ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಧಾರವಾಡ ಭೇಟಿಗೆ ಒಪ್ಪದ ಕೋರ್ಟ್‌

ಬೆಂಗಳೂರು, ಏಪ್ರಿಲ್ 21; ಮಾಜಿ ಸಚಿವ, ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಧಾರವಾಡ ಭೇಟಿಗೆ ಕರ್ನಾಟಕ ಹೈಕೋರ್ಟ್‌ ಒಪ್ಪಿಗೆ ನೀಡಿಲ್ಲ. ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್‌ ಜಾಮೀನು ನೀಡುವಾಗ ಧಾರವಾಡಕ್ಕೆ ಭೇಟಿ ನೀಡದಂತೆ ಷರತ್ತು ಹಾಕಿದೆ.

ಧಾರವಾಡ ಭೇಟಿಗೆ ಅನುಮತಿ ನೀಡಬೇಕು ಎಂದು ವಿನಯ್ ಕುಲಕರ್ಣಿ ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಅನುಮತಿ ನಿರಾಕರಿಸಿದೆ. ಮೇ 10ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ವಿನಯ್ ಕುಲಕರ್ಣಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

High Court Not Approved Vinay Kulkarni To Visit Dharwad

ಯೋಗೇಶ್ ಗೌಡ ಹತ್ಯೆ ಪ್ರಕರಣದ 15ನೇ ಆರೋಪಿ ವಿನಯ್ ಕುಲಕರ್ಣಿ ಚುನಾವಣೆಗೆ ಸ್ಪರ್ಧಿಸಿರುವ ಹಿನ್ನಲೆಯಲ್ಲಿ ಧಾರವಾಡಕ್ಕೆ 50 ದಿನಗಳ ಕಾಲ ಭೇಟಿ ನೀಡಲು ಅವಕಾಶ ನೀಡಬೇಕು ಎಂದು ಎರಡು ಅರ್ಜಿಗಳನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದರು.

ಅರ್ಜಿಯ ವಿಚಾರಣೆ ಸಮಯದಲ್ಲಿ ಸಿಬಿಐ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡನೆ ಮಾಡಿದರು. ನ್ಯಾಯಮೂರ್ತಿಗಳು ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅನುಮತಿ ಇಲ್ಲ. ಸುಪ್ರೀಂಕೋರ್ಟ್‌ ಸಹ ಜಾಮೀನು ಷರತ್ತು ಸಡಿಸಿಲಿಲ್ಲ. ಆದರೂ ಏಕೆ ಕಾಂಗ್ರೆಸ್ ಪಕ್ಷ ಅವರಿಗೆ ಟಿಕೆಟ್ ನೀಡಿದೆ? ಎಂದು ವಕೀಲರನ್ನು ಪ್ರಶ್ನೆ ಮಾಡಿತು.

ಗುರುವಾರವೂ ವಿನಯ್ ಕುಲಕರ್ಣಿ ಸಲ್ಲಿಕೆ ಮಾಡಿದ್ದ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠದಲ್ಲಿ ನಡೆದಿತ್ತು. ಆಗ ವಿನಯ್ ಕುಲಕರ್ಣಿ ಪರವಾಗಿ ಹಿರಿಯ ವಕೀಲ ಸಿ. ಎಚ್. ಜಾಧವ್ ವಾದ ಮಂಡಿಸಿದ್ದರು.

"ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವಾಗ ಅರ್ಜಿದಾರರಿಗೆ ಧಾರವಾಡ ಪ್ರವೇಶಿಸದಂತೆ ನ್ಯಾಯಾಲಯ ಷರತ್ತು ವಿಧಿಸಿದೆ. ಆದರೆ ಸದ್ಯ ಚುನಾವಣೆಗೆ ಸ್ಪರ್ಧಿಸಿರುವ ಹಿನ್ನಲೆಯಲ್ಲಿ 50 ದಿನ ಧಾರವಾಡದಲ್ಲಿರಲು ಅನುಮತಿ ನೀಡುವಂತೆ ಕೋರಿದ್ದ ಮನವಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ" ಎಂದರು.

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಧಾರವಾಡ ಭೇಟಿಗೆ ಅವಕಾಶ ಕೋರಿ ವಿನಯ್ ಕುಲಕರ್ಣಿ ಸಲ್ಲಿಕೆ ಮಾಡಿದ್ದ ಅರ್ಜಿ ವಜಾಗೊಳಿಸಿತ್ತು. ಈ ಹಿನ್ನಲೆಯಲ್ಲಿ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಹೈಕೋರ್ಟ್ ಸಹ ಅವರು ಧಾರವಾಡ ಭೇಟಿಗೆ ಅವಕಾಶ ನೀಡಿಲ್ಲ. ಆದ್ದರಿಂದ ಮೇ 10ರಂದು ನಡೆಯುವ ಚುನಾವಣೆಗೆ ಅವರು ಹೇಗೆ ಪ್ರಚಾರ ನಡೆಸಲಿದ್ದಾರೆ? ಎಂದು ಕಾದು ನೋಡಬೇಕಿದೆ.

15ನೇ ಆರೋಪಿ; ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಆರೋಪಿ. ಈ ಪ್ರಕರಣದ ತನಿಖೆ ಕೈಗೊಂಡಿದ್ದ ಸಿಬಿಐ ಅವರನ್ನು ಬಂಧಿಸಿತ್ತು. 2021ರ ಆಗಸ್ಟ್ 11ರಂದು ಜಾಮೀನು ಮಂಜೂರು ಮಾಡಿದ್ದ ಸುಪ್ರೀಂಕೋರ್ಟ್ ಧಾರವಾಡಕ್ಕೆ ಭೇಟಿ ನೀಡದಂತೆ ಷರತ್ತು ಹಾಕಿತ್ತು.

ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ 2013ರಲ್ಲಿ ಗೆಲುವು ಸಾಧಿಸಿದ್ದರು. 2018ರ ಚುನಾವಣೆಯಲ್ಲಿ 64783 ಮತಗಳನ್ನು ಪಡೆದು ಅವರು ಸೋಲು ಕಂಡಿದ್ದರು. ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ವಿನಯ್ ಕುಲಕರ್ಣಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಆದರೆ ಧಾರವಾಡಕ್ಕೆ ಭೇಟಿ ನೀಡಲು ಸಾಧ್ಯವಿಲ್ಲದ ಕಾರಣ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಅಂತಿಮವಾಗಿ ಕಾಂಗ್ರೆಸ್ ಪಕ್ಷ ಅವರಿಗೆ ಧಾರವಾಡ ಗ್ರಾಮೀಣ ಕ್ಷೇತ್ರದ ಟಿಕೆಟ್ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+