Vinay Kulkarni: ಯೋಗೇಶ್ ಗೌಡ ಕೊಲೆ ಪ್ರಕರಣ ರದ್ದು ಕೋರಿದ್ದ ಅರ್ಜಿ ವಜಾ: HC
ಹುಬ್ಬಳ್ಳಿ, ಏಪ್ರಿಲ್ 09: ಧಾರವಾಡ ಜಿಲ್ಲೆಯ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಪ್ರಕರಣವನ್ನು ರದ್ದು ಕೋಡಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ವಿನಯ್ ಕುಲಕರ್ಣಿಗೆ ಹಿನ್ನಡೆ ಆಗಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ತಮ್ಮ ಮೇಲಿನ ಕೇಸ್ ರದ್ದುಗೊಳಿಡುವಂತೆ ವಿಜಯ್ ಕುಲಕರ್ಣಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ, ಪ್ರಕರಣ ರದ್ದು ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ನ್ಯಾಯಪೀಠ ಸಾಕ್ಷ್ಯ ವಿಚಾರಣೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಸಿಬಿಐ ಪರ ಅಭಿಯೋಕರಿಗೆ ವಿಚಾರಣೆ ಬಳಿಕ ಸೂಚನೆ ನೀಡಿದೆ.
ಪ್ರಕರಣದ ಹಿನ್ನೆಲೆ ಹೀಗಿದೆ
ಯೋಗೇಶ್ ಗೌಡ ಕೊಲೆ ಪ್ರಕರಣವು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿತ್ತು. ಧಾರವಾಡ ಜಿಲ್ಲಾ ಪಂಚಾಯ್ತಿಯ ಬಿಜೆಪಿ ಸದಸ್ಯ ಯೋಗೇಶ ಗೌಡ ಗೌಡರು 2016 ಜೂನ್ 15 ರಂದು ಧಾರವಾಡ ನಗರದ ಸಪ್ತಾಪೂರ ಬಳಿ ಅವರದೇ ಮಾಲೀಕತ್ವದ ಜಿಮ್ ನಲ್ಲಿ ಬರ್ಬರವಾಗಿ ಕೊಲೆ ಯಾಗಿದ್ದರು. ಘಟನೆ ಬಳಿಕ ಆರೋಪಿಗಳು ತಾವೇ ಈ ಹತ್ಯೆಯನ್ನು ಮಾಡಿರುವುದಾಗಿ ತಪ್ಪೊಪ್ಪಿಕೊಂಡು ಬಂಧನಕ್ಕೆ ಒಳಗಾಗಿದ್ದರು.

ಮೃತ ಯೋಗೇಶಗೌಡ ಗೌಡರ ಕುಟುಂಬದ ಸದಸ್ಯರು ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಲವಾಗಿ ಒತ್ತಾಯಿಸಿದ್ದರು. ಬಳಿಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಹಲವು ಆರೋಪಿಗಳ ಮತ್ತು ಶಂಕಿತರ ವಿಚಾರಣೆ ಬಳಿಕ ಈ ಕೊಲೆಯಲ್ಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರ ಕೈವಾಡ ಇದೆ ಇದೆ ಎಂದು ಎಂಬುದು ತಿಳಿದು ಬಂದಿತ್ತು.
ಜಾಮೀನಿನ ಮೇಲೆ ಹೊರಗಿರುವ ಕುಲಕರ್ಣಿ
ಕೊಲೆ ಮತ್ತು ಸಾಕ್ಷ್ಯ ನಾಶ ಪ್ರಕರಣದಡಿ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಯನ್ನು ಬಂಧಿಸಿದ್ದರು. ಬಳಿಕ ಬರೋಬ್ಬರಿ ಒಂಬತ್ತು ತಿಂಗಳ ಬಳಿಕ ವಿನಯ್ ಕುಲಕರ್ಣಿ ಅವರು ಜಾಮೀನಿನ ಮೇಲೆ ಆಚೆ ಬಂದಿದ್ದಾರೆ.
ಆದರೆ ವಿನಯ್ ಕುಲಕರ್ಣಿಗೆ ನ್ಯಾಯಾಲಯವು ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಿಲ್ಲ. ಹೀಗಾಗಿ ಅವರು ಕ್ಷೇತ್ರದಿಂದ ಹೊರಗಿದ್ದುಕೊಂಡೇ ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಈಗ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ಆದರೆ ಧಾರವಾಡ ಜಿಲ್ಲೆಯ ಬಿಟ್ಟು ಬೆಳಗಾವಿ ಕಿತ್ತೂರಿನಲ್ಲಿ ವಾಸವಾಗಿದ್ದಾರೆ. ಅವರು ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ವಿನಯ್ ಕುಲಕರ್ಣಿಗೆ ಮತ್ತೆ ಹಿನ್ನಡೆ ಆಗಿದೆ.












Click it and Unblock the Notifications