ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹು-ಧಾ ಪಾಲಿಕೆ ಚುನಾವಣೆ; ಬಹಿರಂಗ ಪ್ರಚಾರ ಬುಧವಾರ ಅಂತ್ಯ

|
Google Oneindia Kannada News

ಧಾರವಾರ, ಆಗಸ್ಟ್ 31; ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಧಾರವಾಡ ಜಿಲ್ಲಾಡಳಿತ ಸಜ್ಜಾಗಿದೆ. ಸೆಪ್ಟೆಂಬರ್ 3ರ ಶುಕ್ರವಾರ 82 ವಾರ್ಡ್‌ಗಳಿಗೆ ಮತದಾನ ನಡೆಯಲಿದ್ದು, ಸೆಪ್ಟೆಂಬರ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಪ್ರಾರಂಭವಾಗುವ ಅವಧಿಯ 48 ಗಂಟೆ ಮುಂಚಿತವಾಗಿ ಚುನಾವಣಾ ಪ್ರಚಾರಕ್ಕೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾ. ಪಾಲಿಕೆ ಚುನಾವಣೆ; ಬಿಜೆಪಿಯ ಪ್ರಣಾಳಿಕೆ ಹುಬ್ಬಳ್ಳಿ-ಧಾ. ಪಾಲಿಕೆ ಚುನಾವಣೆ; ಬಿಜೆಪಿಯ ಪ್ರಣಾಳಿಕೆ

ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನ ಆರಂಭವಾಗುವ 48 ಗಂಟೆಗಳ ಮುಂಚಿತವಾಗಿ ರಾಜಕೀಯ ಪಕ್ಷಗಳು, ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಪರವಾಗಿ ಯಾರೇ ಇತರರು ತಮ್ಮ ಬಹಿರಂಗ ಪ್ರಚಾರವನ್ನು ಮುಕ್ತಾಯ ಮಾಡಬೇಕು.

ಬೆಂಗಳೂರು-ಹುಬ್ಬಳ್ಳಿ ನಡುವೆ ವಾರಾಂತ್ಯ ವಿಶೇಷ ರೈಲು ಬೆಂಗಳೂರು-ಹುಬ್ಬಳ್ಳಿ ನಡುವೆ ವಾರಾಂತ್ಯ ವಿಶೇಷ ರೈಲು

Hubballi-Dharwad Municipal Corporation Elections Campaign Will Come To End On Sep 1

ಚುನಾವಣೆಯನ್ನು ಮುಕ್ತ, ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 1ರ ಬೆಳಗ್ಗೆ 7 ಗಂಟೆಯ ನಂತರ ರಾಜಕೀಯ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಯ ಪರವಾಗಿ ಯಾರೇ ಇತರರು ಯಾವುದೇ ವಿಧದಲ್ಲಿ ಬಹಿರಂಗ ಪ್ರಚಾರವನ್ನು ನಡೆಸುವಂತಿಲ್ಲ ಎಂದು ಸೂಚಿಸಲಾಗಿದೆ.

ಎನ್‌ಎಂಪಿಗೆ ಹುಬ್ಬಳ್ಳಿ ಏರ್‌ಪೋರ್ಟ್‌ ಆಯ್ಕೆ; ಹೇಗಿರಲಿದೆ ಖಾಸಗೀಕರಣ?ಎನ್‌ಎಂಪಿಗೆ ಹುಬ್ಬಳ್ಳಿ ಏರ್‌ಪೋರ್ಟ್‌ ಆಯ್ಕೆ; ಹೇಗಿರಲಿದೆ ಖಾಸಗೀಕರಣ?

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಧಾರವಾಡ ಜಿಲ್ಲೆಯ ಧಾರವಾಡ, ಹುಬ್ಬಳ್ಳಿ ಹಾಗೂ ಹುಬ್ಬಳ್ಳಿ ನಗರ ತಾಲೂಕುಗಳಲ್ಲಿ ಸೆಪ್ಪೆಂಬರ್ 1ರ ಬೆಳಗ್ಗೆ 6 ಗಂಟೆಯಿಂದ ಸೆಪ್ಪೆಂಬರ್ 3ರ ಸಾಯಂಕಾಲ 6 ಗಂಟೆಯವರೆಗೆ ಸಿ. ಆರ್. ಪಿ. ಸಿ ಕಾಯ್ದೆ 1973ರ ಕಲಂ 144 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ, 1963ರ ಕಲಂ 35ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬಹಿರಂಗ ಪ್ರಚಾರ ಅಂತ್ಯಗೊಂಡ ಮೇಲೆಯೂ ಮಹಾನಗರಪಾಲಿಕೆ ವಾರ್ಡ್‌ ವ್ಯಾಪ್ತಿಯಲ್ಲಿರುವ ಕಲ್ಯಾಣ ಮಂಟಪ, ಸಮುದಾಯಭವನ ಹಾಗೂ ಇತರೆ ಸ್ಥಳಗಳಲ್ಲಿ ನಗರ ಸ್ಥಳೀಯ ಸಂಸ್ಥೆ ವಾರ್ಡಿನ ವ್ಯಾಪ್ತಿಗೆ ಒಳಪಡದ ವ್ಯಕ್ತಿಗಳು ಇದ್ದಾರೆಯೇ ಎಂಬ ಬಗ್ಗೆ ತಪಾಸಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಒಟ್ಟು ಮತದಾರರು; ಮಹಾನಗರ ಪಾಲಿಕೆಯ 82 ವಾರ್ಡ್‍ಗಳಲ್ಲಿ 4,06,280 ಪುರುಷ ಹಾಗೂ 4,11,092 ಮಹಿಳಾ ಮತ್ತು 86 ಇತರೆ ಸೇರಿ ಒಟ್ಟು 8,17,458 ಮತದಾರರು ಇದ್ದಾರೆ. 82 ವಾರ್ಡ್‍ಗಳಲ್ಲಿ ಮತದಾನ ಮಾಡಲು ಒಟ್ಟು 842 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ರಜೆ ಘೋಷಣೆ; ಮಹಾನಗರ ಪಾಲಿಕೆ ಚುನಾವಣೆಗೆ ಸೆಪ್ಟೆಂಬರ್ 3ರ ಶುಕ್ರವಾರ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆವರೆಗೆ ಮತದಾನ ಮಾಡಲು ಅವಕಾಶವಿದೆ. ಮತದಾನಕ್ಕೆ ಅನುಕೂಲವಾಗುವಂತೆ ರಜೆ ಘೋಷಣೆ ಮಾಡಲಾಗಿದೆ.

ಮತದಾನ ದಿನ ಮಹಾನಗರ ಪಾಲಿಕೆಯ ವ್ಯಾಪ್ತಿಯ ಸರ್ಕಾರಿ ಕಚೇರಿಗಳ ನೌಕರರಿಗೆ ಸಾರ್ವತ್ರಿಕ ರಜೆಯನ್ನು ಮತ್ತು ಖಾಸಗಿ ಹಾಗೂ ಇತರ ನೌಕರರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ.

ಮಹಾನಗರ ವ್ಯಾಪ್ತಿಯ ಎಲ್ಲಾ ಸರಕಾರಿ, ಅರೆ ಸರಕಾರಿ ಇಲಾಖೆ, ಖಾಸಗಿ ಉದ್ಯೋಗದಾತರು ಈ ಕುರಿತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದ್ದಾರೆ.

ಮತ ಎಣಿಕೆ; ಮಹಾನಗರ ಪಾಲಿಕೆ ಚುನಾವಣೆ ಮತಗಳ ಎಣಿಕೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಮುಖ್ಯ ಕಟ್ಟಡದಲ್ಲಿ ಸೆಪ್ಟೆಂಬರ್ 6 ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗುತ್ತದೆ. ಪ್ರತಿ ಒಬ್ಬ ಚುನಾವಣಾಧಿಕಾರಿಗಳಿಗೆ 4 ಟೇಬಲ್‍ಗಳನ್ನು ನಿಗದಿಪಡಿಸಲಾಗಿದ್ದು, ಮತ ಎಣಿಕೆ ಕೇಂದ್ರಕ್ಕೆ ಅಭ್ಯರ್ಥಿ ಅಥವಾ ಮತ ಎಣಿಕೆ ಏಜೆಂಟ್‍ರಿಗೆ ಮಾತ್ರ ಪ್ರವೇಶವಿದೆ.

ಮತ ಎಣಿಕೆ ಪೂರ್ಣಗೊಂಡು ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಮಹಾನಗರ ಪಾಲಿಕೆಯ ಚುನಾವಣಾ ಪ್ರಕ್ರಿಯೆಯು ಮುಕ್ತಾಯಗೊಳ್ಳುತ್ತದೆ. ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆಯೂ ಅಂತ್ಯಗೊಳ್ಳಲಿದೆ.

English summary
Election campaign will come to end on September 1 morning for Hubballi-Dharwad municipal corporation elections 2021. Elections will be held for 82 ward on September 3.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X