School-Colleges Holiday: ಈ ಜಿಲ್ಲೆಯಲ್ಲಿಂದು ಎಲ್ಲಾ ಅಂಗನವಾಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
School-Colleges Holiday: ರಾಜ್ಯ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಇಂದು (ಜೂನ್ 12) ಧಾರವಾಡದಲ್ಲಿಯೂ ವರುಣ ಆರ್ಭಟಿಸುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ರಣಭೀಕರ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಧಾರವಾಡ ಜಿಲ್ಲೆಗೆ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈಗಾಗಲೇ ಧಾರವಾಡ ಜಿಲ್ಲೆಯ ಹಲವು ಗ್ರಾಮಗಳಲ್ಲಿ ನಿನೆ ರಾತ್ರಿಯಿಂದಲೂ ಭಾರೀ ಮಳೆ ಮುಂದುವರೆದಿದೆ. ಇಂದು (ಜೂನ್ 12) ಕೂಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದ ಹಿನ್ನೆಲೆ ಮಕ್ಕ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ಧಾರೆ.

ಈ ಕುರಿತು ಇಂದು ಪ್ರಕಟಣೆ ಹೊರಡಿಸಿರುವ ಅವರು, ಇಂದು ಹವಾಮಾನ ಇಲಾಖೆಯಿಂದ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಹಲವು ಭಾಗಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಆದ್ದರಿಂದ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಅನುಸರಣೆ ಮಾಡಬೇಕೆಂದು ಸೂಚನೆ ನೀಡಿದ್ದಾರೆ.
ಧಾರವಾಡ ಜಿಲ್ಲೆಯ ಬೆಣ್ಣಿ ಹಳ್ಳ, ತುಪ್ಪರಿ ಹಳ್ಳದ ಅಚ್ಚು-ಕಟ್ಟು ಪ್ರದೇಶದಲ್ಲಿ ಬುಧವಾರ ರಾತ್ರಿ ವ್ಯಾಪಕವು ಮಳೆಯಾಗಿದೆ. ಆದ್ದರಿಂದ ಎರಡು ಹಳ್ಳದ ಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಳ ಆಗುವ ಎಲ್ಲಾ ಲಕ್ಷಣಗಳು ಕಾಣುತ್ತಿದ್ದು, ಇದರಿಂದ ಪ್ರವಾಹ ಪರಿಸ್ಥತಿ ಉಂಟಾಗುವ ಸಾಧ್ಯತೆಯಿದ ಎನ್ನಲಾಗುತ್ತಿದೆ.
ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ಹಲವು ದಿನಗಳ ಕಾಲ ಜಿಲ್ಲೆಯಲ್ಲಿ ರಣಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆ ಹಾಗೂ ಬೆಣ್ಣಿ ಹಳ್ಳ ಮತ್ತು ತುಪ್ಪರಿ ಹಳ್ಳದ ಅಚ್ಚು-ಕಟ್ಟು ಪ್ರದೇಶದಲ್ಲಿ ಎಚ್ಚರಿಕೆ ವಹಿಸುವಂತ ಅಧಿಕಾರಿಗಳು, ಸಾರ್ವಜನಿಕರಿಗೆ ಅವರು ಸೂಚನೆ ನೀಡಿದ್ದಾರೆ.
ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೇಳಾಪಟ್ಟಿಯಂತೆ ಇಂದು ನಿಗಧಿಯಾಗಿರುವ ಪಿಯುಸಿ ವಾರ್ಷಿಕ ಪರೀಕ್ಷೆ-3 ಅನ್ನು ಜರುಗಿಸಲಾಗುತ್ತದೆ. ಈ ಪರೀಕ್ಷೆಯು ಹುಬ್ಬಳ್ಳಿಯ ಮೂರು, ಧಾರವಾಡದ ಮೂರು ಹಾಗೂ ಕುಂದಗೋಳ, ಕಲಘಟಗಿ ಮತ್ತು ಅಣ್ಣಿಗೇರಿ ಪಟ್ಟಣದ ತಲಾ ಒಂದು ಕೇಂದ್ರ ಸೇರಿ ಒಟ್ಟು 9 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಯಥಾ ಪ್ರಕಾರ ಪರೀಕ್ಷೆ ನಡೆಯಲಿದ್ದು, ಸಂಭಂದಿಸಿದ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳು ನಿಯಮಾನುಸಾರ ಕರ್ತವ್ಯ ನಿರ್ವಹಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಎಲ್ಲಾ ಇಲಾಖೆ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಮಳೆ, ಪ್ರವಾಹದಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಮತ್ತು ಈ ಕುರಿತು ಸಾರ್ವಜನಿಕರಿಗೆ ವ್ಯಾಪಕವಾಗಿ ಪ್ರಚಾರ ನೀಡಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಳೆ ಹೀಗೆ ಮುಂದುವರೆದರೆ ರಜರಯನ್ನು ವಿಸ್ತರಣೆ ಮಾಡುವ ಸಾಧ್ಯತೆಯಿದೆ. ಯಾಕೆಂದ್ರೆ ಅಷ್ಟರ ಮಟ್ಟಿಗೆ ಮಳೆ ಸುರಿಯುತ್ತಿದೆ.












Click it and Unblock the Notifications