• search
 • Live TV
ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹುಬ್ಬಳ್ಳಿ-ಧಾರವಾಡ ಬೈಪಾಸ್‌ ರಸ್ತೆಯ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳಿಸಲು ಸೂಚನೆ

|
Google Oneindia Kannada News

ಧಾರವಾಡ, ಆಗಸ್ಟ್‌ 06: ಹುಬ್ಬಳ್ಳಿ-ಧಾರವಾಡ ಬೈಪಾಸ್‌ ರಸ್ತೆಯ ಕುರಿತು ನೈಸ್‌ ಕಂಪನಿಯ ಪ್ರತಿನಿಧಿಗಳ ಜೊತೆ ನಡೆಸಿರುವ ಸಭೆಯ ಅಂಶಗಳನ್ನು ಒಳಗೊಂಡ ಪರಿಷ್ಕೃತ ಪ್ರಸ್ತಾವನೆಯನ್ನು ನ್ಯಾಷನಲ್‌ ಹೈವೇ ಅಥಾರಿಟಿ ಆಫ್‌ ಇಂಡಿಯಾದ ಕೇಂದ್ರ ಕಚೇರಿಗೆ ಶುಕ್ರವಾರದ ಒಳಗಾಗಿ ಕಳುಹಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

   ರಸಗೊಬ್ಬರ ಮತ್ತು ಬಾಂಬ್ ಬಳಕೆಯಲ್ಲಿ ಬಳಸುವ ಅಮೋನಿಯಂ ನೈಟ್ರೇಟ್ ಸ್ಪೋ | Oneindia Kannada

   ಬುಧವಾರ ವಿಡಿಯೋ ಸಂವಾದದ ಮೂಲಕ ಹುಬ್ಬಳ್ಳಿ-ಧಾರವಾಡ ಭಾಗದ ಕೆ.ಆರ್‌.ಡಿ.ಸಿ.ಎಲ್‌, ರಾಷ್ಟ್ರೀಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಅಡಿ ಅನುಷ್ಠಾನಗೊಳಿಸುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.

   ಧಾರವಾಡ; ಟಾಟಾ ಮಾರ್ಕೊಪೋಲೋ ಘಟಕ ಒಂದು ವಾರ ಬಂದ್ಧಾರವಾಡ; ಟಾಟಾ ಮಾರ್ಕೊಪೋಲೋ ಘಟಕ ಒಂದು ವಾರ ಬಂದ್

   ವಿಡಿಯೋ ಸಂವಾದದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಕಲ್ಲಿದ್ದಲು ಸಚಿವರಾದ ಪ್ರಹ್ಲಾದ್ ಜೋಶಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ ಮತ್ತು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರುಗಳು ಭಾಗವಹಿಸಿದ್ದರು.

   ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಜುಲೈ 24 ರಂದು ವಿಧಾನ ಸೌಧದಲ್ಲಿ ನಡೆದ ಸಭೆಯ ನಂತರ ನಡೆದ ಬೆಳವಣಿಗೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ನೈಸ್‌ ಕಂಪನಿಯ ಪ್ರತಿನಿಧಿಗಳ ಜೊತೆಯಲ್ಲಿ ನಡೆಸಿದ ಸಭೆಯ ಮಾಹಿತಿಗಳನ್ನು ಅಧಿಕಾರಿಗಳಿಂದ ಅವರು ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಅಧಿಕಾರಿಗಳು ಈ ಕಾಮಗಾರಿಯ ಸಂಬಂಧ ಬೆಂಗಳೂರಿನಲ್ಲಿ ಅಗತ್ಯವಿರುವ ಎಲ್ಲಾ ಕಾರ್ಯಗಳನ್ನು ಪೂರೈಸಲಾಗಿದೆ ಎಂದು ಮಾಹಿತಿ ನೀಡಿದರು.

   ವಾಟ್ಸಪ್, ಇ-ಮೇಲ್ ಮೂಲಕ ಕೇಂದ್ರ ಸಚಿವರ ಕಚೇರಿ ಕೆಲಸವಾಟ್ಸಪ್, ಇ-ಮೇಲ್ ಮೂಲಕ ಕೇಂದ್ರ ಸಚಿವರ ಕಚೇರಿ ಕೆಲಸ

   ನಂತರ, ಕೇಂದ್ರ ಸಚಿವರು ಸಭೆಯ ಅಂಶಗಳನ್ನು ಒಳಗೊಂಡಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್‌ ರಸ್ತೆಯ ಪರಿಷ್ಕೃತ ಪ್ರಸ್ತಾವನೆಯನ್ನು ನ್ಯಾಷನಲ್‌ ಹೈವೇ ಅಥಾರಿಟಿ ಆಫ್‌ ಇಂಡಿಯಾದ ಕೇಂದ್ರ ಕಚೇರಿಗೆ ಕಳುಹಿಸಿಕೊಡುವಂತೆ ಸೂಚನೆ ನೀಡಿದರು. ತಾವು ದೆಹಲಿಯಲ್ಲಿ ಕೇಂದ್ರ ಸಚಿವರಾದ ನಿತೀನ್ ಗಡ್ಕರಿ ಅವರೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.

   Hubballi-Dharwad Bypass Road Proposal Send To NHAI: Central Minister Instruction

   ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಮಾತನಾಡಿ, ಕಾಮಗಾರಿ ಪ್ರಾರಂಭದ ನಂತರ ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ಸಂಬಂಧಪಟ್ಟ ಎಲ್ಲಾ ಕಡೆಗಳಿಂದ ಅಗತ್ಯ ಒಡಂಬಡಿಕೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು. ಈ ಪ್ರಸ್ತಾಪದ ಆರ್ಥಿಕ ಅನುಮೋದನೆಯ ನಂತರ ಯೋಜನೆಯಲ್ಲಿ ಅಳವಡಿಸಿಕೊಳ್ಳಬೇಕಾದ ಸರ್ವೀಸ್ ರೋಡ್‌, ಅಂಡರ್‌ ಪಾಸ್‌ ನಂತಹ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸುವಂತೆ ತಿಳಿಸಿದರು.

   ಇದೇ ವೇಳೆ, ಹುಬ್ಬಳ್ಳಿ-ವಿಜಯಪುರ ರಸ್ತೆಯ ಕಾಮಾಗಾರಿಯ ಬಗ್ಗೆ ಪ್ರಸ್ತಾಪಿಸಿದ ಅವರು, 218 ನೇ ನ್ಯಾಷನಲ್‌ ಹೈವೇ ರಸ್ತೆಯ ಕಾಮಗಾರಿ ಸಮರ್ಪಕವಾಗಿ ಮುಗಿದಿಲ್ಲ. ಆದರೂ ಹೆಬಸೂರು ಬಳಿ ಟೋಲ್ ಸಂಗ್ರಹಕ್ಕೆ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕಾಮಗಾರಿ ಮುಗಿಯದೆ ಟೋಲ್ ಸಂಗ್ರಹ ಸರಿಯಲ್ಲ ಎಂದು ಹೇಳಿದರು. ಈ ಕಾಮಗಾರಿಯನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

   ಸಭೆಯಲ್ಲಿ ಶಾಸಕರಾದ ಅರವಿಂದ್‌ ಬೆಲ್ಲದ್, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಧಾರವಾಡ ಜಿಲ್ಲಾಧಿಕಾರಿಗಳು, ಲೋಕೋಪಯೋಗಿ ಇಲಾಖೆ, ಕೆ.ಆರ್.ಡಿ.ಸಿ.ಎಲ್ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.

   English summary
   Officials were instructed to send Hubballi-Dharwad Bypass Road revised proposal to the National Highway Authority of India headquarters within Friday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X