ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹು-ಧಾ ಅವಳಿ ಜಿಲ್ಲೆಯಲ್ಲಿ 1 ರಿಂದ 8 ರ ವರೆಗಿನ ತರಗತಿಗಳು ಬಂದ್

|
Google Oneindia Kannada News

ಧಾರವಾಡ, ಜ.12: ಜಿಲ್ಲೆಯಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13 ರಿಂದ ಮುಂದಿನ ಆದೇಶದವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು (ಜ.12) ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ತಿಳಿಸಿರುವಂತೆ, ರಾಜ್ಯದಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿಯ ಅಧ್ಯಕ್ಷರೂ ಆಗಿರುವ ಮುಖ್ಯ ಕಾರ್ಯದರ್ಶಿಗಳು ಹಲವಾರು ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ಕೊರೊನಾ ಉಲ್ಬಣ: ಆನ್‌ಲೈನ್ ಮುಂದುವರಿಸಲು ಶಿಕ್ಷಣ ಇಲಾಖೆ ಚಿಂತನೆ ಕೊರೊನಾ ಉಲ್ಬಣ: ಆನ್‌ಲೈನ್ ಮುಂದುವರಿಸಲು ಶಿಕ್ಷಣ ಇಲಾಖೆ ಚಿಂತನೆ

ಜ.11 ರಂದು (ನಿನ್ನೆ ದಿನ) ಧಾರವಾಡ ತಾಲೂಕಿನ ಪಾಸಿಟಿವಿಟಿ ದರ ಶೇ.5.38 ಹಾಗೂ ಹುಬ್ಬಳ್ಳಿ ತಾಲೂಕಿನಲ್ಲಿ ಪಾಸಿಟಿವಿಟಿ ರೇಟ್ ಶೇ.11.76 ರಷ್ಟು ಇದೆ. ಹಾಗೂ ಶಾಲೆಗಳಲ್ಲಿ ಕೋವಿಡ್-19 ಕ್ಲಸ್ಟರ್ ಪ್ರಕರಣಗಳು ಕಂಡು ಬಂದಿವೆ. ಈ ಕುರಿತು ಜ.11 ರಂದು ಜರುಗಿದ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ವಿವರವಾಗಿ ಚರ್ಚಿಸಿ ಕೋವಿಡ್-19 ವೈರಾಣು ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ಹಾಗೂ ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

Holiday declared for Class I to VIII students in Hubballi Dharwad districts

ಅದರಂತೆ ನಾಳೆ (ಜ.13) ಯಿಂದ ಮುಂದಿನ ಆದೇಶದವರೆಗೆ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ತೆರೆಯದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಆದೇಶಿಸಿದ್ದಾರೆ. ಹಾಗೂ ಈ ಅವಧಿಯಲ್ಲಿ ಆನ್‍ಲೈನ್ ಮುಖಾಂತರ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಪ್ರಕಟಣೆ
ಧಾರವಾಡ ಗ್ರಾಮೀಣ, ಧಾರವಾಡ ನಗರ ಮತ್ತು ಹುಬ್ಬಳ್ಳಿ ನಗರ, ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಶಾಲೆಗಳಲ್ಲಿ 1 ರಿಂದ 8 ನೇ ತರಗತಿವರೆಗೆ ಭೌತಿಕ ಕ್ಲಾಸ್‍ಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಗಳು ಇಂದು ಆದೇಶಿಸಿದ್ದಾರೆ. ಆದರೆ ಈ ಎಲ್ಲ ತಾಲೂಕುಗಳ ಶಿಕ್ಷಕರು ದಿನನಿತ್ಯದಂತೆ ಶಾಲೆಗೆ ತೆರಳಿ ಆನ್‍ಲೈನ್ ಮೂಲಕ ಮಕ್ಕಳಿಗೆ ಪಠ್ಯ ಬೋಧನೆ ಮಾಡಬೇಕು. ಮತ್ತು 9 ಹಾಗೂ 10 ನೇ ವರ್ಗದ ತರಗತಿಗಳನ್ನು ಕೋವಿಡ್ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ದಿನನಿತ್ಯದಂತೆ ಭೌತಿಕ ಕ್ಲಾಸ್‍ಗಳನ್ನು ನಡೆಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು ತಿಳಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಇವತ್ತಿನವರೆಗೆ (ಜ.12) ಒಟ್ಟು 50 ಮಕ್ಕಳಲ್ಲಿ ಹಾಗೂ 3 ಶಿಕ್ಷಕರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಧಾರವಾಡ ಗ್ರಾಮೀಣ ವಲಯದಲ್ಲಿ 9 ಬಾಲಕರಿಗೆ ಹಾಗೂ 3 ಬಾಲಕಿಯರಿಗೆ ಒಟ್ಟು 12 ಜನರಿಗೆ ಮತ್ತು ಧಾರವಾಡ ನಗರ ವಲಯದಲ್ಲಿ ಓರ್ವ ಬಾಲಕಿಗೆ ಹಾಗೂ ಹುಬ್ಬಳ್ಳಿ ನಗರ ವಲಯದಲ್ಲಿ 19 ಬಾಲಕರಿಗೆ 14 ಬಾಲಕಿಯರು ಸೇರಿ 33 ಜನರಲ್ಲಿ ಕೋವಿಡ್ ಸೋಂಕು ಕಂಡು ಬಂದಿದೆ. ಧಾರವಾಡ ಗ್ರಾಮೀಣ, ಧಾರವಾಡ ನಗರ ಮತ್ತು ಹುಬ್ಬಳ್ಳಿ ನಗರ ವಲಯ ಸೇರಿ ಒಟ್ಟು 50 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಮತ್ತು ಓರ್ವ ಪುರುಷ ಹಾಗೂ ಇಬ್ಬರು ಮಹಿಳಾ ಶಿಕ್ಷಕಿಯರಲ್ಲಿಯೂ ಸಹ ಕೋವಿಡ್ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಶಾಲೆಗಳಲ್ಲಿ ಸಂಪೂರ್ಣ ಸ್ಯಾನಿಟೈಸ್ ಮಾಡಿ ಸ್ವಚ್ಛಗೊಳಿಸಲಾಗಿದೆ. ಸೋಂಕಿತ ಮಕ್ಕಳು ಹಾಗೂ ಶಿಕ್ಷಕರು ಆರೋಗ್ಯವಾಗಿದ್ದು, ಹೋಂ ಕ್ವಾಂರಟೈನ್ ಆಗಿ ಚಿಕಿತ್ಸೆ ಪಡೆದಿದ್ದಾರೆ.

ಅಳ್ನಾವರ, ಹುಬ್ಬಳ್ಳಿ ಗ್ರಾಮೀಣ, ಕುಂದಗೋಳ, ನವಲಗುಂದ ಅಣ್ಣಿಗೇರಿ ತಾಲೂಕುಗಳ ಶಾಲೆಗಳಲ್ಲಿ ಯಾವುದೇ ಕೋವಿಡ್ ಪ್ರಕರಣಗಳು ಇಲ್ಲಿಯವರೆಗೆ ಕಂಡು ಬಂದಿಲ್ಲ. ಮತ್ತು ಶಾಲಾ ಮುಖ್ಯಸ್ಥರಿಗೆ ಮಕ್ಕಳ ಆರೋಗ್ಯ ಸುರಕ್ಷತೆ ಕುರಿತು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಈಗಾಗಲೇ ನಿರ್ದೇಶನ ನೀಡಲಾಗಿದೆ.
ಶಾಲೆಗೆ ಬರುವ ಪ್ರತಿ ಮಗು ತಪ್ಪದೇ ಮಾಸ್ಕ್ ಧರಿಸಿ ಒಳಬರುವಂತೆ ಮತ್ತು ಪರಸ್ಪರ ಸಾಮಾಜಿಕ ಅಂತರ ಕಾಪಾಡುವಂತೆ ಸೂಚಿಸಲಾಗಿದೆ.

ಒಂದೇ ವರ್ಗದಲ್ಲಿ 100 ಕ್ಕಿಂತ ಹೆಚ್ಚು ಮಕ್ಕಳಿದ್ದಲ್ಲಿ ಬ್ಯಾಚ್ ಮೂಲಕ ವರ್ಗಗಳನ್ನು ನಡೆಸುವಂತೆ ತಿಳಿಸಲಾಗಿದೆ. ಒಟ್ಟಾರೆಯಾಗಿ ಮಕ್ಕಳ ಹಾಗೂ ಶಿಕ್ಷಕರ ಆರೋಗ್ಯ ಸುರಕ್ಷತೆಗೆ ಆಧ್ಯತೆ ನೀಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಎಲ್ಲಾ ಶಾಲೆಯ ಪ್ರಧಾನ ಗುರುಗಳಿಗೆ ಮತ್ತು ಮುಖ್ಯೋಪಾಧ್ಯಾಯರಿಗೆ ಸಾರ್ವಜನಿಕ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recommended Video

ಭಾರತಕ್ಕಿಂತ ಉತ್ತಮವಾಗಿದೆ ಪಾಕಿಸ್ತಾನದ ಆರ್ಥಿಕತೆ!! ನಿಜಾನಾ?? | Oneindia Kannada

English summary
With incease in number of COVID-19 cases in Dharwad district, Deputy Commissioner Nitesh Patil has declared holiday for Class I to VIII from Jan 13 in the of the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X