಾಡ ಬೆಳಗಾವಿ ಗಡಿ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದು, ಮಳೆಗೆ ತುಪ್ರಿಹಳ್ಳಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದಿದೆ.

ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಧಾರವಾಡದಿಂದ ಸೌದತ್ತಿಗೆ ಹೋಗುವ ಹಾರೋಬೆಳವಡಿ ಗ್ರಾಮದ ಬಳಿಯ ಸೇತುವೆಯೂ ಮುಳುಗಡೆಯಾಗಿದೆ . ಇನ್ನು ಇದರಿಂದ ವಾಹನ ಸವಾರರಿಗೆ ಸಾಕಷ್ಟು ತೊಂದರಯಾಗಿದ್ದು, ಮುಳುಗಡೆಯಾದ ಸೇತುವೆ ಮೇಲೆಯೇ ಜನ ದಾಟಲು ಪ್ರಯತ್ನ ಮಾಡುತಿದ್ದಾರೆ.

Heavy Rain in Dharwad; Bridge Immersed In Water

ಇದೇ ಸೇತುವೆ ಕಳೆದ ಎರಡು ತಿಂಗಳ ಹಿಂದೆ ಬಂದ ಭಾರಿ‌ ಮಳೆಗೆ ಕೊಚ್ಚಿ ಹೋಗಿತ್ತು. ಹೀಗಾಗಿ ಅದರ ಪಕ್ಕದಲ್ಲೇ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು. ಆದರೆ ಭಾನುವಾರದಂದು ತಾತ್ಕಾಲಿಕ ಸೇತುವೆ ಕೂಡ ಮುಳುಗಡೆಯಾಗಿದೆ. ಎರಡು ತಿಂಗಳ ಹಿಂದೆ ಬೆಳಗಾವಿಯಲ್ಲಿ ಭಾರೀ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+