ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಐಟಿ ಸ್ಥಾಪನೆ ರೇಸ್‌ನಲ್ಲಿ ಗೆದ್ದ ಧಾರವಾಡ

|
Google Oneindia Kannada News

ಧಾರವಾಡ, ಸೆಪ್ಟೆಂಬರ್, 09 : ಕರ್ನಾಟಕದಲ್ಲಿ ಐಐಟಿ ಎಲ್ಲಿ ಸ್ಥಾಪನೆಯಾಗಲಿದೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಭಾರತೀಯ ತಂತ್ರಜ್ಞಾನ ಸಂಸ್ಥೆಯನ್ನು ಧಾರವಾಡದಲ್ಲಿ ಸ್ಥಾಪನೆ ಮಾಡಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಒಪ್ಪಿಗೆ ನೀಡಿದೆ. ಎರಡು ದಿನದಲ್ಲಿ ಈ ಕುರಿತ ಆದೇಶ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರ 2015-16ನೇ ಸಾಲಿನ ಬಜೆಟ್‌ನಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯನ್ನು ಕರ್ನಾಟಕದಲ್ಲಿ ಸ್ಥಾಪಿಸಲಾಗುತ್ತದೆ ಎಂದು ಘೋಷಿಸಿತ್ತು. ಕರ್ನಾಟಕ ಸರ್ಕಾರ ಹುಬ್ಬಳ್ಳಿ-ಧಾರವಾಡ, ರಾಯಚೂರು, ಮೈಸೂರು ಜಿಲ್ಲೆಗಳಲ್ಲಿ ಸ್ಥಾಪನೆ ಮಾಡಬಹುದು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. [ಅಸಲಿಗೆ, ಕರ್ನಾಟಕಕ್ಕೆ ಐಐಟಿ ಅಗತ್ಯವಿದೆಯಾ?]

ಐಐಟಿ ಸ್ಥಾಪನೆ ಕುರಿತು ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕಾರಿ ಆರ್‌. ಸುಬ್ರಮಣ್ಯಂ ನೇತೃತ್ವದ ಸಮಿತಿ ಧಾರವಾಡದಲ್ಲಿ ಐಐಟಿ ಸ್ಥಾಪಿಸುವಂತೆ ಶಿಫಾರಸು ಮಾಡಿದೆ. ಇದಕ್ಕೆ ಸಚಿವಾಲಯ ಒಪ್ಪಿಗೆ ಕೊಟ್ಟಿದೆ. [ಧಾರವಾಡಕ್ಕೆ ಐಐಟಿ, ಇದು ಓದುಗರ ಅಭಿಪ್ರಾಯ]

ರಾಯಚೂರಿನಲ್ಲಿ ಐಐಟಿ ಸ್ಥಾಪನೆ ಮಾಡಬೇಕು ಎಂದು ಹಲವು ಹೋರಾಟಗಳು ನಡೆದಿದ್ದವು. ಐಐಟಿ ಧಾರವಾಡಕ್ಕೆ ಸಿಗಲಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ರಾಯಚೂರಿನಲ್ಲಿ ಮಂಗಳವಾರ ರಾತ್ರಿಯೇ ಹೋರಾಟಗಳು ಆರಂಭವಾಗಿವೆ. ಐಐಟಿಯನ್ನು ರಾಯಚೂರಿಗೆ ಕೊಡಿ ಎಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ. ಚಿತ್ರಗಳಲ್ಲಿ ವಿವರಗಳು.....

ಪ್ರಹ್ಲಾದ್ ಜೋಶಿ ಘೋಷಣೆ

ಪ್ರಹ್ಲಾದ್ ಜೋಶಿ ಘೋಷಣೆ

ಧಾರವಾಡ ಸಂಸದ ಮತ್ತು ಕರ್ನಾಟಕ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಧಾರವಾಡದಲ್ಲಿ ಐಐಟಿ ಸ್ಥಾಪನೆಯಾಗಲಿದೆ. ಈ ಕುರಿತು ಆದೇಶ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ ಎಂದು ಮಂಗಳವಾರ ರಾತ್ರಿ ಬರೆದಿದ್ದಾರೆ.

ಆ.28ರಂದು ಸ್ಥಳ ಪರಿಶೀಲನೆ

ಆ.28ರಂದು ಸ್ಥಳ ಪರಿಶೀಲನೆ

ಕರ್ನಾಟಕದಲ್ಲಿ ಐಐಟಿಯನ್ನು ಎಲ್ಲಿ ಸ್ಥಾಪಿಸಬಹುದು? ಎಂದು ನವದೆಹಲಿಯಿಂದ ಆಗಮಿಸಿದ್ದ ತಜ್ಞರ ತಂಡ ಮೂರು ಜಿಲ್ಲೆಗಳಲ್ಲಿ ಆ.28ರಂದು ಸ್ಥಳ ಪರಿಶೀಲನೆ ನಡೆಸಿತ್ತು. ಕರ್ನಾಟಕ ಸರ್ಕಾರ ಮೈಸೂರು, ಹುಬ್ಬಳ್ಳಿ-ಧಾರವಾಡ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಐಐಟಿ ಸ್ಥಾಪನೆ ಮಾಡಬಹುದು ಎಂದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಮೂರು ಜಿಲ್ಲೆಗಳಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲಾಗಿತ್ತು.

ರಾಯಚೂರಿನಲ್ಲಿ ಐಐಟಿಗಾಗಿ ಬೇಡಿಕೆ

ರಾಯಚೂರಿನಲ್ಲಿ ಐಐಟಿಗಾಗಿ ಬೇಡಿಕೆ

ರಾಯಚೂರಿನಲ್ಲಿ ಐಐಟಿ ಸ್ಥಾಪನೆಯಾಗಬೇಕು ಎಂಬುದು ಬೇಡಿಕೆಯಾಗಿತ್ತು. ರಾಯಚೂರಿನಲ್ಲೇ ಐಐಟಿ ಸ್ಥಾಪನೆಗೆ ಒತ್ತಾಯಿಸಿ ರಾಯಚೂರು ಬಂದ್ ನಡೆಸಲಾಗಿತ್ತು. ಐಐಟಿ ಧಾರವಾಡಕ್ಕೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ರಾಯಚೂರಿನಲ್ಲಿ ಪ್ರತಿಭಟನೆಗಳು ಆರಂಭವಾಗಿವೆ.

ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದರು

ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದರು

ಕರ್ನಾಟಕದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯನ್ನು ರಾಯಚೂರಿನಲ್ಲಿ ಸ್ಥಾಪನೆ ಮಾಡಬೇಕು ಎಂದು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದರು. 'ಐಐಟಿ ಸ್ಥಾಪನೆಗೆ 400 ಎಕರೆ ಭೂಮಿಯನ್ನು ರಾಯಚೂರಿನಲ್ಲಿ ಕಾಯ್ದಿರಿಸಲಾಗಿದೆ. ರಾಜ್ಯ ಸರ್ಕಾರ ಮೂರು ಜಿಲ್ಲೆಗಳ ಹೆಸರು ಸೂಚಿಸುವ ಬದಲು ಕೇಂದ್ರಕ್ಕೆ ರಾಯಚೂರು ಹೆಸರನ್ನು ಮಾತ್ರ ಕಳುಹಿಸಬೇಕಿತ್ತು' ಎಂದು ಅವರು ಹೇಳಿದ್ದರು.

ಧಾರವಾಡ ಮೆಚ್ಚಿಕೊಂಡ ತಂಡ

ಧಾರವಾಡ ಮೆಚ್ಚಿಕೊಂಡ ತಂಡ

ಐಐಟಿ ಸ್ಥಾಪನೆ ಕುರಿತು ಪರಿಶೀಲನೆ ನಡೆಸಲು ಆಗಿಮಿಸಿದ್ದ ತಂಡಕ್ಕೆ ಧಾರವಾಡ ಜಿಲ್ಲಾಡಳಿತ ಮುಮ್ಮಿಗಟ್ಟಿ ಬಳಿ ಐಐಟಿಗಾಗಿ 500 ಮತ್ತು ಹೆಚ್ಚುವರಿಯಾಗಿ 460 ಎಕರೆ ಜಮೀನು ಮೀಸಲಿಟ್ಟಿರುವುದಾಗಿ ತಿಳಿಸಿತ್ತು. ಧಾರವಾಡದ ಹವಾಗುಣ ಹಾಗೂ ಮೂಲಸೌಕರ್ಯವನ್ನು ಸಮಿತಿಯು ಬಹುವಾಗಿ ಮೆಚ್ಚಿಕೊಂಡಿತ್ತು. ಧಾರವಾಡದಲ್ಲಿ ಸ್ಥಾಪನೆ ಮಾಡಬಹುದು ಎಂದು ಶಿಫಾರಸು ಮಾಡಿತ್ತು.

ಐಐಟಿಗಾಗಿ ಭಾರೀ ಲಾಬಿ ನಡೆದಿತ್ತು

ಐಐಟಿಗಾಗಿ ಭಾರೀ ಲಾಬಿ ನಡೆದಿತ್ತು

ಐಐಟಿಯನ್ನು ನಮ್ಮ ಜಿಲ್ಲೆಯಲ್ಲಿ ಸ್ಥಾಪಿಸುವಂತೆ ವಿವಿಧ ಸಂಸದರು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಬೆಳಗಾವಿ, ಚಿತ್ರದುರ್ಗ, ಮೈಸೂರು, ದಾವಣಗೆರೆಯಲ್ಲಿ ಐಐಟಿ ಸ್ಥಾಪನೆಯಾಗಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಹಾಸನದಲ್ಲಿ ಐಐಟಿ ಸ್ಥಾಪನೆಯಾಗಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದ್ದರು.

ಜಗದೀಶ್ ಶೆಟ್ಟರ್ ಸಂಸತ

ಜಗದೀಶ್ ಶೆಟ್ಟರ್ ಸಂಸತ

'ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಐಐಟಿ ಬರುತ್ತಿರುವುದು ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ರಾಜ್ಯದ ಯುವ ಜನತೆಯ ಬಹುದಿನಗಳ ಕನಸು ನನಸಾಗಲಿದೆ' ಎಂದು ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಶಾಸಕ ಮತ್ತು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.

English summary
IIT in Karnataka : Indian Institute of Technology (IIT) will established in Dharwad. The IIT was sanctioned by the Union government in 2015-16 budget. Karnataka government had recommended Hubballi-Dharwad, Mysuru and Raichur for setting up the IIT.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X