New Year 2024: ಹುಬ್ಬಳ್ಳಿ-ಧಾರವಾಡದಲ್ಲಿ ಹೇಗಿದೆ ಸಿದ್ಧತೆ, ಪೊಲೀಸರು ಕೈಗೊಂಡ ಕ್ರಮಗಳೇನು?
ಹುಬ್ಬಳ್ಳಿ, ಡಿಸೆಂಬರ್ 31: 2024ರ ಹೊಸ ವರ್ಷವನ್ನು ಸ್ವಾಗತಿಸಿಲು ಇಡೀ ಕರುನಾಡೆ ಸಜ್ಜಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ ಭಾರಿ ಜನದಟ್ಟಣೆ, ಆಚರಣೆ ಕಂಡು ಬರಲಿದೆ. ಈ ಸಂಬಂಧ ಪೊಲೀಸರು ಕಟ್ಟುನಿಟ್ಟಿನ ಎಚ್ಚರ ವಹಿಸಿದ್ದಾರೆ. ಹಾಗಾದರೆ ಉತ್ತರ ಕರ್ನಾಟಕದಲ್ಲಿ ಹೇಗಿದೆ ಸಂಭ್ರಮಾಚರಣೆ?, ಬಿಗಿ ಭದ್ರತೆಯ ಮಾಹಿತಿ ಇಲ್ಲಿದೆ.
ಹೊಸ ವರ್ಷಾಚರಣೆಗೆ ಹುಬ್ಬಳ್ಳಿ ಧಾರವಾಡ ಅವಳಿನಗರ ಸೇರಿದಂತೆ ಧಾರವಾಡ ಜಿಲ್ಲೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ. ನಗರದ ಪ್ರಮುಖ ಹೋಟೆಲ್‌ಗಳು ಹಾಗೂ ಕೆಲವು ಬಡಾವಣೆಗಳಲ್ಲಿ ಮನರಂಜನೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೇಕರಿ ಅಂಗಡಿಗಳಲ್ಲಿ ತರಹೇವಾರಿ ಕೇಕ್‌ಗಳು ಸಿದ್ಧಗೊಂಡಿವೆ. ಈ ನಡುವೆ ಪೊಲೀಸ್ ಇಲಾಖೆ ಸಹ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

ಧಾರವಾಡ ನಗರದ ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ವಿಶೇಷ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕುಟುಂಬದವರಿಗೆ, ಸ್ನೇಹಿತರ ಗುಂಪಿಗೆ, ಯುವ ಜೋಡಿಗಳಿಗೆ ಹಾಗೂ ವೈಯಕ್ತಿಕವಾಗಿ ಹೋಗುವ ವರಿಗೂ ಅವಕಾಶ ಕಲ್ಪಿಸಲಾಗಿದೆ.
ಹೋಟೆಲ್ ಬಾಡಿಗೆ ದರ ವಿವರ
ನಗರದ ಕೆಲವು ಹೋಟೆಲ್‌ಗಳಲ್ಲಿ ಒಬ್ಬರಿಗೆ ₹1,2 ಹಾಗೂ ₹3 ಸಾವಿರದವರೆಗೆ ಶುಲ್ಕ ನಿಗದಿಪಡಿಸಿ, ಊಟ ಹಾಗೂ ವಿವಿಧ ಭಕ್ಷ್ಯಗಳ ವ್ಯವಸ್ಥೆ ಮಾಡಲಾಗಿದೆ. ಇನ್ನು ಕೆಲ ಹೋಟೆಲ್‌ಗಳಲ್ಲಿ ಪ್ರವೇಶ ಶುಲ್ಕ ₹600-₹1000ದವರೆಗೆ ನಿಗದಿಪಡಿಸಿ, ಹೊರಗಡೆಯಿಂದ ಊಟೋಪಾಹಾರ ತರಲು ಅವಕಾಶ ನೀಡಲಾಗಿದೆ.
ಹೋಟೆಲ್ ಹೊರಾಂಗಣ ಹಾಗೂ ಒಳಾಂಗಣದಲ್ಲಿ ರೇನ್ ಡ್ಯಾನ್ಸ್, ಡಿಜೆ ವ್ಯವಸ್ಥೆ ಮಾಡಿ, ಬಣ್ಣಬಣ್ಣದ ಬಲೂನ್‌ಗಳನ್ನು ಕಟ್ಟಿ, ದೀಪಾಲಂಕಾರ ಮಾಡಲಾಗಿದೆ. ಕಾಲೇಜು ವಿದ್ಯಾರ್ಥಿಗಳು, ಯುವಕರು ಹಾಗೂ ಕುಟುಂಬದ ಕೆಲವು ಸದಸ್ಯರು ಈಗಾಗಲೇ ಹೋಟೆಲ್, ರೆಸಾರ್ಟ್‌ಗಳನ್ನು ಮುಂಗಡವಾಗಿ ಕಾಯ್ದಿರಿಸಿದ್ದಾರೆ. ಕೆಲವು ಬಡಾವಣೆಗಳ ಯುವಕರು ರಾತ್ರಿ 12ರವರೆಗೂ ಡಿಜೆ ಹಚ್ಚಿ ಕುಣಿದು ಸಂಭ್ರಮಿಸಿ, ಹೊಸ ವರ್ಷವನ್ನು ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಬಗೆಬಗೆಯ ಸಿಡಿಮದ್ದುಗಳನ್ನು ಆಗಸದಲ್ಲಿ ಹಾರಿಸಿ ಸಂಭ್ರಮಿಸಲಿದ್ದಾರೆ.
ಬೇಕರಿಗಳಲ್ಲಿ ಖರೀದಿ ಜೋರಾಗಿದೆ
ಬಹುತೇಕ ಬೇಕರಿ ಅಂಗಡಿಗಳಲ್ಲಿ ವೈವಿಧ್ಯಮಯ ಕೇಕ್‌ಗಳನ್ನು ಸಿದ್ಧಪಡಿಸಿ, ಒಪ್ಪವಾಗಿ ಜೋಡಿಸಿಡಲಾಗಿದೆ. ಗ್ರಾಹಕರು ತಮಗಿಷ್ಟವಾದ ವಿನ್ಯಾಸದ ಮಾದರಿ ತಿಳಿಸಿದರೆ, ಅದರಂತೆ ತಯಾರಿಸಿ ಕೊಡುತ್ತಿದ್ದಾರೆ. ಚಾಕಲೆಟ್, ಫೈನಾಪಲ್, ಸ್ಟ್ರಾಬೇರಿ, ವೆನಿಲ್ಲಾ, ಬಟರ್ ಸ್ಕಾಚ್, ಪಿಸ್ತಾ, ಕೋಲ್ಡ್ ಕೇಕ್‌ಗಳ ಖರೀದಿಯೂ ಜೋರಾಗಿ ನಡೆಯಲಿದೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸರು ಕಟ್ಟೆಚ್ಚರ ವಹಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಕಮಿಷನರ್ ರೇಣುಕಾ ಸುಕುಮಾರ್ ಅವರು ಡಿಸಿಪಿ, ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳ ಜೊತೆ ಚರ್ಚಿಸಿ, ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ವಾಹನ ವ್ಯವಸ್ಥೆ
ನಗರದ ಚನ್ನಮ್ಮ ವೃತ್ತ, ಕೊಪ್ಪೀಕರ್ ರಸ್ತೆ, ದುರ್ಗದ ಬೈಲ್ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಹಾಗೂ ಧಾರ್ಮಿಕ ಸ್ಥಳಗಳಿರುವ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಲು ನಿರ್ಧರಿಸಲಾಗಿದೆ. ರಸ್ತೆ ಅಪಘಾತ ತಪ್ಪಿಸಲೆಂದು ಮದ್ಯಪಾನ ಮಾಡಿದವರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲು ಕಾರ್ಯಕ್ರಮ ಆಯೋಜಿಸಿದವರಿಗೆ ವಾಹನದ ವ್ಯವಸ್ಥೆ ಮಾಡಲು ಪೊಲೀಸ್ ಇಲಾಖೆ ಸೂಚಿಸಿದೆ.
ಹೆಚ್ಚುವರಿ ಭದ್ರತೆಗೆ ಪೊಲೀಸ್ ಯೋಜನೆ
ನೂತನ ವರ್ಷಾಚರಣೆ ನಡೆಯಲಿರುವ ಪ್ರಮುಖ ಹೋಟೆಲ್‌ಗಳ ಎದುರು ಪೊಲೀಸ್ ಸಿಬ್ಬಂದಿ ನಿಯೋಜಿಸಿ ಹೆಚ್ಚುವರಿ ಭದ್ರತೆ ನಿಯೋಜನೆಗೆ ಪೊಲೀಸ್ ಅಧಿಕಾರಿಗಳು ಮುಂದಾಗಿದ್ದಾರೆ.
ಈಗಾಗಲೇ ಹೋಟೆಲ್ ಮಾಲೀಕರ ವ್ಯವಸ್ಥಾಪಕರ ಸಭೆ ಕರೆದು ಭದ್ರತಾ ಸಿಬ್ಬಂದಿ ನಿಯೋಜಿಸಿಕೊಳ್ಳಲು ಹೋಟೆಲ್ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಲು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಠಾಣಾ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ವರ್ಷಾಚರಣೆ ನಡೆಯುತ್ತಿದೆ ಎನ್ನುವ ಮಾಹಿತಿ ಸಂಗ್ರಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಇನ್‌ಸ್ಪೆಕ್ಟರ್‌ಗಳಿಗೆ ಸೂಚಿಸಲಾಗಿದೆ' ಎಂದರು.
ಮಾದಕ ವಸ್ತು ಸೇವನೆ ವಿರುದ್ಧ ಕಟ್ಟೆಚ್ಚರ
ಪಾರ್ಟಿಗೆ ಬರುವವರ ಹಾಗೂ ಗಾಂಜಾ ಸೇವನೆ ಮಾಡುವವರ ಮೇಲೂ ವಿಶೇಷ ಗಮನ ಇಡಲಾಗುವುದು. ಮಾದಕ ವಸ್ತುಗಳ ಸೇವನೆ ಮಾರಾಟ ನಿಯಂತ್ರಿಸಲು ಅನುಮಾನಾಸ್ಪದ ವ್ಯಕ್ತಿಗಳನ್ನು ಪರೀಕ್ಷೆಗೆ ಒಳಪಡಿಸಿ ಅವುಗಳನ್ನು ಸೇವನೆ ಮಾಡಿರುವುದು ಖಾತ್ರಿಯಾದರೆ ಪ್ರಕರಣ ದಾಖಲಿಸಲಾಗುವುದು ಹು-ಧಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ
ಹೆಣ್ಣುಮಕ್ಕಳನ್ನು ಚುಡಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಠಾಣಾ ವ್ಯಾಪ್ತಿಯಲ್ಲಿ ವಿಶೇಷ ತಂಡ ರಚಿಸಲಾಗಿದ್ದು ರಾತ್ರಿವರೆಗೂ ಗಸ್ತು ತಿರುಗಲಿದೆ' ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ತಿಳಿಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications