ಕಿಮ್ಸ್ ವೈದ್ಯರಿಗೆ ಎಚ್ಚರಿಕೆ ನೀಡಿದ ವಿನಯ್ ಕುಲಕರ್ಣಿ

By: ಹುಬ್ಬಳ್ಳಿ ಪ್ರತಿನಿಧಿ
Subscribe to Oneindia Kannada

ಹುಬ್ಬಳ್ಳಿ, ಏಪ್ರಿಲ್, 26: ಕಿಮ್ಸ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಸಾಕಷ್ಟು ವೈದ್ಯರು ಆಸ್ಪತ್ರೆ ವೇಳೆಯಲ್ಲಿ ಹೊರಗಡೆ ಸೇವೆ ಸಲ್ಲಿಸುತ್ತಿರುವ ಬಗ್ಗೆ ದೂರುಗಳಿದೆ. ಅಂಥವರನ್ನು ಗುರುತಿಸಿ ಒಂದು ವರದಿ ನೀಡಿ. ಇಲ್ಲವೆ ನೀವೇ ಅಂಥರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ವರ್ಗಾವಣೆ ಮಾಡಿ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಕಿಮ್ಸ್ ಆಸ್ಪತ್ರೆ ಹಿರಿಯ ವೈದ್ಯರು ಮತ್ತು ಅಧಿಕಾರಿಗಳ ಸಭೆ ನಡೆಸಿದ ಕುಲಕರ್ಣಿ, ಕಿಮ್ಸ್ ಆಸ್ಪತ್ರೆಯಲ್ಲಿ ಸಾಕಷ್ಟು ಸಮಸ್ಯೆಗಳು ಎದ್ದು ಕಾಣುತ್ತಿವೆ. ಇವುಗಳಿಗೆ ಮುಕ್ತಿ ಹಾಡಿ ಇದನ್ನು ಉತ್ತಮ ಆಸ್ಪತ್ರೆಯನ್ನಾಗಿ ಮಾಡುವ ಸಂಕಲ್ಪ ಮಾಡಲಾಗಿದ್ದು, ವೈದ್ಯರು ಸೇರಿದಂತೆ ಜನಪ್ರತಿನಿಧಿಗಳ ಸಹಕಾರ ಅವಶ್ಯವಿದೆ. ಇದಕ್ಕಾಗಿ ಜನಪ್ರತಿನಿಧಿಗಳು ಹಾಗೂ ವೈದ್ಯರ ತಂಡ ಮಾಡಿಕೊಂಡು ಕಿಮ್ಸ್ ಅಭಿವೃದ್ಧಿಗಾಗಿ ಯೋಜನೆ ರೂಪಿಸಲಾಗುವುದು ಎಂದರು.['ಪ್ರತಿ ಕುಟುಂಬಕ್ಕೆ ಕನಿಷ್ಠ 12 ಬಿಂದಿಗೆ ನೀರು ನೀಡಿ']

hubballi

ಕಿಮ್ಸ್ ಆಸ್ಪತ್ರೆಯನ್ನು ಬೆಂಗಳೂರಿನ ಜಯದೇವ ಆಸ್ಪತ್ರೆ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ತಿಳಿಸಿದ್ದಾರೆ.[ಕುಡಿಯಾಕ್ ತೊಟ್ ನೀರಿಲ್ಲ,, ಮುಂದ್ ಕತಿ ಹೆಂಗ್ರಿಪಾ?]

ಕಿಮ್ಸ್ ಸ್ವಚ್ಛತೆ, ಔಷಧಿ, ಕಿಮ್ಸ್ ವೈದ್ಯರು ಹೊರಗಡೆ ಸೇವೆ ಮಾಡುವುದು ಸೇರಿದಂತೆ ಸಾಕಷ್ಟು ಆರೋಪಗಳು ಕೇಳಿಬರುತ್ತಿವೆ. ಹೀಗಾಗಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಔಷಧಿ ಖರೀದಿ ಹಾಗೂ ರೋಗಿಗಳಿಗೆ ವಿತರಣೆಯಲ್ಲಿ ಲೋಪಗಳು ಕಂಡು ಬರುತ್ತಿರುವುದರಿಂದ ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಚಿವ ಕುಲಕರ್ಣಿ ತಿಳಿಸಿದರು.

hubballi

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Hubballi: Hubballi Karnataka Institute of Medical Sciences (KIMS) will develop like Sri Jayadeva Institute of Cardiovascular Sciences and Research, said by distict in charge minister Vinay Kulkarni on Monday, April 25.
Please Wait while comments are loading...