ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧಾರವಾಡದಲ್ಲಿ ಭಾರೀ ಮಳೆ, ಜನರ ಜಾಗರಣೆ

By ನಮ್ಮ ಪ್ರತಿನಿಧಿ
|
Google Oneindia Kannada News

ಧಾರವಾಡ, ಅಕ್ಟೋಬರ್ 18 : ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡ ಜಿಲ್ಲೆಯ ಮಂಟೂರು ಗ್ರಾಮದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಮಳೆಯ ಅಬ್ಬರ, ಮನೆಗೆ ನಿರು ನುಗ್ಗಿ ಹಾನಿಯಾಗಿದ್ದರೆ. ಮತ್ತೊಂದು ಕಡೆ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದ್ದು, ಜನರು ರಾತ್ರಿ ಪೂರ್ತಿ ಜಾಗರಣೆ ಮಾಡಿದ್ದಾರೆ. ಇನ್ನು ಬಿಡದೆ ಸುರಿಯುತ್ತಿರುವ ಮಳೆ ಜಿಲ್ಲೆಯ ಬಹುತೇಕ ಗ್ರಾಮಗಳ ಜನರ ಬದುಕನ್ನು ಕಿತ್ತುಕೊಂಡಿದೆ. ಕುಂದಗೋಳ ಸೇರಿದಂತೆ ಸುತ್ತಲಿನ ಗ್ರಾಮದಲ್ಲಿ ಅನೇಕ ಮನೆಗಳು ಕುಸಿದಿವೆ.

ಮೈತುಂಬಿದ ಬೆಣ್ಣೆಹಳ್ಳದಲ್ಲಿ ತೇಲಿಬರುತ್ತಿವೆ ಹೆಣಗಳುಮೈತುಂಬಿದ ಬೆಣ್ಣೆಹಳ್ಳದಲ್ಲಿ ತೇಲಿಬರುತ್ತಿವೆ ಹೆಣಗಳು

Dharwad

ಸೋಮವಾರ ಸಂಜೆ ಸುರಿದ ಭಾರೀ ಮಳೆಯಿಂದ ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದ ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಜನರು ರಾತ್ರಿ ಪೂರ್ತಿ ಮನೆಗೆ ನುಗ್ಗಿದ ನೀರನ್ನು ಹೊರಹಾಕಲು ಕಷ್ಟಪಟ್ಟಿದ್ದಾರೆ. ಮನೆಗಳ ಸುತ್ತಲೂ ನೀರು ತುಂಬಿಕೊಂಡಿವೆ.

ಭೀಕರ ಮಳೆಗೆ ತತ್ತರಿಸಿದ ಹುಬ್ಬಳ್ಳಿ, 58 ಮನೆಗಳು ನೆಲಸಮಭೀಕರ ಮಳೆಗೆ ತತ್ತರಿಸಿದ ಹುಬ್ಬಳ್ಳಿ, 58 ಮನೆಗಳು ನೆಲಸಮ

ನೀರು ನುಗ್ಗಿದ್ದರಿಂದ ಮನೆಯಲ್ಲಿದ್ದ ಧವಸ-ಧಾನ್ಯ, ಬಟ್ಟೆ ಹಾಗೂ ಗೃಹಪಯೋಗಿ ವಸ್ತುಗಳು ಒದ್ದೆಯಾಗಿವೆ. ಮಳೆ ನೀರು ಗ್ರಾಮದಲ್ಲಿ ಪ್ರವಾಹೋಪಾದಿಯಲ್ಲಿ ಹರಿಯುತ್ತಿದ್ದು, ಸುಮಾರು ಐದಾರು ಅಡಿಯಷ್ಟು ನೀರು ರಸ್ತೆ ಮೇಲೆ ಹರಿಯುತ್ತಿದೆ. ಜಿಲ್ಲಾಡಳಿತ ಗಂಜಿ ಕೇಂದ್ರ ತೆರದಿದೆ. ಆದರೆ, ಅಲ್ಲಿ ಊಟ ಸಿಗುತ್ತಿದೆ, ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿಲ್ಲ.

rain
English summary
Heavy rain lashed Dharwad district for the last two days affecting normal life.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X